ಬೆಂಗಳೂರು: ಆನೇಕಲ್ ತಾಲೂಕಿನ ಹೆಬ್ಬಗೋಡಿ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಭಾವನಾ ಜನವರಿ 20ರಂದು ದೆಹಲಿಯಲ್ಲಿ ನಡೆಯಲಿರುವ ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಭಾಗವಹಿಸಲು ಆಯ್ಕೆಯಾಗಿದ್ದಾಳೆ.
ಬೆಂಗಳೂರು ನಗರ ಜಿಲ್ಲೆಯಿಂದ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಈ ಪೈಕಿ ಆನೇಕಲ್ ತಾಲೂಕಿನ ಹೆಬ್ಬಗೋಡಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಭಾವನಾ ಕೂಡ ಒಬ್ಬಳು. ಆನ್‍ಲೈನ್‍ನಲ್ಲಿ ನೀಡಲಾದ ಪ್ರಶ್ನೆಗಳಿಗೆ ಸಮರ್ಥ ಉತ್ತರ ನೀಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯನ್ನು ಆಯ್ಕೆ ಮಾಡಲಾಗಿದೆ. ಇದನ್ನೂ ಓದಿ: ಮೋದಿ ಜೊತೆ ಪರೀಕ್ಷಾ ಪೇ ಚರ್ಚೆಗೆ ಚಿಕ್ಕಬಳ್ಳಾಪುರದ ವಿದ್ಯಾರ್ಥಿ ಆಯ್ಕೆ
Advertisement
Advertisement
ಭಾವನಾ ತಂದೆ ರಮೇಶ್ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದು, ತಾಯಿ ಭಾರತಿ ಶಾಲೆಯೊಂದರಲ್ಲಿ ಆಯಾ ಆಗಿ ಕೆಲಸ ಮಾಡುತ್ತಿದ್ದಾರೆ. ಈ ಕುಟುಂಬದ ಬಾಲಕಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಪಡೆದಿರುವುದು ಹೆತ್ತವರಿಗೆ ಹಾಗೂ ಗ್ರಾಮಕ್ಕೆ ಹೆಮ್ಮೆ ತಂದಿದೆ. ಇದನ್ನೂ ಓದಿ: ‘ಪರೀಕ್ಷಾ ಪೇ ಚರ್ಚಾ’- ತುಮಕೂರಿನ ಇಬ್ಬರು ವಿದ್ಯಾರ್ಥಿಗಳು ಆಯ್ಕೆ
Advertisement
ವಿದ್ಯಾರ್ಥಿನಿ ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವುದು ಆಕೆ ಓದುತ್ತಿರುವ ಶಾಲೆಯ ಶಿಕ್ಷಕರಲ್ಲಿ ಸಂತಸ ತಂದಿದೆ. ವಿದ್ಯಾರ್ಥಿನಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಆರ್ ರಾಮಮೂರ್ತಿ ಮತ್ತು ಮುಖ್ಯೋಪಾಧ್ಯಾಯ ಸಿ. ನಾರಾಯಣಸ್ವಾಮಿ ಅಭಿನಂದಿಸಿದ್ದಾರೆ.