– ಇರೋಬರೋ ದಂಡ ಕಟ್ಟಿ, ವಾಹನ ತಗೊಂಡು ಹೋಗಿ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 130ರ ಗಡಿ ದಾಟಿದೆ. ಆದರೂ ಜನ ಸಾಮಾನ್ಯರು ಎಚ್ಚೆತ್ತುಕೊಳ್ಳುತ್ತಿಲ್ಲ. ಇದರಿಂದಾಗಿ ಬಿಬಿಎಂಪಿ ಟೀಂ ಫೀಲ್ಡಿಗೆ ಇಳಿದಿದೆ.
ಬೆಂಗಳೂರಿನಲ್ಲಿ ಮತ್ತಷ್ಟು ಕಠಿಣ ನಿಮಯಗಳನ್ನು ಬಿಬಿಎಂಪಿ ಜಾರಿಗೆ ತಂದಿದೆ. ಮಾಸ್ಕ್ ಧರಿಸದೇ ಓಡಾಡಿದ್ರೆ 1 ಸಾವಿರ ರೂಪಾಯಿ ದಂಡ ಹಾಕಲಾಗುತ್ತದೆ. 9 ಗಂಟೆವರೆಗೂ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ 9 ಗಂಟೆ ಬಳಿಕ ಅಗತ್ಯ ವಸ್ತು ಅಂತ ಮಾರುಕಟ್ಟೆ ಸುತ್ತಮುತ್ತ ಬಂದವರಿಗೆ ಬಿಸಿ ಮುಟ್ಟಿಸಲು ಬಿಬಿಎಂಪಿ ಟೀಂ ಮುಂದಾಗಿದೆ.
Advertisement
Advertisement
ಟೌನ್‍ಹಾಲ್, ಮಾರುಕಟ್ಟೆ, ಮೈಸೂರ್ ರೋಡ್ ಎಲ್ಲ ಕಡೆ ಕಠಿಣ ನಿಮಯ ಪಾಲನೆಗೆ ಬಿಬಿಎಂಪಿ ಆದ್ಯತೆ ನೀಡುತ್ತಿದೆ. ಹೀಗಾಗಿ 9 ಗಂಟೆ ಬಳಿಕ ರೋಡ್‍ಗೆ ಇಳಿದ್ರೆ ಫುಲ್ ಕ್ಲಾಸ್, ವೆಹಿಕಲ್ ಸೀಜ್ ಮಾಡಲಾಗುತ್ತದೆ. ಈ ಮೂಲಕ ಸವಾರರು, ಚಾಲಕರಿಂದ ಇರೋಬರೋ ದಂಡ ಕಟ್ಟಿಸಿಕೊಂಡು, ವಾಹನ ಬಿಟ್ಟು ಕಳಿಸಲು ಪೊಲೀಸರು ನಿರ್ಧರಿಸಿದ್ದಾರೆ ಎನ್ನಲಾಗಿದೆ.
Advertisement
ಲಾಕ್‍ಡೌನ್ ವೇಳೆ ಸೀಜ್ ಮಾಡಲಾದ ವಾಹನಗಳನ್ನು ಇಂದಿನಿಂದ ಬಿಡುಗಡೆ ಮಾಡಲಾಗುತ್ತದೆ. ಹೈಕೋರ್ಟ್ ನೀಡಿರುವ ಆದೇಶದಲ್ಲಿ ಲಾಕ್‍ಡೌನ್ ವೇಳೆ ಸೀಜ್ ಮಾಡಿರುವ ವಾಹನಗಳಿಗೆ ಫೈನ್ ಹಾಕಿ ರಿಲೀಸ್ ಮಾಡಬೇಕು. ಅದರಲ್ಲಿ ನಾಲ್ಕು ಚಕ್ರದ ವಾಹನಗಳಿಗೆ ಒಂದು ಸಾವಿರ ದಂಡ ಮತ್ತು ದ್ವಿಚಕ್ರ ಮತ್ತು ಆಟೋ ರಿಕ್ಷಾಗಳಿಗೆ 500 ದಂಡ ವಿಧಿಸಬೇಕು. ಜೊತೆಗೆ ಇನ್ಶೂರೆನ್ಸ್ ಸೇರಿದಂತೆ ವಾಹನದ ಎಲ್ಲ ದಾಖಲೆಗಳನ್ನು ಪರಿಶೀಲಿಸಿ ನಂತರ ವಾಹನಗಳನ್ನು ನೀಡುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದೆ.
Advertisement
ಈ ವಿಚಾರವಾಗಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಭಾಸ್ಕರ್ ರಾವ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ತೀರ್ಮಾನದಂತೆ ನಾಳೆಯಿಂದ ಸೀಜ್ ಆಗಿರುವ ವಾಹನಗಳ ಬಿಡುಗಡೆ ಮಾಡಲಾಗುತ್ತದೆ. ಆದರೆ ಏಕಾಏಕಿ ಜನರು ಬರುವ ಸಾಧ್ಯತೆಗಳು ಇರುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟವಾಗಲಿದೆ. ಹೀಗಾಗಿ ಕೆಲವು ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ತಿಳಿಸಿದ್ದರು.
ಬೆಂಗಳೂರಿನಲ್ಲಿ ಲಾಕ್‍ಡೌನ್ ಉಲ್ಲಂಘಿಸಿ ಪ್ರಯಾಣಿಸುತ್ತಿದ್ದ ವಾಹನಗಳನ್ನು ಮಾರ್ಚ್ 30ರಿಂದ ಸೀಜ್ ಮಾಡಲಾಗಿದೆ. ಈವರೆಗೂ 47 ಸಾವಿರಕ್ಕೂ ಹೆಚ್ಚು ವಾಹನಗಳು ಸೀಜ್ ಆಗಿವೆ. ಈಗ ವಾಹನಗಳನ್ನು ದಾಖಲಾತಿ ಪರಿಶೀಲಿಸಿ ಬಿಡುಗಡೆ ಮಾಡಲಾಗುತ್ತದೆ. ಆದರೆ ಎಲ್ಲವನ್ನೂ ಒಂದೇ ದಿನ ಕೊಡುವುದಿಲ್ಲ. ಹಂತ ಹಂತವಾಗಿ ಬಿಡುಗಡೆ ಮಾಡುತ್ತೇವೆ ಎಂದು ಮಾಹಿತಿ ನೀಡಿದ್ದರು.