ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renuka Swamy Murder Case) ದರ್ಶನ್ (Darshan) ಸೇರಿದಂತೆ ನಾಲ್ವರು ಆರೋಪಿಗಳನ್ನು ಕೋರ್ಟ್ ಮೂರನೇ ಬಾರಿಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದರೆ, ಪವಿತ್ರಾ ಗೌಡ (Pavithra Gowda) ಮತ್ತು ಇತರ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ (Judicial Custody) ಒಪ್ಪಿಸಿತು.
ಇಂದು ಕಸ್ಟಡಿ (Police Custody) ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ದರ್ಶನ್ ಮತ್ತು ಗ್ಯಾಂಗ್ ಸದಸ್ಯರು ಎಸಿಎಂಎಂ ಕೋರ್ಟ್‌ಗೆ (ACMM) ಹಾಜರು ಪಡಿಸಿದರು.
ಹತ್ಯೆ ಪ್ರಕರಣದಲ್ಲಿ ಸ್ಥಳ ಮಹಜರು, ಸಾಕ್ಷ್ಯ ಸಂಗ್ರಹ ಪ್ರಕ್ರಿಯೆಗಳು ಈ ವಾರ ಮತ್ತು ಕಳೆದ ವಾರ ನಡೆದಿತ್ತು. ಬಹುತೇಕ ಪ್ರಕ್ರಿಯೆಗಳು ಮುಕ್ತಾಯವಾದರೂ ದರ್ಶನ್ ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಬೇಕೆಂದು ಎಸ್‌ಪಿಪಿ ವಾದ ಮಂಡಿಸಿದರು. ಈ ವಾದವನ್ನು ಪುರಸ್ಕರಿಸಿದ ಕೋರ್ಟ್ ಮತ್ತೆ ಶನಿವಾರದವರೆಗೆ ದರ್ಶನ್ ಮತ್ತು ಉಳಿದ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿತು.
ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಹಿನ್ನೆಲೆಯಲ್ಲಿ ಇಂದೇ ಪವಿತ್ರಾ ಗೌಡ ಮತ್ತು ಇತರ ಆರೋಪಿಗಳು ಪರಪ್ಪನ ಅಗ್ರಹಾರ ಸೇರಲಿದ್ದಾರೆ.