ಬೆಂಗಳೂರು: ನಾಳೆ ನಡೆಯುವ ಭಾರತ್ ಬಂದ್ ನಲ್ಲಿ ಕೆ.ಎಸ್.ಆರ್.ಟಿ.ಸಿ, ಬಿಎಂಟಿಸಿ ಸಿಬ್ಬಂದಿ ಭಾಗವಹಿಸಬಾರದು. ಸಂಸ್ಥೆಯ ಕೆಲಸಕ್ಕೆ ಗೈರು ಹಾಜರಾದರೆ ಅಂತಹವರ ವೇತನವನ್ನು ಕಡಿತಗೊಳಿಸಲಾಗುವುದು ಹಾಗೂ ಅವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದೆಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸಾರಿಗೆ ಸಿಬ್ಬಂದಿಗೆ ವಾರ್ನಿಂಗ್ ಕೊಟ್ಟಿದ್ದಾರೆ.
ಸಾರಿಗೆ ನಿಗಮಗಳನ್ನು ಸರ್ಕಾರವು ಸಾರ್ವಜನಿಕ ಅಗತ್ಯ ಸೇವಾ ಸಂಸ್ಥೆ ಎಂದು ಘೋಷಿಸಿದೆ. ಆ ಪ್ರಕಾರ ಸಮರ್ಪಕವಾದ ಸಾರಿಗೆ ಸೌಲಭ್ಯವನ್ನು ಒದಗಿಸುವುದು ಪ್ರತಿಯೊಬ್ಬ ಅಧಿಕಾರಿ ಹಾಗೂ ನೌಕರರ ಆದ್ಯ ಕರ್ತವ್ಯವಾಗಿದೆ. ಹೀಗಾಗಿ ಕೆ.ಎಸ್.ಆರ್.ಟಿ.ಸಿ ಹಾಗೂ ಬಿಎಂಟಿಸಿ ಎಂದಿನಂತೆ ಕಾರ್ಯ ನಿರ್ವಹಿಸಬೇಕೆಂದು ಮುನ್ನೆಚ್ಚರಿಕೆ ನೀಡಲಾಗಿದೆಂದು ತಿಳಿಸಿದ್ದಾರೆ.
Advertisement
Advertisement
ಸಾರ್ವಜನಿಕರಿಗೆ ಅಗತ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಬಂದ್-ಮುಷ್ಕರದಲ್ಲಿ ಭಾಗವಹಿಸುವ ಯಾರೊಬ್ಬರೂ ಸರ್ಕಾರಿ ಆಸ್ತಿ- ಪಾಸ್ತಿಗಳಿಗೆ ಅದರಲ್ಲೂ ವಿಶೇಷವಾಗಿ ಸಾರಿಗೆ ಬಸ್ಸುಗಳಿಗೆ ಹಾನಿ ಉಂಟುಮಾಡುವ ದುಷ್ಕೃತ್ಯಕ್ಕೆ ಮುಂದಾಗಬಾರದು. ಒಂದು ವೇಳೆ ಕಾನೂನು ಉಲ್ಲಂಘಿಸಿ ಅಹಿತಕರ ಘಟನೆಗಳಿಗೆ ಯತ್ನಿಸಿದ್ದಲ್ಲಿ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ನಮ್ಮ ಸರ್ಕಾರ ಹಿಂದೆ ಮುಂದೆ ನೋಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.
Advertisement
ಈ ರೀತಿಯ ಬಂದ್‍ಗಳಿಂದಾಗಿ ನಮ್ಮ ಸರ್ಕಾರಿ ಸಂಸ್ಥೆಗಳಿಗೆ ನಷ್ಟವಾಗುವುದಲ್ಲದೇ ರಾಷ್ಟ್ರದ ಆರ್ಥಿಕ ಚಟುವಟಿಕೆಗಳು ಅಧೋಗತಿಗೆ ತಲುಪುವಂತಾಗುತ್ತದೆ ಎಂದು ಪ್ರಕಟನೆ ಹೊರಡಿಸಿದ್ದಾರೆ.