ಬೆಂಗಳೂರು: ಮೆಜೆಸ್ಟಿಕ್ (Bengaluru) ರೈಲ್ವೆ ನಿಲ್ದಾಣದಲ್ಲಿ ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ (Train) ಬೆಂಕಿ (Fire) ಕಾಣಿಸಿಕೊಂಡಿದ್ದ ಪ್ರಕರಣಕ್ಕೆ ಇನ್ನೂ ನಿಖರ ಕಾರಣ ಪತ್ತೆಯಾಗಿಲ್ಲ. ಆದರೆ ಈ ಬೆಂಕಿ ಅವಘಡ ಹಾಗೂ ಮಧುರೈನಲ್ಲಿ ಸಂಭವಿಸಿದ ಅನಾಹುತದ ಹಿನ್ನಲೆಯಲ್ಲಿ ತನಿಖೆ ಚುರುಕುಗೊಳಿಸಲಾಗಿದೆ.
ಘಟನೆ ನಡೆದು 10 ದಿನ ಕಳೆದಿದೆ. ಆದರೆ ಘಟನೆಗೆ ಇನ್ನೂ ನಿಖರ ಕಾರಣ ಸಿಗದಿರುವುದು ಹಲವು ಅನುಮಾನಕ್ಕೆ ದಾರಿ ಮಾಡಿಕೊಟ್ಟಿದೆ. ಅಲ್ಲದೇ ಪ್ರಕರಣದ ಹಿಂದೆ ಕಿಡಿಗೇಡಿಗಳ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಪ್ರವಾಸಿಗರೇ ಎಚ್ಚರ, ಕಾಫಿನಾಡ ನಾನ್ ವೆಜ್ ಹೋಟೆಲ್‍ನಲ್ಲಿ ಕುರಿ ಬದಲು ದನದ ಮಾಂಸದ ಬಿರಿಯಾನಿ!
ಈ ಪ್ರಕರಣವನ್ನು ಆರ್‌ಪಿಎಫ್ ಡಿಜಿ ಮನೋಜ್ ಯಾದವ್ ತನಿಖೆ ನಡೆಸುತ್ತಿದ್ದಾರೆ. ಬೆಂಕಿ ಅವಘಡವನ್ನು ಗಂಭೀರವಾಗಿ ಪರಿಗಣಿಸಿರುವ ಅವರು ಎರಡು ದಿನಗಳ ಹಿಂದೆ ರೈಲ್ವೇ ಕಚೇರಿಗೆ ಧಿಡೀರ್ ಭೇಟಿಕೊಟ್ಟಿದ್ದರು. ಈ ವೇಳೆ ನಗರ ಪೊಲೀಸ್ (Police) ಹಾಗೂ ಆರ್‌ಪಿಎಫ್ ಸಿಬ್ಬಂದಿಯಿಂದ ಮಾಹಿತಿ ಪಡೆದಿದ್ದರು.
ಅವಘಡ ಸಂಭವಿಸಿದ್ದ ಭೋಗಿಯಲ್ಲಿ ಪ್ರಯಾಣ ಮಾಡಿದ ಪ್ರಯಾಣಿಕರು ಯಾರು? ಭೋಗಿಯಲ್ಲಿ ಟೆಕ್ನಿಕಲ್ ಸಮಸ್ಯೆ ಆಗಿತ್ತಾ? ಎಂಬ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಅಲ್ಲದೇ ಈ ವೇಳೆ ಮುಂಬೈನಿಂದ (Mumbai) ಬಂದಿದ್ದ ರೈಲಿನಲ್ಲಿ ಮುಂಬೈ ಸಿಬ್ಬಂದಿಯೇ ಕಾರ್ಯ ನಿರ್ವಹಿಸುತ್ತಿದ್ದರು. ರೈಲು ಬಂದ ಒಂದು ಗಂಟೆಯ ನಂತರ ಬೆಂಕಿ ಅವಘಡ ಸಂಭವಿಸಿತ್ತು. ಇದೇ ವಿಚಾರವಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಲ್ಲಾ ಸಿಬ್ಬಂದಿಯನ್ನು ತೀವ್ರ ವಿಚಾರಣೆ ಮಾಡಲಾಗಿದೆ.
ಸಿಸಿಟಿವಿಯಲ್ಲಿ ಪತ್ತೆಯಾದ ಅಂಶಗಳ ಆಧಾರದ ಮೇಲೂ ತನಿಖೆ ನಡೆಸಲಾಗುತ್ತಿದೆ. ರೈಲ್ವೆ ವಿಭಾಗೀಯ ಅಧಿಕಾರಿಗಳಿಂದ ಆಂತರಿಕ ತನಿಖೆ ಸಹ ನಡೆಯುತ್ತಿದೆ. ಸದ್ಯ ಎರಡು ತನಿಖಾ ತಂಡಗಳು ವಿಧಿವಿಜ್ಞಾನ ಪ್ರಯೋಗಾಲಯದ (FSL) ವರದಿಗಾಗಿ ಕಾಯುತ್ತಿವೆ. ಬಳಿಕ ನಿಖರ ಕಾರಣ ಬೆಳಕಿಗೆ ಬರಲಿದೆ. ಇದನ್ನೂ ಓದಿ: ಉಡುಪಿ ಕಾಲೇಜು ಲೇಡಿಸ್ ಟಾಯ್ಲೆಟ್‌ನಲ್ಲಿ ವೀಡಿಯೋ ಚಿತ್ರೀಕರಣ ಕೇಸ್ – ಗುಜರಾತ್ FSLಗೆ ಮೊಬೈಲ್ ರವಾನೆ
Web Stories