ಬೆಂಗಳೂರು: ಮಾದಾವರ – ರೇಷ್ಮೆ ಸಂಸ್ಥೆ ಮಾರ್ಗದ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ (Nagasandra Metro Station) ಅಗ್ನಿ ಅವಘಡ (Fire Accident) ಸಂಭವಿಸಿದೆ. ನಿಲ್ದಾಣದ ಎಮರ್ಜೆನ್ಸಿ ಎಕ್ಸಿಟ್ ಬಳಿ ಈ ಅನಾಹುತ ಸಂಭವಿಸಿದೆ.
ತುರ್ತು ನಿರ್ಗಮನದ ಬಳಿಯ ಸೂಚನಾ ಫಲಕದಲ್ಲಿ ಶಾರ್ಟ್‌ಸರ್ಕ್ಯೂಟ್ ಸಂಭವಿಸಿದ್ದರಿಂದ ಬೆಂಕಿ ಹೊತ್ತಿಕೊಂಡಿದೆ. ಮಧ್ಯಾಹ್ನ ಸುಮಾರು 1:30ರ ವೇಳೆಗೆ ಈ ಅವಘಡ ನಡೆದಿದೆ ಎಂದು ತಿಳಿದು ಬಂದಿದೆ. ಸಣ್ಣ ಪ್ರಮಾಣದ ಅಗ್ನಿ ಅವಘಡ ಇದಾಗಿದ್ದು, ಅಗ್ನಿಶಾಮಕ ತಂಡ ಬೆಂಕಿ ನಂದಿಸಿದೆ. ಇದನ್ನೂ ಓದಿ: ಬೈಕ್ ಪಾರ್ಕಿಂಗ್ ವಿಚಾರಕ್ಕೆ ಜಗಳ – ಚಾಕು ಇರಿದು ಮಹಿಳೆ ಹತ್ಯೆ, ಪತಿಗೆ ಗಂಭೀರ ಗಾಯ
ಅಗ್ನಿ ಅವಘಡದಲ್ಲಿ ಯಾರಿಗೂ ಸಮಸ್ಯೆಯಾಗಿಲ್ಲ. ನಿಲ್ದಾಣದಲ್ಲಿದ್ದ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ. ಮೆಟ್ರೋ ರೈಲು ಸಂಚಾರ ಸೇವೆಗಳಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ. ಎಲ್ಲಾ ಮೆಟ್ರೋ ಸೇವೆಗಳು ಎಂದಿನಂತೆ ಸುಗಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಶಂಕಿತ ಅಪರಾಧಿಗಳ ಪತ್ತೆಗೆ ಬಂತು ಹೈಟೆಕ್ ಆ್ಯಪ್ – ಕೇವಲ 35 ಸೆಕೆಂಡ್‌ನಲ್ಲಿ ಜಾತಕ ಬಿಚ್ಚಿಡುತ್ತೆ ಅಭಿಜ್ಞಾನ್!
