ಬೆಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಮಾದಕವಸ್ತುಗಳನ್ನ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಇಜಾಕ್ ನ್ಯೂಜಿಗೂವ್ (40) ಬಂಧಿತ ವಿದೇಶಿ ಪ್ರಜೆ. ಆರೋಪಿಯು ನೈಜೀರಿಯಾ ಮೂಲದವನಾಗಿದ್ದು, ವಿದ್ಯಾರ್ಥಿ ವೀಸಾದ ಅಡಿ ಬೆಂಗಳೂರಿಗೆ ಬಂದಿದ್ದಾನೆ. ಪೊಲೀಸರು ಬಂಧಿತ ಆರೋಪಿಯಿಂದ ಒಂದು ಕೆಜಿ ಗಾಂಜಾ, 19 ಗ್ರಾಂ ಕೊಕೇನ್ ಹಾಗೂ ಎರಡು ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಎಟಿಎಂ ದೋಚಿ ಐಶಾರಾಮಿ ಜೀವನ ನಡೆಸುತ್ತಿದ್ದ 3 ವಿದೇಶಿಯರು ಸೇರಿ ಐವರು ಅರೆಸ್ಟ್
Advertisement
Advertisement
ವಿಲಾಸಿ ಜೀವನದ ಗೀಳು ಹೊಂದಿದ್ದ ಇಜಾಕ್ ನ್ಯೂಜಿಗೂವ್ ಕಡಿಮೆ ಬೆಲೆಗೆ ಗಾಂಜಾ, ಕೊಕೇನ್ ತಂದು ಪ್ರತಿಷ್ಠಿತ ಕಾಲೇಜು ಹಾಗೂ ಶಾಲೆಗಳ ವಿದ್ಯಾರ್ಥಿಗಳಿಗೆ ಮಾರಾಟ ಮಾಡಿ ಹಣ ಸಂಪಾದಿಸುತ್ತಿದ್ದ. ಇಜಾಕ್ ಬೆಂಗಳೂರು ಹೊರವಲಯದ ಬಾಗಲೂರು ಸುತ್ತಮುತ್ತ ಮಾದಕವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಸಿಸಿಬಿ ಪೊಲೀಸರಿಗೆ ಖಚಿತ ಮಾಹಿತಿ ಸಿಕ್ಕಿತ್ತು. ತಕ್ಷಣವೇ ಇಜಾಕ್ ನ್ಯೂಜಿಗೂವ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು. ಭರ್ಜರಿ ಕಾರ್ಯಾಚರಣೆ ಮೂಲಕ ಶುಕ್ರವಾರ ಆರೋಪಿಯನ್ನು ಬಂಧಿಸಿದ್ದಾರೆ.
Advertisement
ಇಜಾಕ್ ನ್ಯೂಜಿಗೂವ್ ವಿರುದ್ಧ ಬಾಗಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.