ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಿರಿಯ ಅಧಿಕಾರಿ ತನ್ನ ಕೈಕೆಳಗೆ ಕೆಲಸ ಮಾಡುವ ಸಿಬ್ಬಂದಿಯನ್ನು ಕ್ಷುಲ್ಲಕ ಕಾರಣಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಲು ಮುಂದಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಬಿಬಿಎಂಪಿಯ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಹಲಸೂರು ವಾರ್ಡ್ ಗೆ ಭೇಟಿ ನೀಡಿದ ವೇಳೆ ಅಲ್ಲಿನ ಸಹಾಯಕ ಹೆಲ್ತ್ ಇನ್ಸ್‌ಪೆಕ್ಟರ್ ಸಂಜಯ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರೊ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪೌರಕಾರ್ಮಿಕರ ಹಾಜರಾತಿ, ಸರಿಯಾದ ಪೌರಕಾರ್ಮಿಕರ ಸಂಖ್ಯೆ ಮಾಹಿತಿ ನೀಡಲಿಲ್ಲ ಎಂಬ ಕಾರಣಕ್ಕೆ ಶುರುವಾದ ವಾಗ್ವಾದದ ಮಧ್ಯೆ ಅವಾಚ್ಯ ಶಬ್ದ ಬಳಸಿ ಸಹಾಯಕ ಹೆಲ್ತ್ ಇನ್ಸ್‌ಪೆಕ್ಟರ್‌ಗೆ ಜಂಟಿ ಆಯುಕ್ತರು ನಿಂದಿಸಿರುವುದು ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.