ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಬಿಎಂಟಿಸಿ ವೋಲ್ವೋ ಬಸ್ (BMTC Volvo Bus) ಪಲ್ಟಿ ಹೊಡೆದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ (Airport) ಹೆಚ್‍ಎಸ್‍ಆರ್ ಲೇಔಟ್ (HSR Layout) ಕಡೆ ಬಿಎಂಟಿಸಿ ವೋಲ್ವೋ ಬಸ್ (ನಂಬರ್ KA 57 f 0237) ಬರುತ್ತಿತ್ತು. ಆದರೆಪ್ಯಾಲೇಸ್ ಗುಟ್ಟಹಳ್ಳಿ ಫ್ಲೈಓವರ್ ಹತ್ತುವಾಗ ಬಸ್ ಪಲ್ಟಿಯಾಗಿದೆ.
ಚಾಲಕನಿಗೆ ತಲೆ ಸುತ್ತು ಬಂದ ಕಾರಣ ಬಸ್ ನಿಯಂತ್ರಣ ಕಳೆದು ಕೊಂಡಿದೆ. ಬಸ್ ಸೈಡ್ ಗೆ ಹಾಕುವಷ್ಟರಲ್ಲಿ ಡಿವೈಡರ್ ಗೆ ಹೊಡೆದು ಪಲ್ಟಿಯಾಗಿದೆ. ಅವಘಡದ ವೇಳೆ ಚಾಲಕ ನಿರ್ವಾಹಕ ಸೇರಿ 13 ಮಂದಿ ಬಸ್ಸಿನಲ್ಲಿದ್ದರು. ಘಟನೆಯಿಂದ ಬಸ್ ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕನ ತಲೆಗೆ ಪೆಟ್ಟು ಬಿದ್ದಿದೆ. ಇದನ್ನೂ ಓದಿ: 2 ತಿಂಗಳಲ್ಲಿ 9 ಬಾರಿ ಹಾವು ಕಡಿದ್ರೂ ಬಾಲಕ ಆರೋಗ್ಯ!
ಸದಾಶಿವನಗರ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ. ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಘಟನೆಯಿಂದಾಗಿ ಪ್ಯಾಲೇಸ್ ರೋಡ್ ನಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು. ತಡರಾತ್ರಿವರೆಗೆ ಆಗಿದ್ದ ಟ್ರಾಫಿಕ್ ಕ್ಲೀಯರ್ ಮಾಡಲು ಪೊಲೀಸರು ಹರಸಾಹಸ ಪಟ್ಟರು.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]