ಚಾಮರಾಜನಗರ: ಮಂಗಳವಾರ ಬೆಂಗಳೂರು ಬಂದ್ (Bengaluru Bandh) ಹಿನ್ನೆಲೆ ಕರ್ನಾಟಕ (Karnataka) ಹಾಗೂ ತಮಿಳುನಾಡಿನ (Tamil Nadu) ನಡುವೆ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು (KSRTC Bus) ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಚಾಮರಾಜನಗರ ಜಿಲ್ಲೆಯ ಮೂಲಕ ತಮಿಳುನಾಡಿಗೆ ತೆರಳುವ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಪುಣಜನೂರು, ಕೆಕ್ಕನಹಳ್ಳ, ಪಾಲಾರ್, ನಾಲಾರೋಡ್ ಅರ್ಧನಾರೀಪುರ ಚೆಕ್‌ಪೋಸ್ಟ್‌ಗಳ ಮೂಲಕ ಹೋಗುವ ಬಸ್‌ಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಪೊಲೀಸರ ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಬೆಂಗಳೂರು ಬಂದ್- ಎಂದಿನಂತೆ ಸಂಚರಿಸುತ್ತಿವೆ ಬಿಎಂಟಿಸಿ
ಈ ಬಗ್ಗೆ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿರುವ ಚಾಮರಾಜನಗರ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಅಶೋಕ್, ಎರಡೂ ರಾಜ್ಯಗಳ ನಡುವೆ ಸಾರಿಗೆ ಬಸ್‌ಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಕರ್ನಾಟಕಕ್ಕೆ ಬರುವ ತಮಿಳುನಾಡಿನ ಸಾರಿಗೆ ಬಸ್‌ಗಳ ಸಂಚಾರವು ಸಹ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಬಂದ್ – ಕುರುಬೂರು ಶಾಂತಕುಮಾರ್ ಪೊಲೀಸ್ ವಶಕ್ಕೆ
Web Stories