ಬೆಂಗಳೂರು: ಕುಡುಕರು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ದಾರಿ ಹಿಡಿಯುತ್ತಿರೋದು, ಕೊರೊನಾ ವೈರಸ್ ಲಾಕ್‍ಡೌನ್ ವೇಳೆ ಉದ್ಭವಿಸಿರುವ ಮತ್ತೊಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.
ಕೊರೊನಾ ವೈರಸ್ ಭೀತಿ ಹೆಚ್ಚಾದ ಹಿನ್ನೆಲೆಯಲ್ಲಿ ದೇಶ ಲಾಕ್‍ಡೌನ್ ಆಗಿದೆ. ಹೀಗಾಗಿ ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಮದ್ಯದಂಗಡಿಗಳು ಬಂದ್ ಆಗಿವೆ. ಇದರಿಂದ ಕುಡಿಯಲು ಮದ್ಯ ಸಿಗದೇ ಖಿನ್ನತೆಗೆ ಒಳಗಾಗಿ ಕಳೆದ ಆರು ದಿನಗಳಲ್ಲಿ ರಾಜ್ಯದ ಹಲವೆಡೆ ಒಟ್ಟು 13 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Advertisement
Advertisement
ಇಂದು ಮೂವರು ಮದ್ಯ ಸಿಗದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಶಿವಮೊಗ್ಗ, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಮದ್ಯವ್ಯಸನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮಲ್ಲೆಕುಪ್ಪ ಗ್ರಾಮದ ಎಂ.ಶಂಕರ (36) ಮದ್ಯೆ ಸಿಗದೆ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದರೆ, ಬಂಗಾರಪೇಟೆ ತಾಲೂಕಿನ ದೊಡ್ಡೂರು ಕರಪನಹಳ್ಳಿಯ 30 ವರ್ಷದ ಆನಂದ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾನೆ.
Advertisement
Advertisement
ಉಡುಪಿ ಜಿಲ್ಲೆ ಒಂದರಲ್ಲೇ ಆರು ಮಂದಿ ಕುಡುಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರಿನಲ್ಲಿ ಇಬ್ಬರು, ಚಿಕ್ಕಬಳ್ಳಾಪುರ, ಶಿವಮೊಗ್ಗ, ಕೋಲಾರ, ಹುಬ್ಬಳ್ಳಿ ಮತ್ತು ಬೀದರ್ ನಲ್ಲಿ ತಲಾ ಒಬ್ಬೊಬ್ಬರು ಆತ್ಮಹತ್ಯೆ ಮಾಡ್ಕೊಂಡಿದ್ದಾರೆ. ಮುಳಬಾಗಿಲಿನ ಮುದಿಗೆರೆ ಮತ್ತು ತುಮಕೂರಿನಲ್ಲಿ ತಲಾ ಒಬ್ಬರು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದಾರೆ. ಈ ಮಧ್ಯೆ ಕುಡುಕರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಕೇರಳ ಸಿಎಂ ಪಿಣರಯ್ ವಿಜಯನ್, ವೈದ್ಯರ ಚೀಟಿ ತಂದರೆ ಮದ್ಯ ವಿತರಣೆ ಮಾಡಿ ಎಂದು ಆದೇಶ ಹೊರಡಿಸಿದ್ದಾರೆ.