ಆನೇಕಲ್: ಮನೆಯಲ್ಲಿದ್ದವರ ಕೈಕಾಲು ಕಟ್ಟಿ ದರೋಡೆ ಮಾಡುತ್ತಿದ್ದ ಕುಖ್ಯಾತ ಅಂತರ್ ರಾಜ್ಯ ಕಳ್ಳರ ಗ್ಯಾಂಗ್‍ನ್ನು ಅತ್ತಿಬೆಲೆ (Attibele) ಪೊಲೀಸರು (Police) ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಎನ್ ಸತೀಶ್ ಕುಮಾರ್, ಮಣಿಕಂಠನ್, ಸತೀಶ್, ಅಯ್ಯನಾರ್, ಕಿರಣ್, ಸತೀಶ್ ಅಲಿಯಾಸ್ ಮಟನ್ ಸತೀಶ್ ಎಂದು ಗುರುತಿಸಲಾಗಿದೆ. ಆರೋಪಿಗಳು ತಮಿಳುನಾಡಿನ ಹೊಸೂರು ಮೂಲದದವರಾಗಿದ್ದಾರೆ. ಬಂಧಿತರು ಹಲವಾರು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಮನೆಯಲ್ಲಿ ಜನರಿದ್ದ ವೇಳೆಯೇ ತೆರಳಿ ಕೈಕಾಲು ಕಟ್ಟಿ ದರೋಡೆ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಇನ್ನೊಬ್ಬನ ಮೇಲೆ ದ್ವೇಷ ತೀರಿಸಿಕೊಳ್ಳಲು ಆತ್ಮೀಯ ಸ್ನೇಹಿತನನ್ನೇ ಕೊಂದ ಕಿರಾತಕ!
ಆನೇಕಲ್‍ನಲ್ಲಿ ಕೀರ್ತನಾ ಎಂಬ ಯುವತಿಯನ್ನು ಮನೆಯಲ್ಲಿ ಕಟ್ಟಿ ಹಾಕಿ ಚಿನ್ನಾಭರಣ ದೋಚಿ ಆರೋಪಿಗಳು ಪರಾರಿಯಾಗಿದ್ದರು. ಅಲ್ಲದೇ ಕಳೆದ ನ.28ರಂದು ಅತ್ತಿಬೆಲೆಯ ಕುಮಾರ್ ಲೇಔಟ್‍ನ ಎಲ್‍ಐಸಿ ಏಜೆಂಟ್ ದೇವರಾಜೇಗೌಡ ಎಂಬವರ ಮನೆಯಲ್ಲಿ ದರೋಡೆ ಮಾಡಿದ್ದರು. ಅವರ ಮನೆಗೆ ಎಲ್‍ಐಸಿ ಪಾಲಿಸಿ ಮಾಡಿಸಬೇಕೆಂದು ಮೂರು ಬಾರಿ ಬಂದು ಹೋಗಿದ್ದರು. ಬಳಿಕ ಹೊಂಚು ಹಾಕಿ ಮಾರಕಾಸ್ತ್ರಗಳನ್ನ ತೋರಿಸಿ ಕೈಕಾಲು ಹಾಗೂ ಬಾಯಿಗೆ ಟೇಪ್ ಸುತ್ತಿ 12,50,000 ರೂ. ಮೌಲ್ಯದ ಚಿನ್ನಾಭರಣ ಹಾಗೂ ಹಣವನ್ನು ದೋಚಿದ್ದರು.
- Advertisement
- Advertisement
ದೇವರಾಜೇಗೌಡರ ಮನೆಯ ಸಮೀಪವೇ ಬಾಡಿಗೆ ಮನೆಯಲ್ಲಿದ್ದ ಆರೋಪಿ ಮಣಿಕಂಠನ್ ಮನೆಯಲ್ಲಿ ಇರುವವರ ಬಗ್ಗೆ ಹಾಗೂ ಹಣದ ಬಗ್ಗೆ ಮಾಹಿತಿ ಕಲೆಹಾಕಿದ್ದ. ಬಳಿಕ ಹೊಂಚು ಹಾಕಿ ಕಳ್ಳತನ ಎಸಗಿದ್ದರು. ಮತ್ತೊಂದು ಪ್ರಕರಣದಲ್ಲಿ ಹೊಸಕೋಟೆಯ ಅನುಗೊಂಡನಹಳ್ಳಿಯಲ್ಲಿ ಕಳೆದ ಜ.23ರಂದು ನಾರಾಯಣಸ್ವಾಮಿ ಎಂಬವರ ಮನೆಗೆ ನುಗ್ಗಿ ಚಾಕು ತೋರಿಸಿ ಕಳ್ಳತನ ನಡೆಸಿದ್ದರು.
ಒಟ್ಟು ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ 11 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸಿಬ್ಬಂದಿ ಕಾರ್ಯವನ್ನು ಪ್ರಶಂಸಿಸಿದ್ದಾರೆ. ಇದನ್ನೂ ಓದಿ: ನನ್ನ ಕೆಲಸದ ಟೈಂ ಮುಗಿದಿದೆ ಅಂದಿದ್ದಕ್ಕೆ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಥಳಿತ!
Web Stories