Saturday, 19th October 2019

Recent News

ಏರ್ ಶೋ ಲಕ್ನೋಗೆ ಶಿಫ್ಟ್ ಆಗಲ್ಲ: ಬಿಎಸ್‍ವೈ

ಗದಗ: ಬೆಂಗಳೂರಿನ ಯಲಹಂಕದಲ್ಲಿ ನಡೆಯುತ್ತಿದ್ದ ಏರ್ ಶೋ ಲಕ್ನೋಗೆ ಸ್ಥಳಾಂತರವಾಗುವುದಿಲ್ಲವೆಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಏರ್ ಶೋ ಸ್ಥಳಾಂತರ ಕುರಿತು ಪ್ರತಿಕ್ರಿಯಿಸಿದ ಅವರು, ಏರ್ ಶೋ ಬೆಂಗಳೂರು ಬಿಟ್ಟು ಹೋಗದಂತೆ ಬಿಜೆಪಿಯ ಎಲ್ಲಾ ಕೇಂದ್ರ ಸಚಿವರು ಹಾಗೂ ಸಂಸದರು ಪ್ರಯತ್ನ ಮಾಡುತ್ತೇವೆ. ಸುಮ್ಮನೇ ಡಿಸಿಎಂ ಪರಮೇಶ್ವರ್ ಹಾಗೂ ವೈದ್ಯಕೀಯ ಸಚಿವ ಡಿ.ಕೆ ಶಿವಕುಮಾರ್ ವಿನಾಕಾರಣ ಗೊಂದಲ ಸೃಷ್ಟಿಸಿದ್ದಾರೆ. ಈಗಾಗಲೇ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್ ಈ ಬಗ್ಗೆ ಸ್ಪಷ್ಟ ಪಡಿಸಿದ್ದಾರೆ. ಹೀಗಾಗಿ ಸ್ಥಳಾಂತರ ಬಗ್ಗೆ ಚರ್ಚೆ ಮಾಡುವುದು ಸರಿಯಲ್ಲವೆಂದು ಕಾಂಗ್ರೆಸ್ ವಿರುದ್ಧ ಬಿಎಸ್‍ವೈ ಕಿಡಿಕಾರಿದ್ದಾರೆ.

ಈ ವೇಳೆ ಸಿಎಂ ಭತ್ತ ನಾಟಿ ವಿಚಾರ ಬಗ್ಗೆ ಮಾತನಾಡಿದ ಅವರು, ಕೇವಲ ನಾಟಿ ಮಾಡಿದರೆ ರೈತರ ಸಮಸ್ಯೆಗಳು ಬಗೆಹರಿಯುವುದಿಲ್ಲ. ಉತ್ತರ ಕರ್ನಾಟಕದ 13 ಜಿಲ್ಲೆಯಲ್ಲಿ ತೀವ್ರ ಬರಗಾಲವಿದೆ. ರಾಜಕೀಯ ದೊಂಬರಾಟ ಬಿಟ್ಟು ರೈತರ ಜ್ವಲಂತ ಸಮಸ್ಯೆಗಳನ್ನು ಇತ್ಯರ್ಥ ಮಾಡಲಿ, ಸಿಎಂ ಕುಮಾರಸ್ವಾಮಿ ಪ್ರವಾಸ ಮಾಡಿ ರೈತರ ಸಮಸ್ಯೆ ಅರಿಯಲಿ ಎಂದು ಬಿಎಸ್‍ವೈ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಏರ್ ಶೋ ಲಕ್ನೋಗೆ ಶಿಫ್ಟ್ ಆಗುತ್ತಾ? ಯಾರು ಏನು ಹೇಳಿದ್ರು?

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

Leave a Reply

Your email address will not be published. Required fields are marked *