ಬೆಂಗಳೂರು: ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಂಯೋಜಿತ ಯೋಜನೆಯಾದ ಆಯುಷ್ಮಾನ್ ಮತ್ತು ಆರೋಗ್ಯ ಕರ್ನಾಟಕ ಕಾರ್ಡ್ ಅನ್ನು ಗ್ರಾಮಪಂಚಾಯತಿಗಳಡಿಯಲ್ಲಿ ಬರುವ ಬಾಪೂಜಿ ಸೇವಾಕೇಂದ್ರಗಳಲ್ಲೇ ವಿತರಿಸುವಂತೆ ಸರ್ಕಾರ ಆದೇಶಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಒದಗಿಸುತ್ತಿರುವ ಆನ್ ಲೈನ್ ಸೇವೆ ಮೂಲಕವೇ ಕಾರ್ಡ್ ವಿತರಿಸುವಂತೆ ಸರ್ಕಾರ ಆದೇಶಿಸಿದೆ.
Advertisement
Advertisement
ಈ ಹಿಂದೆ ಆಯುಷ್ಮಾನ್ ಭಾರತ್ ಮತ್ತು ಆರೋಗ್ಯ ಕರ್ನಾಟಕ ಕಾರ್ಡ್ ಪಡೆಯಬೇಕಾದರೆ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ದಾಖಲಾತಿಗಳನ್ನು ಸಲ್ಲಿಸಿ ಪಡೆಯಬೇಕಿತ್ತು. ಆದರೆ ಈಗ ಗ್ರಾಮೀಣ ಭಾಗದ ಜನರಿಗೆ ತ್ವರಿತವಾಗಿ ಕಾರ್ಡ್ ಲಭ್ಯವಾಗಲಿ ಎಂದು ಸರ್ಕಾರ ಈ ಆದೇಶ ಹೊರಡಿಸಿದೆ.
Advertisement
ಆಯುಷ್ಮಾನ್ ಭಾರತ್ ಮತ್ತು ಆರೋಗ್ಯ ಕರ್ನಾಟಕ ಯೋಜನೆಯಡಿಯಿಂದ ಬಿಪಿಎಲ್ ಕಾರ್ಡ್ 5 ಲಕ್ಷದ ವರೆಗೂ ಮತ್ತು ಎಪಿಲ್ ಕಾರ್ಡ್‍ದಾರರು 1.50 ಲಕ್ಷದವರೆಗೂ ಉಚಿತವಾಗಿ ಚಿಕಿತ್ಸೆ ಪಡೆಯಬಹುದಾಗಿದೆ. ಹಾಗಾಗಿ ಗ್ರಾಮೀಣ ಭಾಗದ ಜನರಿಗೆ ಈ ಕಾರ್ಡ್ ತ್ವರಿತಗತಿಯಲ್ಲಿ ಸಿಗಲೆಂದು ಸರ್ಕಾರ ಗ್ರಾಮ ಪಂಚಾಯತಿಯ ಬಾಪೂಜಿ ಸೇವಾ ಕೇಂದ್ರಗಳಲ್ಲೇ ವಿತರಿಸುವಂತೆ ಆದೇಶಿಸಿದೆ.