– ಬೆಳಗಾವಿವರೆಗೆ ರೈಲು ಸೇವೆ ವಿಸ್ತರಣೆಗೆ ಸಚಿವ ಅಶ್ವಿನಿ ವೈಷ್ಣವ್ ಸಮ್ಮತಿ
ನವದೆಹಲಿ: ಅತಿ ಶೀಘ್ರದಲ್ಲಿಯೇ ಬೆಂಗಳೂರು – ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು (Bengaluru-Belgaum Vande Bharat Train) ಸಂಚರಿಸಲಿದೆ.
Advertisement
ಇಂದು ನವದೆಹಲಿಯ ನನ್ನ ಸಂಸದೀಯ ಕಛೇರಿಯಲ್ಲಿ ಬೆಳಗಾವಿ ಸಂಸದರಾದ ಶ್ರೀ @JagadishShettar ಜಗದೀಶ ಶೆಟ್ಟರ ಅವರೊಂದಿಗೆ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ @AshwiniVaishnaw ಅವರನ್ನು ಭೇಟಿಯಾಗಿ ವಂದೇ ಭಾರತ ರೈಲನ್ನು ಬೆಳಗಾವಿಯವರೆಗೆ ವಿಸ್ತರಿಸುವ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು. ಈ ಹಿಂದೆ ರಾಜ್ಯಸಭಾ ಸದಸ್ಯರಾದ… pic.twitter.com/ptUCjmFDU1
— Pralhad Joshi (@JoshiPralhad) February 10, 2025
Advertisement
ನವದೆಹಲಿಯಲ್ಲಿ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಅವರು ತಮ್ಮ ಸಂಸದೀಯ ಕಚೇರಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಮತ್ತು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಜೊತೆ ಸಭೆ ನಡೆಸಿದರು. ಈ ವೇಳೆ, ಬೆಂಗಳೂರಿನಿಂದ ಬೆಳಗಾವಿವರೆಗೆ ವಂದೇ ಭಾರತ್ ರೈಲು ಸಂಚಾರ ಕುರಿತ ಸಾಧಕ-ಬಾಧಕ ಬಗ್ಗೆ ವಿಸ್ತೃತ ಚರ್ಚೆ ನಡೆಸಿದರು.
Advertisement
Advertisement
ವಂದೇ ಭಾರತ್ ರೈಲನ್ನು ಬೆಳಗಾವಿವರೆಗೆ ವಿಸ್ತರಿಸುವ ಕುರಿತು ಈ ಹಿಂದೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹಾಗೂ ಬೆಳಗಾವಿ ಶಾಸಕ ಅಭಯ ಪಾಟೀಲ್ ಸಹ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದಷ್ಟೇ ಪ್ರಹ್ಲಾದ್ ಜೋಶಿಯವರು ಹುಬ್ಬಳ್ಳಿಯ ತಮ್ಮ ಲೋಕಸಭಾ ಕ್ಷೇತ್ರದ ಕಾರ್ಯಾಲಯದಲ್ಲಿ ನೈರುತ್ಯ ವಲಯದ ರೇಲ್ವೆ ಜನರಲ್ ಮ್ಯಾನೇಜರ್, DRM ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬೆಂಗಳೂರಿನಿಂದ ಬೆಳಗಾವಿವರೆಗೆ ವಂದೇ ಭಾರತ್ ರೈಲು ಸಂಚಾರ ವಿಸ್ತರಣೆ ಬಗ್ಗೆ ವರದಿ ನೀಡುವಂತೆ ಸೂಚಿಸಿದ್ದರು.
ವಂದೇ ಭಾರತ್ ರೈಲು ಬೆಳಗ್ಗೆ ಬೆಳಗಾವಿಯಿಂದ ಹೊರಟು ಬೆಂಗಳೂರು ತಲುಪಿ ಮತ್ತೆ ಬೆಂಗಳೂರಿಂದ ಬೆಳಗಾವಿಗೆ ರಾತ್ರಿ ತಲುಪುವ ಹಾಗೆ ವೇಳೆ ನಿಗದಿಗೊಳಿಸಿ ಎಂದು ಅವರು ನೈಋತ್ಯ ರೈಲ್ವೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು. ರೈಲ್ವೆ ಅಧಿಕಾರಿಗಳು ತಾಂತ್ರಿಕ ಅಂಶಗಳನ್ನು ವಿಶ್ಲೇಷಿಸಿ, ಸಾಧಕ-ಬಾಧಕಗಳನ್ನು ಅವಲೋಕಿಸಿ ವರದಿ ಸಲ್ಲಿಸಿದ್ದು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಈ ವರದಿ ಪರಿಗಣಿಸಿ ಬೆಂಗಳೂರು – ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು ಸಂಚಾರಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ತೋರಿದ್ದಾರೆ.
ವೇಳಾಪಟ್ಟಿ ಶೀಘ್ರ ಬಿಡುಗಡೆ: ಅತೀ ಶೀಘ್ರದಲ್ಲಿಯೇ ಬೆಳಗಾವಿ – ಬೆಂಗಳೂರಿನ ಮಧ್ಯೆ ವಂದೇ ಭಾರತ್ ರೈಲಿನ ಆರಂಭದ ವೇಳಾಪಟ್ಟಿ ಬಿಡುಗಡೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಈ ರೈಲು ಸಂಚಾರದಿಂದ ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿ ಭಾಗದ ಜನತೆಗೆ ಬೆಂಗಳೂರು ಪ್ರಯಾಣಕ್ಕೆ ಅನುಕೂಲವಾಗಲಿದೆ. ನಮ್ಮ ಮನವಿಗೆ ಸ್ಪಂದಿಸಿ ವಂದೇ ಭಾರತ್ ರೈಲನ್ನು ಬೆಳಗಾವಿವರೆಗೆ ವಿಸ್ತರಿಸಲು ಸಮ್ಮತಿ ಸೂಚಿಸಿದ ಕೇಂದ್ರ ರೈಲ್ವೆ ಸಚಿವರಿಗೆ ಧನ್ಯವಾದ ಅರ್ಪಿಸುವೆ ಎಂದಿದ್ದಾರೆ.