Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2ನೇ ವಿಮಾನ ನಿಲ್ದಾಣ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ – ಎಂ.ಬಿ ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 2ನೇ ವಿಮಾನ ನಿಲ್ದಾಣ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ – ಎಂ.ಬಿ ಪಾಟೀಲ್

Bengaluru City

2ನೇ ವಿಮಾನ ನಿಲ್ದಾಣ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ – ಎಂ.ಬಿ ಪಾಟೀಲ್

Public TV
Last updated: December 13, 2025 4:56 pm
Public TV
Share
2 Min Read
MB Patil 2
SHARE

ಬೆಂಗಳೂರು: ರಾಜಧಾನಿಯ ಸಮೀಪ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಸ್ಥಳದ ಅನುಕೂಲ ಮತ್ತು ತಾಂತ್ರಿಕ ಹಾಗೂ ಆರ್ಥಿಕ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಪರಿಣತ ಸಲಹಾ ಸಂಸ್ಥೆಯ ಆಯ್ಕೆಗಾಗಿ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮವು ಟೆಂಡರ್ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು 2026ರ ಜನವರಿ 12 ಕೊನೆಯ ದಿನವಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಅವರು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, ಎಂದು 2ನೇ ವಿಮಾನ ನಿಲ್ದಾಣಕ್ಕಾಗಿ ರಾಜ್ಯ ಸರ್ಕಾರವು ಕನಕಪುರ ರಸ್ತೆಯಲ್ಲಿರುವ ಚೂಡಹಳ್ಳಿ, ಸೋಮನಹಳ್ಳಿ ಮತ್ತು ನೆಲಮಂಗಲದ ಬಳಿ ಸ್ಥಳಗಳನ್ನು ಗುರುತಿಸಿದೆ. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಉನ್ನತ ಮಟ್ಟದ ತಂಡವು ಇವುಗಳ ಪರಿಶೀಲನೆ ನಡೆಸಿ, ಪ್ರಾಥಮಿಕ ವರದಿ ನೀಡಿದೆ. ಈಗ ಟೆಂಡರ್‌ನಲ್ಲಿ ಆಯ್ಕೆಯಾಗುವ ಸಲಹಾ ಸಂಸ್ಥೆಯು 5 ತಿಂಗಳಲ್ಲಿ ಸರ್ಕಾರಕ್ಕೆ ತನ್ನ ಸಮಗ್ರ ತಾಂತ್ರಿಕ ಮತ್ತು ಆರ್ಥಿಕ ಕಾರ್ಯಸಾಧ್ಯತಾ ವರದಿ ಕೊಡಬೇಕಾಗುತ್ತದೆ ಎಂದಿದ್ದಾರೆ.ಇದನ್ನೂ ಓದಿ: ವೋಟ್ ಚೋರ್, ಗಡ್ಡಿ ಛೋಡ್ – ನಾಳೆ ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ

ಕಳೆದ 5 ವರ್ಷಗಳಲ್ಲಿ ವಾರ್ಷಿಕವಾಗಿ 250 ಕೋಟಿ ರೂ. ಮೊತ್ತದ ಕೆಲಸಗಳನ್ನು ನಿರ್ವಹಿಸಿರುವಂತಹ ಮತ್ತು ಸದರಿ ಕ್ಷೇತ್ರದಲ್ಲಿ ಕನಿಷ್ಠ ಪಕ್ಷ ಐದು ಯೋಜನೆಗಳನ್ನಾದರೂ ನಿರ್ವಹಿಸಿರುವ/ಸಲಹಾ ವರದಿ ನೀಡಿರುವಂತಹ ಸಂಸ್ಥೆಗಳು ಟೆಂಡರ್‌ನಲ್ಲಿ ಭಾಗವಹಿಸಬಹುದು. ಟೆಂಡರ್‌ನಲ್ಲಿ ಆಯ್ಕೆಯಾಗುವ ಸಂಸ್ಥೆಯು ನಾವು ಸೂಚಿಸುತ್ತಿರುವ ಮೂರೂ ಸ್ಥಳಗಳ ಮಳೆ ಪ್ರಮಾಣ, ಭೂಲಕ್ಷಣ, ವಿದ್ಯುತ್, ನೀರು, ಒಳಚರಂಡಿ, ತ್ಯಾಜ್ಯ ನಿರ್ವಹಣೆಯಂತಹ ಮೂಲಸೌಕರ್ಯಗಳು, ಸುತ್ತಮುತ್ತಲಿನ ಜನಸಂಖ್ಯೆ, ಅಭಿವೃದ್ಧಿ, ಶಬ್ದ ಮತ್ತು ವಿಮಾನ ನಿಲ್ದಾಣದಿಂದ ಉಂಟಾಗುವ ಮಾಲಿನ್ಯ ಇತ್ಯಾದಿಗಳತ್ತ ಗಮನ ಹರಿಸಲಿದೆ ಎಂದು ಹೇಳಿದ್ದಾರೆ.

ಇದಲ್ಲದೆ ಉದ್ದೇಶಿತ 2ನೇ ವಿಮಾನ ನಿಲ್ದಾಣ ಅಭಿವೃದ್ಧಿಗೆ ತಗುಲುವ ವೆಚ್ಚ, ಅಗತ್ಯ ಇರುವ ಭೂಮಿ, ರಕ್ಷಣಾ ಸಚಿವಾಲಯ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಸೇರಿದಂತೆ ಹಲವು ಕಡೆಗಳಿಂದ ಪಡೆಯಬೇಕಾಗುವ ಅನುಮೋದನೆಗಳ ವಿವರಗಳು ಮುಂತಾದವನ್ನೂ ಈ ಕಾರ್ಯಸಾಧ್ಯತಾ ವರದಿಯಲ್ಲಿ ನೀಡಬೇಕಾಗುತ್ತದೆ. ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣದಿಂದ ಇಲ್ಲಿನ ಕೈಗಾರಿಕೆ, ಪ್ರವಾಸೋದ್ಯಮ, ಜನರ ಓಡಾಟ ಇತ್ಯಾದಿ ಅಂಶಗಳನ್ನೂ ಅದು ವಿವರಿಸಲಿದೆ ಎಂದು ನುಡಿದಿದ್ದಾರೆ.

ಉದ್ದೇಶಿತ ವಿಮಾನ ನಿಲ್ದಾಣಕ್ಕೆ ಹಾಲಿ ಇರುವ ವಿವಿಧ ರೀತಿಯ ಸಂಪರ್ಕ, ವಿಮಾನ ನಿಲ್ದಾಣ ನಿರ್ಮಾಣ ನಂತರ ಏನೆಲ್ಲ ಮೂಲಸೌಕರ್ಯ ಅಭಿವೃದ್ಧಿಪಡಿಸಬೇಕು ಎಂಬುದರ ಬಗ್ಗೆಯೂ ಸಲಹಾ ಸಂಸ್ಥೆ ಅಧ್ಯಯನ ನಡೆಸಲಿದೆ. ಇದಲ್ಲದೆ, ಸರಕು ಸಾಗಣೆ ಮತ್ತು ಪ್ರಯಾಣಿಕ ಸೇವೆಗಳು ಹಾಗೂ ಅದರಿಂದಾಗುವ ಆರ್ಥಿಕ ಕಾರ್ಯಸಾಧ್ಯತೆ ಬಗ್ಗೆಯೂ ಅಧ್ಯಯನ ನಡೆಸಬೇಕಾಗಿದೆ. ಒಟ್ಟಿನಲ್ಲಿ ಮೂರೂ ಸ್ಥಳಗಳ ಬಗ್ಗೆ ಅಧ್ಯಯನ ನಡೆಸಿ, ಯಾವುದು ಹೆಚ್ಚು ಸೂಕ್ತ ಎನ್ನುವ ಅಭಿಪ್ರಾಯ ಕೂಡ ಸಲಹಾ ಸಂಸ್ಥೆ ನೀಡಲಿದೆ ಎಂದು ಮಾಹಿತಿ ನೀಡಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಈಗ ದಟ್ಟಣೆಯಲ್ಲಿ ದೇಶದಲ್ಲೇ 2ನೇ ಸ್ಥಾನದಲ್ಲಿದೆ. 2033ರ ಹೊತ್ತಿಗೆ ನಾವು ಮತ್ತೊಂದು ವಿಮಾನ ನಿಲ್ದಾಣ ಹೊಂದಬೇಕಾಗಿದೆ. ಮುಂದಾಲೋಚನೆಯನ್ನು ಇಟ್ಟುಕೊಂಡು ಈಗಿನಿಂದಲೇ ಪ್ರಯತ್ನಗಳನ್ನು ಆರಂಭಿಸಲಾಗಿದೆ. ಈಗಾಗಲೇ ಹೊಸದೆಹಲಿ ಮತ್ತು ಮುಂಬೈ ನಗರಗಳು ಎರಡೆರಡು ವಿಮಾನ ನಿಲ್ದಾಣ ಹೊಂದಿವೆ. ಕಾರ್ಯಸಾಧ್ಯತಾ ವರದಿ ಬಂದ ನಂತರ ಮುಂದಿನ ಹೆಜ್ಜೆ ಏನಿರಬೇಕೆಂದು ನಿರ್ಧರಿಸಲಾಗುವುದು ಎಂದು ವಿವರಿಸಿದ್ದಾರೆ.ಇದನ್ನೂ ಓದಿ: ಜನವರಿಯಲ್ಲಿ‌ ದರ್ಶನ್‌ ಅಣ್ಣನಿಗೆ ಬೇಲ್‌ ಸಿಗುವ ನಿರೀಕ್ಷೆಯಿದೆ – ಜಮೀರ್‌ ಪುತ್ರ ಝೈದ್‌ ಖಾನ್‌

TAGGED:2ನೇ ವಿಮಾನ ನಿಲ್ದಾಣairportbengaluruMB Patilಎಂ.ಬಿ.ಪಾಟೀಲ್ಕಾಂಗ್ರೆಸ್ಬೆಂಗಳೂರುವಿಮಾನ ನಿಲ್ದಾಣ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Shreyas Iyer
Cricket

IPL 2026 | ಜಿಟಿ ವಿರುದ್ಧ ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್‌ಗೆ 12 ಲಕ್ಷ ದಂಡ

Public TV
By Public TV
6 minutes ago
Digital Census India
31 Districts

Census 2027 | ಈ ಸುದ್ದಿ ಓದಿ ಮನೆಯಲ್ಲೇ ಕುಳಿತೇ 15 ನಿಮಿಷದ ಒಳಗಡೆ ನಿಮ್ಮ ವಿವರವನ್ನು ಭರ್ತಿ ಮಾಡಿ!

Public TV
By Public TV
16 minutes ago
ABVP 1 1
Bengaluru City

ಮಹಾರಾಣಿ ವಿವಿಯಲ್ಲಿ ಭಾರೀ ಭ್ರಷ್ಟಾಚಾರ – ವಿದೇಶದಲ್ಲಿ ಪಾಠ ಮಾಡೋ ಉಪನ್ಯಾಸಕರಿಗೆ ವಿವಿಯಿಂದ ಸಂಬಳ: ಎಬಿವಿಪಿ ಆರೋಪ

Public TV
By Public TV
25 minutes ago
wild elephant attack on bike in chikkamagaluru
Chikkamagaluru

ಬೈಕ್ ಅಡ್ಡಗಟ್ಟಿ ತುಳಿದು ಹಾಕಿದ ಪುಂಡಾನೆ – ಸವಾರ ಜಸ್ಟ್ ಮಿಸ್

Public TV
By Public TV
1 hour ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
2 hours ago
ABVP Gopi Rangaswamy
Bengaluru City

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿ ಮಾಡೋ ಮೊದಲು ಸರ್ಕಾರ ತಜ್ಞರ ಸಮಿತಿ ರಚನೆ ಮಾಡಬೇಕು: ಎಬಿವಿಪಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?