ಬೆಂಗಳೂರು: ಕರ್ನಾಟಕ ಕರಕುಶಲ ವಸ್ತುಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿಯವರ (Beluru Raghavendra Shetty) ಮನೆಯನ್ನು ಬ್ಯಾಂಕ್ ಹರಾಜಿಗಿಟ್ಟಿದೆ. ಆದರೆ ಹರಾಜಿಗೂ ಮುನ್ನವೇ ಬ್ಯಾಂಕ್ (Bank) ಕಾವಲಿಗಿಟ್ಟಿದ್ದ ಸೆಕ್ಯುರಿಟಿ ಗಾರ್ಡ್ ಕಣ್ತಪ್ಪಿಸಿ ಅಕ್ರಮ ಪ್ರವೇಶ ಮಾಡಿದ್ದಾರೆ.
ಬೇಳೂರು ರಾಘವೇಂದ್ರ ಶೆಟ್ಟಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 5 ಕೋಟಿ ರೂ.ಗೂ ಅಧಿಕ ಸಾಲ (Loan) ಪಡೆದಿದ್ದರು. ಸಾಲವನ್ನು ಮರುಪಾವತಿ ಮಾಡದ ಹಿನ್ನೆಲೆ ನ್ಯಾಯಾಲಯ ರಾಘವೇಂದ್ರ ಅವರ ಮನೆಯನ್ನು ಬ್ಯಾಂಕ್ ವಶಕ್ಕೆ ನೀಡಿತ್ತು. ಇದೀಗ ಬ್ಯಾಂಕ್ 3 ದಿನಗಳಲ್ಲಿ ಮನೆಯನ್ನು ಹರಾಜಿಗಿಡಲು ಮುಂದಾಗಿದೆ.
Advertisement
Advertisement
ಸಂಜಯನಗರದ ಡಾಲರ್ಸ್ ಕಾಲೋನಿಯಲ್ಲಿ ಎಸ್‌ಎಂಸಿ ಬೆವರ್ಲಿ ಅಪಾರ್ಟ್ಮೆಂಟ್‌ನಲ್ಲಿ ರಾಘವೇಂದ್ರ ಅವರ ಈ ಫ್ಲ್ಯಾಟ್ ಇದೆ. ರಾಘವೇಂದ್ರ ಮಾಡಿದ್ದ ಸಾಲ ಮರುಪಾವತಿ ಮಾಡದ ಹಿನ್ನೆಲೆ ನ್ಯಾಯಾಲಯ ಕಳೆದ ಡಿಸೆಂಬರ್‌ನಲ್ಲಿ ಆದೇಶ ನೀಡಿ ಮನೆಯನ್ನು ಬ್ಯಾಂಕ್ ವಶಕ್ಕೆ ನೀಡಿದೆ. ಇದನ್ನೂ ಓದಿ: ಅನ್ಯಕೋಮಿನವರ ವ್ಯಾಪಾರಕ್ಕೆ ನಿರ್ಬಂಧ ಹೇರಿ – ಈಗ ಕಿಗ್ಗಾದಲ್ಲೂ ಧರ್ಮ ದಂಗಲ್
Advertisement
ಇದೀಗ ಬ್ಯಾಂಕ್ ವಶಕ್ಕೆ ಪಡೆದಿರುವ ಮನೆಯನ್ನು ಹರಾಜು ಹಾಕಲು ಸಿದ್ಧತೆ ನಡೆಸುತ್ತಿದೆ. ಆದರೆ ಈ ನಡುವೆ ಬುಧವಾರ ಮಧ್ಯರಾತ್ರಿ ರಾಘವೆಂದ್ರ ಶೆಟ್ಟಿ ಕಡೆಯವರು ಮನೆಗೆ ಹಾಕಲಾಗಿದ್ದ ಸೀಲ್ ಅನ್ನು ಒಡೆದು ಅಕ್ರಮವಾಗಿ ಪ್ರವೇಶ ಮಾಡಿದ್ದಾರೆ.
Advertisement
ಮನೆಯಲ್ಲಿ ಅಕ್ರಮ ಪ್ರವೇಶ ಮಾಡಿರುವುದನ್ನು ತಿಳಿದ ಪೊಲೀಸರು ಹಾಗೂ ಬ್ಯಾಂಕ್ ಅಧಿಕಾರಿಗಳು ಮನೆಯೊಳಗಿದ್ದವರಿಗೆ ಬಾಗಿಲು ತೆರೆಯುವಂತೆ ಸೂಚಿಸಿದ್ದಾರೆ. ಈ ವೇಳೆ ಮಹಿಳೆಯೊಬ್ಬರು ಬಾಗಿಲನ್ನು ತೆರೆದಿದ್ದಾರೆ. ಅವರನ್ನು ಬಲವಂತವಾಗಿ ಮನೆಯಿಂದ ಹೊರಹಾಕಲು ಪ್ರಯತ್ನಿಸಿದರೆ ಆತ್ಮಹತ್ಯೆಯ ಬೆದರಿಕೆ ಒಡ್ಡುತ್ತಿದ್ದಾರೆ.
ಇದೀಗ ಅತಿಕ್ರಮವಾಗಿ ಮನೆ ಪ್ರವೇಶ ಮಾಡಿರುವುದಕ್ಕೆ ಸಂಬಂಧಪಟ್ಟಂತೆ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್‌ಗೆ ಪ್ರತಿಷ್ಠಿತ ವರ್ಷದ ಗವರ್ನರ್ ಪ್ರಶಸ್ತಿ