ಬೆಂಗಳೂರು: ನಗರದಲ್ಲಿ ನಡೆಯುತ್ತಿದ್ದ ಏರ್ ಶೋ ಯಾವುದೇ ಕಾರಣಕ್ಕೂ ಲಕ್ನೋಗೆ ಸ್ಥಳಾಂತರಗೊಳ್ಳುವುದಿಲ್ಲವೆಂದು ರಾಸಾಯನಿಕ ರಸಗೊಬ್ಬರ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಅನಂತಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಏರ್ ಶೋ ಕುರಿತು ಉಂಟಾಗಿರುವ ಗೊಂದಲಕ್ಕೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ ಅವರು, 2019ರಲ್ಲಿ ಬೆಂಗಳೂರಿನಲ್ಲಿ ನಡೆಯುವ ಏರ್ ಶೋ ಲಕ್ನೋಗೆ ಸ್ಥಳಾಂತರಗೊಳ್ಳುವುದಿಲ್ಲವೆಂದು ರಕ್ಷಣಾ ಸಚಿವಾಲಯದ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಅಲ್ಲದೇ ಈ ವಿಚಾರವಾಗಿ ನಾನು ಸಹ ಖುದ್ದು ರಕ್ಷಣಾ ಸಚಿವರಾದ ನಿರ್ಮಲಾ ಸೀತಾರಾಮನ್‍ರವರೊಂದಿಗೆ ಮಾತನಾಡಿದ್ದೇನೆ. ಅವರು ಸಹ ಸ್ಥಳಾಂತರಗೊಳ್ಳುವ ಯಾವುದೇ ನಿರ್ಧಾವಿಲ್ಲವೆಂದು ಹೇಳಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಏರ್ ಶೋ ಲಕ್ನೋಗೆ ಶಿಫ್ಟ್ ಆಗಲ್ಲ: ಬಿಎಸ್‍ವೈ
ಏರ್ ಶೋ ಸ್ಥಳಾಂತರ ಕುರಿತು ಎದ್ದಿರುವ ಊಹಾಪೋಹಗಳಿಗೆ ಜನರು ಕಿವಿಗೊಡಬಾರದು, ಕಳೆದ ಬಾರಿಯೂ ಸಹ ಇಂತಹುದೇ ಗೊಂದಲ ಏರ್ಪಟ್ಟಿತ್ತು. ಕೇಂದ್ರ ಸರ್ಕಾರವು ಸ್ಥಳಾಂತರ ಕುರಿತು ಎಲ್ಲಿಯೂ ಮಾಹಿತಿ ನೀಡಿಲ್ಲ. 2019ರಲ್ಲಿ ನಡೆಯುವ ಏರ್ ಶೋ ಬೆಂಗಳೂರಿನಲ್ಲೇ ನಡೆಯಲಿದೆ ಎಂದು ಹೇಳಿದ್ದಾರೆ.
ಏರ್ ಶೋ ಲಕ್ನೋಗೆ ಸ್ಥಳಾಂತರವಾಗುತ್ತಿದೆ ಎನ್ನುವ ಸುದ್ದಿ ಪ್ರಕಟವಾದ ಬೆನ್ನಲ್ಲೆ ಕಾಂಗ್ರೆಸ್, ಬಿಜೆಪಿ ನಾಯಕರ ನಡುವೆ ವಾಕ್ಸಮರ ಆರಂಭವಾಗಿತ್ತು. ಅಷ್ಟೇ ಅಲ್ಲದೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಪ್ರಧಾನಿ ಮೋದಿಗೆ ಪತ್ರ ಬರೆದು ಯಾವುದೇ ಕಾರಣಕ್ಕೂ ಲಕ್ನೋಗೆ ಸ್ಥಳಾಂತರ ಮಾಡಬಾರದು ಎಂದು ಮನವಿ ಮಾಡಿದ್ದರು. ಇದನ್ನೂ ಓದಿ: ಏರ್ ಶೋ ಉಳಿಸಿಕೊಳ್ಳಲು ಅಖಾಡಕ್ಕೆ ಇಳಿದ ಎಚ್‍ಡಿಕೆ-ಮೋದಿಗೆ ಪತ್ರ
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv