ಬೆಂಗಳೂರು: ಪ್ರತಿಷ್ಠಿತ ಹೋಟೆಲ್ ಗಳಲ್ಲಿ ಒಂದಾದ ಎ2ಬಿ ಯಲ್ಲಿ ಅತಿಹೆಚ್ಚು ಪ್ಲಾಸ್ಟಿಕ್ ಬಳಕೆಯಾಗುತ್ತಿದೆ ಎನ್ನುವ ದೂರು ಬಂದ ಹಿನ್ನೆಲೆಯಲ್ಲಿ ಬೊಮ್ಮನಹಳ್ಳಿ ಬಿಬಿಎಂಪಿ ಅಧಿಕಾರಿಗಳ ತಂಡ ದಾಳಿ ನಡೆಸಿ 1 ಲಕ್ಷ ದಂಡ ವಿಧಿಸಿದ್ದಾರೆ.
ತಮಿಳುನಾಡು ಮೂಲದ ಎ2ಬಿ ಹೋಟೆಲ್ ಗಳು ಬೆಂಗಳೂರಿನಾದ್ಯಂತ ಅತಿ ಹೆಚ್ಚಾಗಿದ್ದು, ಹೆಚ್.ಎಸ್.ಆರ್ ಲೇಔಟ್‍ನ ಬಿಡಿಎ ಕಾಂಪ್ಲೆಕ್ಸ್ ನಲ್ಲಿರುವ ಎ2ಬಿ ಹೋಟೆಲ್ ನಲ್ಲಿ ಒಂದು ವರ್ಷದ ಹಿಂದೆಯೇ ಕೇಂದ್ರ ಸರ್ಕಾರ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಹೇರಿದ್ರು ಸಹ ಇದಕ್ಕೆ ಕ್ಯಾರೆ ಎನ್ನದೇ ಬಳಸುತ್ತಿದ್ದರು. ಈ ಎ2ಬಿ ಹೋಟೆಲ್ ಗಳಲ್ಲಿ ಅತಿಹೆಚ್ಚು ಪ್ಲಾಸ್ಟಿಕ್ ನ್ನು ಬಳಸುತ್ತಿದ್ದಾರೆ ಎಂಬಾ ಮಾಹಿತಿ ಮೇರೆಗೆ ಇಂದು ಬೊಮ್ಮನಹಳ್ಳಿ ಬಿಬಿಎಂಪಿ ಜಂಟಿ ಆಯುಕ್ತ ರಾಮಕೃಷ್ಣ ನೇತೃತ್ವದ ತಂಡ ದಾಳಿ ನಡೆಸಿ 8 ಕೆಜಿಗೂ ಅಧಿಕ ಪ್ಲಾಸ್ಟಿಕ್ ವಶಕ್ಕೆ ಪಡೆದು 1 ಲಕ್ಷ ರೂಪಾಯಿಗಳ ದಂಡ ವಿಧಿಸಿದ್ದಾರೆ.
Advertisement
Advertisement
ದಾಳಿ ವೇಳೆ ಮಾತನಾಡಿದ ಜಂಟಿ ಆಯುಕ್ತ ರಾಮಕೃಷ್ಣ, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿದ್ದರೂ ಹೋಟೆಲ್, ಅಂಗಡಿ ಸೇರಿದಂತೆ ಹಲವು ಕಡೆಗಳಲ್ಲಿ ಬಳಕೆ ಮಾಡುತ್ತಿರುವುದರ ಬಗ್ಗೆ ಮಾಹಿತಿ ಬಂದಾಗ ಇಂದು ದಾಳಿ ನಡೆಸಲಾಗಿದೆ. 8 ಕೆ.ಜಿಗೂ ಅಧಿಕ ಪ್ಲಾಸ್ಟಿಕ್ ಎ2ಬಿ ಹೋಟೆಲ್‍ನಲ್ಲಿ ದಾಳಿ ವೇಳೆ ಸಿಕ್ಕಿದ್ದು, 1 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ ಮುಂದಿನ ದಿನಗಳಲ್ಲಿ ಮತ್ತೆ ಪ್ಲಾಸ್ಟಿಕ್ ಬಳಕೆಯನ್ನು ಮುಂದುವರೆಸಿದರೆ ಲೈಸೆನ್ಸ್ ರದ್ದು ಮಾಡಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.