ಬೆಂಗಳೂರು ಏರ್‌ಪೋರ್ಟ್‌ಗೆ ಒಂದೇ ವಾರದಲ್ಲಿ 2 ಬಾರಿ ಬಾಂಬ್ ಬೆದರಿಕೆ

Public TV
1 Min Read
Bengaluru Kempegowda International Airport 4

ಬೆಂಗಳೂರು/ಚಿಕ್ಕಬಳ್ಳಾಪುರ: ಶೌಚಾಲಯದ ಪೈಪ್‌ಲೈನ್‌ನಲ್ಲಿ ಬಾಂಬ್ ಇಟ್ಟಿರುವುದಾಗಿ ತಿಳಿಸಿ ಕೆಂಪೇಗೌಡ ಏರ್‌ಪೋರ್ಟ್‌ಗೆ (Kempegowda International Airport) ಒಂದೇ ವಾರದಲ್ಲಿ 2 ಬಾರಿ ಬೆದರಿಕೆ ಇಮೇಲ್ ಬಂದಿದೆ.ಇದನ್ನೂ ಓದಿ: ಏರ್‌ಪೋರ್ಟ್ ರಸ್ತೆಯಲ್ಲಿ 3 ಕಾರುಗಳ ನಡುವೆ ಸರಣಿ ಅಪಘಾತ – ಟ್ರಾಫಿಕ್ ಜಾಮ್

ಇದೇ ತಿಂಗಳ 13 ಹಾಗೂ 16ರಂದು ವಿಮಾನ ನಿಲ್ದಾಣದ ಭದ್ರತಾ ಪಡೆಯ ಮೇಲ್‌ಗೆ ಎರಡು ಬಾಂಬ್ ಬೆದರಿಕೆ (Bomb Threat) ಇಮೇಲ್‌ಗಳು ಬಂದಿವೆ. ಇಮೇಲ್‌ನಲ್ಲಿ ಏರ್‌ಪೋರ್ಟ್‌ನ ಶೌಚಾಲಯದ ಪೈಪ್‌ಲೈನ್‌ನಲ್ಲಿ ಬಾಂಬ್ ಇಟ್ಟಿರುವುದಾಗಿ ತಿಳಿಸಿದ್ದಾರೆ. ಜೊತೆಗೆ ಉಗ್ರ ಅಜ್ಮಲ್ ಕಸಬ್‌ಗೆ ಗಲ್ಲಿಗೇರಿಸಿದ್ದು ಸರಿಯಲ್ಲ. ಹೀಗಾಗಿ ಒಂದು ಪ್ಲ್ಯಾನ್‌ ಫೇಲ್ ಆದರೂ ಕೂಡ ಪ್ಲ್ಯಾನ್‌ `ಬಿ’ ಸಿದ್ಧವಾಗಿದೆ ಎಂದು ಉಗ್ರನ ಹೆಸರಲ್ಲಿ ಮೇಲ್ ಕಳುಹಿಸಿದ್ದಾರೆ.

ಕಳೆದ ಕೆಲ ದಿನಗಳಿಂದ ಸೈಲೆಂಟ್ ಆಗಿದ್ದ ಹುಸಿ ಬಾಂಬ್ ಮೇಲ್‌ಗಳು ಇದೀಗ ಮತ್ತೆ ಆಕ್ಟೀವ್ ಆಗಿದ್ದು, ಪೊಲೀಸರಿಗೆ ತಲೆ ನೋವಾಗಿದೆ. ಬೆದರಿಕೆ ಮೇಲ್ ಹಿನ್ನೆಲೆ ಏರ್‌ಪೋರ್ಟ್ ಪೊಲೀಸರು ಹಾಗೂ ಅಧಿಕಾರಿಗಳು ಎಲ್ಲೆಡೆ ಪರಿಶೀಲನೆ ನಡೆಸಿದ್ದಾರೆ. ಬಾಂಬ್ ಬೆದರಿಕೆ ಬಂದ ಮೇಲ್ ಐಡಿಗಳ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.ಇದನ್ನೂ ಓದಿ: ಬಹುಕೋಟಿ ವಂಚನೆ ಕೇಸ್‌ – ಐಶ್ವರ್ಯಗೌಡ ಆಸ್ತಿ ಮುಟ್ಟುಗೋಲು ಪ್ರಕ್ರಿಯೆ ಶುರು

Share This Article