Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶೀಘ್ರದಲ್ಲೇ ಬೆಂಗಳೂರು ಉತ್ತರದಲ್ಲೂ ನಿಮ್ಹಾನ್ಸ್ ಘಟಕ: ಡಾ. ಅಶ್ವತ್ಥನಾರಾಯಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶೀಘ್ರದಲ್ಲೇ ಬೆಂಗಳೂರು ಉತ್ತರದಲ್ಲೂ ನಿಮ್ಹಾನ್ಸ್ ಘಟಕ: ಡಾ. ಅಶ್ವತ್ಥನಾರಾಯಣ

Bengaluru City

ಶೀಘ್ರದಲ್ಲೇ ಬೆಂಗಳೂರು ಉತ್ತರದಲ್ಲೂ ನಿಮ್ಹಾನ್ಸ್ ಘಟಕ: ಡಾ. ಅಶ್ವತ್ಥನಾರಾಯಣ

Public TV
Last updated: February 14, 2020 10:48 pm
Public TV
Share
2 Min Read
Ashwath Narayan 3
SHARE

ಬೆಂಗಳೂರು: ನಿಮ್ಹಾನ್ಸ್ ಆಸ್ಪತ್ರೆ ಸೇವೆಯನ್ನು ವಿಸ್ತರಿಸುವ ನಿಟ್ಟಿನಲ್ಲಿ ಬೆಂಗಳೂರು ಉತ್ತರದಲ್ಲಿ ಸಂಸ್ಥೆಯ ಘಟಕ ಶೀಘ್ರದಲ್ಲೇ ಸ್ಥಾಪನೆ ಆಗಲಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಶುಕ್ರವಾರ ತಿಳಿಸಿದ್ದಾರೆ.

ನಿಮ್ಹಾನ್ಸ್ ಇನ್‍ಸ್ಟಿಟ್ಯೂಟ್ ದಿನಾಚರಣೆಯಲ್ಲಿ ಭಾಗವಹಿಸಿದ ಡಾ. ಅಶ್ವತ್ಥನಾರಾಯಣ ಅವರು, ‘ಹ್ಯೂಮನ್ ಜಿನೋಮ್ ಲ್ಯಾಬ್’, ‘ನ್ಯೂರೊ ಬಯಾಲಜಿ ರಿಸರ್ಚ್ ಸೆಂಟರ್’, ‘ನ್ಯೂರೊ ಇನ್ಫೆಕ್ಷನ್ ಲ್ಯಾಬ್’ ಉದ್ಘಾಟಿಸಿ ಮಾತನಾಡಿದರು. “ನಿಮ್ಹಾನ್ಸ್ ಸಂಸ್ಥೆ ವಿಸ್ತೃತವಾಗಿ ಬೆಳೆಯಬೇಕು. ಯಾವುದೇ ಒಂದು ಭಾಗಕ್ಕೆ ಸೀಮಿತವಾಗದೇ ದೇಶ ಹಾಗೂ ರಾಜ್ಯದ ವಿವಿಧ ಭಾಗಗಳಿಗೆ ವಿಸ್ತರಿಸಬೇಕು ಎಂದರು.

WhatsApp Image 2020 02 14 at 9.18.25 PM

ಸದ್ಯ ನಿಮ್ಹಾನ್ಸ್‍ನಲ್ಲಿ 400 ಹಾಸಿಗೆಯ ಸಾಮರ್ಥ್ಯ ಇದ್ದು, ಈ ಸಾಮಥ್ರ್ಯ ಹೆಚ್ಚಿಸಬೇಕೆಂಬ ಬೇಡಿಕೆ ಇದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ವೆಚ್ಚ ಹೆಚ್ಚಿರುವ ಜತೆಗೆ ಈ ಗುಣಮಟ್ಟವನ್ನು ನಿರೀಕ್ಷಿಸಲಾಗದು. ಹಾಗಾಗೀ ಈ ಕೆಲಸ ತ್ವರಿತವಾಗಿ ಆಗಬೇಕಿದೆ. ಇದಲ್ಲದೇ ಬೆಂಗಳೂರು ಉತ್ತರದಲ್ಲಿ ಸಂಸ್ಥೆಯ ಘಟಕ ಸ್ಥಾಪಿಸುವ ಉದ್ದೇಶವೂ ಇದೆ. ಇಂಥ ದೊಡ್ಡ ಜವಾಬ್ದಾರಿಗಳನ್ನು ನಾವು ನೀವು ಸೇರಿ ಮಾಡೋಣ. ಉಪಮುಖ್ಯಮಂತ್ರಿಯಾಗಿ ನಾನು ಎಲ್ಲ ರೀತಿಯ ಸಹಕಾರ ನೀಡಲು ಬದ್ಧ ಎಂದು ಅವರು ಭರವಸೆ ನೀಡಿದರು.

ಕರ್ನಾಟಕ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಯೋಗದಲ್ಲಿ ಪ್ರಾರಂಭವಾದ ನಿಮ್ಹಾನ್ಸ್ ಸಂಸ್ಥೆಇಂದು ದೇಶಕ್ಕೆ ಮಾದರಿಯಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಕೈಜೋಡಿಸಿದರೆ ಇಂಥ ಉತ್ತಮ ಸಂಸ್ಥೆ ಸ್ಥಾಪಿಸಬಹುದು ಎನ್ನಲು ಈ ಸಂಸ್ಥೆಯೇ ನಿರ್ದಶನ. ಸಂಸ್ಥೆಯ 75ನೇ ವರ್ಷಾಚರಣೆ ಪ್ರಯುಕ್ತ ಧರ್ಮಶಾಲೆ ನಿರ್ಮಿಸುವ ಆಶಯ ಬಹಳ ಉತ್ತಮವಾದುದು ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ನಮ್ಮ ಸಮಾಜದಲ್ಲಿ ಮಾನಸಿಕ ಸಮಸ್ಯೆ ಇದೆ ಎಂದು ಒಪ್ಪಿಕೊಂಡು ಚಿಕಿತ್ಸೆಗೆ ಬರುವವರ ಸಂಖ್ಯೆ ಅತಿ ವಿರಳ. ಅಂಥವರಿಗೆ ಉತ್ತಮ ಚಿಕಿತ್ಸೆ ಕೊಡದಿದ್ದರೆ ತಪ್ಪಾಗುತ್ತದೆ. ಆದರೆ, ಚಿಕಿತ್ಸೆ ನೀಡಲು ನಮ್ಮಲ್ಲಿ ಸಿಬ್ಬಂದಿಯ ಕೊರತೆ ಇದ್ದು, ಇದೇ ದೊಡ್ಡ ಸಮಸ್ಯೆ ಎಂದು ವೈದ್ಯ ಶಿಕ್ಷಣ ಸಚಿವರಾದ ಡಾ. ಸುಧಾಕರ್ ಹೇಳಿದ್ದಾರೆ. ಈ ಸಮಸ್ಯೆಗೆ ಆದಷ್ಟು ಬೇಗ ಅವರು ಪರಿಹಾರ ಕಂಡುಕೊಂಡು, ಉತ್ತಮ ಕಾರ್ಯಗಳನ್ನು ಮಾಡಲಿದ್ದಾರೆ ಎಂಬ ಭರವಸೆ ನನಗಿದೆ ಎಂದು ಡಾ. ಅಶ್ವತ್ಥನಾರಾಯಣ ಹೇಳಿದರು.

WhatsApp Image 2020 02 14 at 9.18.22 PM

ತಂತ್ರಜ್ಞಾನದ ಮೊರೆ
ರೋಗಿಗಳ ಸಮಸ್ಯೆಗಳನ್ನು ಅರಿತು ತ್ವರಿತವಾಗಿ ಸ್ಪಂದಿಸುತ್ತಿರುವ ನಿಮ್ಹಾನ್ಸ್ ಸಂಸ್ಥೆ, ರಾಜ್ಯ ಸರ್ಕಾರದ ಜತೆ ಕೈ ಜೋಡಿಸಿ ಹಲವು ಉತ್ತಮ ಕಾರ್ಯಕ್ರಮಗಳನ್ನು ಪರಿಚಯಿಸಿದೆ. ರೋಗಿಗಳಿಗೆ ಉತ್ತಮ ಸೇವೆ ಒದಗಿಸಲು ತಂತ್ರಜ್ಞಾನದ ಸದ್ಭಳಕೆ ಮಾಡಿಕೊಳ್ಳುತ್ತಿದೆ. ಜತೆಗೆ, ಮಕ್ಕಳು ಹಾಗೂ ಯುವ ಜನರಿಗೆ ಮಾನಸಿಕ ಚಿಕಿತ್ಸೆ ನೀಡುವ ‘ಯುವ ಸ್ಪಂದನೆ’ಯಂಥ ಹಲವು ಉತ್ತಮ ಕಾರ್ಯಕ್ರಮಗಳನ್ನು ಜಾರಿ ತಿಂದಿದೆ. ಬೆಂಗಳೂರಿನ ಸಂಸ್ಥೆಯ ಸಹಕಾರದಲ್ಲಿ ‘ಮೆಂಟಲ್ ಹೆಲ್ತ್ ಮ್ಯಾನೇಜ್ಮೆಂಟ್ ಪ್ರೋಗ್ರಾಂ’ ಸಾಫ್ಟ್ ವೇರ್ ಅಭಿವೃದ್ಧಿ ಪಡಿಸಿದ್ದು, ಇದು ಸಂಪನ್ಮೂಲ ಕೊರತೆಯ ಮಾಹಿತಿ ನೀಡುವ ಜತೆಗೆ ಸಿಬ್ಬಂದಿ ತರಬೇತಿಗೆ ಪೂರಕವಾಗಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ವೈದ್ಯ ಶಿಕ್ಷಣ ಸಚಿವ ಡಾ. ಸುಧಾಕರ್, ಸಂಸ್ಥೆ ನಿರ್ದೇಶಕ ಡಾ. ಬಿಎಸ್ ಗಂಗಾಧರ್, ಡಾ. ಸಿಎಸ್ ಶರ್ಮ, ಡಾ. ಆರ್. ಶೇಖರ್, ಡಾ. ಸತ್ರಪ್ರಭಾ, ಡಾ. ಗುರುರಾಜ್ ಉಪಸ್ಥಿತರಿದ್ದರು.

TAGGED:Ashwath NarayanbengaluruNimhans unitPublic TVtechnologyಅಶ್ವತ್ಥನಾರಾಯಣತಂತ್ರಜ್ಞಾನನಿಮ್ಹಾನ್ಸ್ ಘಟಕಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
4 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
22 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
23 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
40 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
40 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?