ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಭಯಾನಕ ಸ್ಫೋಟ ನಡೆಸಲು ಸ್ಕೆಚ್ ಹಾಕಿದ್ದ ಐವರು ಶಂಕಿತ ಉಗ್ರರನ್ನ CCB ಮತ್ತು ಗುಪ್ತಚರ ಇಲಾಖೆಯ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಇದೀಗ ಶಂಕಿತ ಉಗ್ರರ (Suspected Terrorists) ಬಳಿ ವಾಕಿಟಾಕಿ ಪತ್ತೆಯಾಗಿದ್ದು ಹಲವು ರೀತಿಯ ಅನುಮಾನಗಳು ಹುಟ್ಟಿಕೊಂಡಿವೆ.
Advertisement
ಮೊಬೈಲ್ ಬಳಸಲು ಸಾಧ್ಯವಿಲ್ಲದ ಕಡೆ ಉಗ್ರರು ವಾಕಿಟಾಕಿ (Walkie-Talkie) ಬಳಕೆ ಮಾಡುತ್ತಾರೆ. ಕಾಡಿನಲ್ಲಿ ತರಬೇತಿ (Forest Training) ನಡೆಸುವಾಗ ವಾಕಿಟಾಕಿ ಬಳಕೆ ಮಾಡಲಾಗುತ್ತದೆ. ಒಂದು ವೇಳೆ ನಿರ್ದಿಷ್ಟ ಪ್ರದೇಶದಲ್ಲಿ ಅಥವಾ ಕಟ್ಟಡಗಳ ಮೇಲೆ ದಾಳಿ ಮಾಡಿದಾಗ ಜಾಮರ್ ಬಳಕೆ ಮಾಡಲಾಗುತ್ತದೆ. ಅಂತಹ ಸಂದರ್ಭದಲ್ಲಿ ಮೊಬೈಲ್ ಸಿಗ್ನಲ್‌ಗಳು ಕಾರ್ಯ ನಿರ್ವಹಿಸುವುದಿಲ್ಲ. ಈ ವೇಳೆ ವಾಕಿಟಾಕಿ ಬಳಕೆ ಮಾಡಲಾಗುತ್ತದೆ. ಇದನ್ನೂ ಓದಿ: ಶಂಕಿತ ಉಗ್ರರಿಗೆ ಆಶ್ರಯ ಕೊಟ್ಟಿದ್ದವರಿಗೆ ಶುರುವಾಯ್ತು ಸಂಕಷ್ಟ – ಮಾಲೀಕರ ಮೇಲೆ ಕೇಸ್?
Advertisement
Advertisement
ಸದ್ಯ ಸಿಸಿಬಿ ಅಧಿಕಾರಿಗಳು ಶಂಕಿತ ಉಗ್ರರ ಅಸಲಿ ಪ್ಲ್ಯಾನ್ ಏನು ಅನ್ನೋದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಎನ್‌ಐಎ ಅಧಿಕಾರಿಗಳು ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುತ್ತಿದ್ದಾರೆ. ಒಂದು ವೇಳೆ ಅಗತ್ಯಬಿದ್ದರೆ ಮುಂದಿನ ಹಂತರದಲ್ಲಿ ಎನ್‌ಐಎ ತನಿಖೆ ನಡೆಸುವ ಸಾಧ್ಯತೆಗಳಿವೆ. ಇದನ್ನೂ ಓದಿ: ಶಂಕಿತ ಉಗ್ರರಿಗೆ ಬೆಂಗಳೂರು ಮಾತ್ರವಲ್ಲ ಹಿಂದೂ ನಾಯಕರೂ ಟಾರ್ಗೆಟ್!
Advertisement
ವಿದೇಶದಿಂದ ಲಕ್ಷ ಲಕ್ಷ ಫಂಡಿಂಗ್: ರಾಜ್ಯ ರಾಜಧಾನಿಯಲ್ಲಿ ಸೆರೆ ಸಿಕ್ಕ ಶಂಕಿತರ ಉಗ್ರರ ಹಿಂದೆ ಬ್ಯಾಕ್ ಬೋನ್ ಆಗಿದ್ದ ಮಾಸ್ಟರ್ ಮೈಂಡ್ ಜುನೈದ್ ಬೆಂಗಳೂರಿನಲ್ಲಿ ಸೆರೆ ಸಿಕ್ಕ ಶಂಕಿತರನ್ನ ಸಾಕುತ್ತಿದ್ದ, ಬೆಂಗಳೂರಿನಲ್ಲಿದ್ದವರಿಗೆ ಲಕ್ಷ ಲಕ್ಷ ಫಂಡಿಂಗ್ ಮಾಡ್ತಿದ್ದ. ಜೊತೆಗೆ ಏನೇನು ಮಾಡಬೇಕು ಅಂತಾ ಟ್ರೈನಿಂಗ್ ಕೊಡ್ತಿದ್ದ. ಅದಕ್ಕಾಗಿ ಬೆಂಗಳೂರಿನಲ್ಲಿ ಎಲ್ಲೆಲ್ಲಿ ಕೃತ್ಯ ಎಸಬೇಕು ಅನ್ನೋದರ ನೀಲನಕ್ಷೆಯನ್ನೂ (ಬ್ಲೂ ಪ್ರಿಂಟ್) ಸಿದ್ಧ ಮಾಡಿಕೊಂಡಿದ್ದ ಎಂದು ಸಿಸಿಬಿ ಮೂಲಗಳಿಂದ ತಿಳಿದುಬಂದಿದೆ.
ಜುನೈದ್ ಕೊಡುವ ಮಾರ್ಗದರ್ಶನದಂತೆ ಸಿಲಿಕಾನ್ ಸಿಟಿಯಲ್ಲಿ ಶಂಕಿತರು ಸ್ಫೋಟಕ್ಕೆ ಸಂಚು ರೂಪಿಸುತ್ತಿದ್ದರು. ನಗರದಲ್ಲಿ 10ಕ್ಕೂ ಹೆಚ್ಚು ಸ್ಥಳಗಳನ್ನ ಗುರುತಿಸಿಕೊಂಡಿದ್ದರು. ಸಿಸಿಬಿ ಪೊಲೀಸರು ಎರಡು ಮೂರು ದಿನ ತಡ ಮಾಡಿದ್ದರೇ ಬೆಂಗಳೂರಿನ ಕೆಲವು ಕಡೆ ಸ್ಫೋಟಗೊಳಿಸಲು ತಯಾರಿ ಮಾಡಿಕೊಂಡಿದ್ದರು. ಇದೀಗ ಶಂಕಿತರ ಗ್ಯಾಂಗ್ ಲೀಡರ್ ಜುನೈದ್ ತಲೆ ಮರೆಸಿಕೊಂಡಿದ್ದು ಅವನ ಬೇಟೆಗಾಗಿ ಸಿಸಿಬಿ ಪೊಲೀಸರು ಬಲೆ ಬೀಸಿದ್ದಾರೆ.
Web Stories