– ಮೊಬೈಲ್ ವೈನ್ ಶಾಪ್ ಗಳಿಗೆ ಸರ್ಕಾರ ಚಿಂತನೆ
ಬೆಂಗಳೂರು: ಮನೆ ಬಾಗಿಲಿಗೆ ಮದ್ಯ ಪೂರೈಕೆ ಮಾಡಲು ಚಿಂತನೆ ಮಾಡಲಾಗಿದೆ. ಕೆಲವು ಕಡೆ ಮದ್ಯದ ಅಂಗಡಿ ದೂರ ಇರುತ್ತೆ. ಕೆಲವು ಕಡೆ ಮದ್ಯದ ಅಂಗಡಿಗಳೇ ಇರಲ್ಲ. ಇಂಥಾ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಯೋಚನೆ ಮಾಡಲಾಗಿದ್ದು, ಮನೆ ಬಾಗಿಲಿಗೆ ಮದ್ಯ ಪೂರೈಸೋ ಚಿಂತನೆ ಕೂಡ ಇಲಾಖೆ ಮುಂದಿದೆ ಎಂದು ಅಬಕಾರಿ ಸಚಿವ ನಾಗೇಶ್ ಹೇಳಿದ್ದಾರೆ.
ಇಂದು ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊಬೈಲ್ ವೈನ್ ಶಾಪ್‍ಗಳಿಗೆ ಸರ್ಕಾರ ಚಿಂತನೆ ಮಾಡಿದೆ. ಎಲ್ಲೆಲ್ಲಿ ವೈನ್ ಶಾಪ್‍ಗಳಿವೆ. ಅಲ್ಲಿ ಸಂಚಾರಿ ವೈನ್ ಶಾಪ್‍ಗಳ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಆದಾಯ ಬರುತ್ತೆ ಎಂಬುದು ಸರ್ಕಾರದ ಚಿಂತನೆ. ತಾಂಡಾಗಳಲ್ಲಿ ಸಂಚಾರಿ ವೈನ್ ಶಾಪ್‍ಗಳ ವ್ಯವಸ್ಥೆ ಮಾಡಲು ಚಿಂತನೆ ಮಾಡಲಾಗಿದೆ ಎಂದು ತಿಳಿಸಿದರು.
Advertisement
Advertisement
ಗುಣಮಟ್ಟದ ಮದ್ಯ ಕೊಡಬೇಕು ಅನ್ನೋದು ನಮ್ಮ ಉದ್ದೇಶ. 2018-19 ರಲ್ಲಿ 19,750 ಸಾವಿರ ಕೋಟಿ ರೂ ಸಂಗ್ರಹ ಗುರಿ ನಿಗದಿ ಪಡಿಸಲಾಗಿತ್ತು. 19,943 ಕೋಟಿ ಗುರಿ ಸಾಧಿಸಿದ್ದೇವೆ. 2019-20 ನೇ ಸಾಲಿನಲ್ಲಿ 21 ಸಾವಿರ ಕೋಟಿ ಗುರಿ ನಿಗದಿ ಪಡಿಸಿದ್ದೇವೆ. ಪಾರ್ಟಿಗಳಲ್ಲಿ ಬೇರೆ ಕಡೆಯಿಂದ ಮದ್ಯ ತಂದು ಉಪಯೋಗಿಸುತ್ತಾರೆ. ಆಗಾಗಿ ಅಂತಹಾ ಪಾರ್ಟಿಗಳ ಮೇಲೆ ನಮ್ಮ ಅಧಿಕಾರಿಗಳು ದಾಳಿ ಮಾಡುತ್ತಾರೆ. ಗಾಂಜಾ ಮತ್ತು ಮಾದಕವಸ್ತುಗಳ ಬಳಕೆಗೆ ಕಡಿವಾಣ ಹಾಕುತ್ತೇವೆ ಎಂದು ಹೇಳಿದರು.
Advertisement
Advertisement
ಮದ್ಯಪಾನ ನಿಷೇಧದ ಬಗ್ಗೆ ಸರ್ಕಾರದ ಮುಂದೆ ಯಾವುದೇ ಚಿಂತನೆ ಇಲ್ಲ. ಈ ಹಿಂದೆ ಮಹಿಳೆಯರು ಪ್ರತಿಭಟನೆ ಮಾಡಿದ್ದು ನನಗೆ ಗೊತ್ತಿಲ್ಲ. ನಾನು ಬಹುಶಃ ಬಾಂಬೆಯಲ್ಲಿದ್ದೆ. ಆಗ ನನ್ನ ಫೋನ್ ಸ್ವಿಚ್ ಆಫ್ ಇತ್ತು ಎಂದು ಹೇಳಿದರು. ಇದೇ ವೇಲೆ ಡಿಕೆಶಿ ಬಗ್ಗೆ ಕೇಳಿದಾಗ, ಈ ಬಗ್ಗೆ ಸಿಎಂ ಆಗಲೇ ಮೂವರು ಸಚಿವರಿಗೆ ಹೇಳಿಕೆ ಕೊಡದಂತೆ ವಾರ್ನ್ ಮಾಡಿದ್ದಾರೆ. ಹೀಗಾಗಿ ಈ ಬಗ್ಗೆ ನಾನೇನು ಹೇಳಲ್ಲ ಎಂದು ತಿಳಿಸಿದರು.