ಲಂಡನ್: ಜೋ ರೂಟ್ ಇಂಗ್ಲೆಂಡ್ ತಂಡದ ಟೆಸ್ಟ್ ನಾಯಕತ್ವ ತೊರೆದ ಬಳಿಕ ಹೊಸ ನಾಯಕನ ಹುಡುಕಾಟದಲ್ಲಿ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಇದೆ. ಈ ನಡುವೆ ಇಂಗ್ಲೆಂಡ್ ತಂಡದಲ್ಲಿರುವ ಆಲ್‍ರೌಂಡರ್ ಬೆನ್ ಸ್ಟೋಕ್ಸ್‌ಗೆ ನಾಯಕನ ಪಟ್ಟ ಕಟ್ಟಬೇಕೆಂಬ ಕೂಗು ಕೇಳಿಬರುತ್ತಿದೆ.
Advertisement
5 ವರ್ಷಗಳ ಕಾಲ ಇಂಗ್ಲೆಂಡ್ ಟೆಸ್ಟ್ ತಂಡವನ್ನು ನಾಯಕನಾಗಿ ಮುನ್ನಡೆಸಿದ ಜೋ ರೂಟ್ ನಿನ್ನೆ ನಾಯಕತ್ವಕ್ಕೆ ಗುಡ್ ಬೈ ಹೇಳಿದರು. ಬಳಿಕ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ನೂತನ ನಾಯಕನನ್ನು ನೇಮಿಸುವ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದೆ. ಈ ನಡುವೆ ತಂಡದಲ್ಲಿರುವ ಆಲ್‍ರೌಂಡರ್ ಬೆನ್ ಸ್ಟೋಕ್ಸ್‌ರನ್ನು ನಾಯಕನ್ನಾಗಿ ನೇಮಿಸಬೇಕೆಂಬ ಅಭಿಪ್ರಾಯವನ್ನು ಮಾಜಿ ಆಟಗಾರರು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹಿಟ್‌ಮ್ಯಾನ್ ರೋಹಿತ್ ಶರ್ಮಾ ಬೆನ್ನೇರಿದ ಬ್ಯಾನ್ ಭೀತಿ
Advertisement
Advertisement
ಬೆನ್ ಸ್ಟೋಕ್ಸ್ ಹೊರತು ಪಡಿಸಿ ಇಂಗ್ಲೆಂಡ್ ತಂಡದಲ್ಲಿರುವ ಹಿರಿಯ ಆಟಗಾರ ಸ್ಟುವರ್ಟ್ ಬ್ರಾಡ್‍ಗೆ ನಾಯಕತ್ವ ವಹಿಸಬಹುದು ಎಂಬ ಅಭಿಪ್ರಾಯವು ಇದೆ. ಇದೀಗ ಆಸ್ಟ್ರೇಲಿಯಾ ತಂಡ ವೇಗಿ ಪ್ಯಾಟ್ ಕಮ್ಮಿನ್ಸ್‌ಗೆ ನಾಯಕತ್ವ ವಹಿಸಿಕೊಟ್ಟು ಯಶಸ್ವಿಯಾಗಿದೆ. ಹಾಗಾಗಿ ಇಂಗ್ಲೆಂಡ್ ತಂಡ ಕೂಡ ಬೌಲರ್‌ಗೆ ನಾಯಕತ್ವವನ್ನು ವಹಿಸಿ ಪ್ರಯೋಗ ನಡೆಸಲು ಮನಸು ಮಾಡಿದೆ ಎಂಬ ಮಾತು ಮೂಲಗಳಿಂದ ವರದಿಯಾಗಿದೆ. ಇದನ್ನೂ ಓದಿ: ಹಾರ್ದಿಕ್ ಪಾಂಡ್ಯ ಸ್ಟ್ರಾಂಗ್ ಕಮ್‍ಬ್ಯಾಕ್ – ಐಪಿಎಲ್‍ನಲ್ಲಿ ಬುಲೆಟ್ ಥ್ರೋ, ವಿಕೆಟ್ ಕಟ್
Advertisement
ಕ್ರಿಕೆಟ್ ಪಂಡಿತರ ಲೆಕ್ಕಾಚಾರದ ಪ್ರಕಾರ ಬೆನ್ ಸ್ಟೋಕ್ಸ್ ಉತ್ತಮ ಆಯ್ಕೆ ಎಂಬ ಮಾತು ಕೇಳಿ ಬರುತ್ತಿದೆ. ಇದಕ್ಕೆ ಪ್ರಮುಖ ಕಾರಣ ಸ್ಟೋಕ್ಸ್ ತಂಡದಲ್ಲಿ ಉತ್ತಮ ಆಟಗಾರನಾಗಿದ್ದು ಇನ್ನಷ್ಟು ಕಾಲ ತಂಡದಲ್ಲಿ ಖಾಯಂ ಸದಸ್ಯನಾಗಿ ಇರುವ ಸಾಮರ್ಥ್ಯವಿದೆ. ಸ್ಟೋಕ್ಸ್ ಈಗಾಗಲೇ 79 ಟೆಸ್ಟ್ ಪಂದ್ಯಗಳಿಂದ 26 ಅರ್ಧಶತಕ, 11 ಶತಕ, 1 ದ್ವೀಶತಕ ಸಹಿತ 5,061 ರನ್ ಮತ್ತು 174 ವಿಕೆಟ್ ಕಿತ್ತು ಮಿಂಚಿದ್ದಾರೆ.