– ಬಿಬಿಎಂಪಿ, ಮನೆ ಮಾಲೀಕರ ನಿರ್ಲಕ್ಷ್ಯ
ಬೆಂಗಳೂರು: ದೇವರಚಿಕ್ಕನಹಳ್ಳಿ ಅಪಾರ್ಟ್‍ಮೆಂಟ್ ಅಗ್ನಿ ಅವಘಡಕ್ಕೆ ಕಾರಣ ನಿಗೂಢವಾಗಿದ್ದು, ತಾಯಿ-ಮಗಳದ್ದು ಅಸಹಜ ಸಾವು ಎಂದು ಬೇಗೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೀಗ ಅಪಾರ್ಟ್‍ಮೆಂಟ್‍ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಹೇಗೆ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Advertisement
ಭೀಮ್‍ಸೇನ್ ರಾವ್ ಅವರು ಈ ಅಪಾರ್ಟ್ ಮೆಂಟ್ ಅನ್ನು 2018ರಲ್ಲಿ ಖರೀದಿಸಿದ್ದಾರೆ. ಇದೀಗ ಈ ಅಪಾರ್ಟ್ ಮೆಂಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿದ್ದಾರೆ. ಪ್ರಾಥಮಿಕ ತನಿಖೆ ವೇಳೆ ಗ್ಯಾಸ್‍ನಿಂದ ಬೆಂಕಿ ಹೊತ್ತಿಲ್ಲ ಎಂಬುದು ಬೆಳಕಿಗೆ ಬಂದಿದೆ. ಹೀಗಾಗಿ ಯುಪಿಎಸ್, ಮೊಬೈಲ್ ಚಾರ್ಜಿಂಗ್, ದೇವರ ಮನೆಯ ದೀಪದ ಮೇಲೆ ಅನುಮಾನ ವ್ಯಕ್ತವಾಗುತ್ತಿದೆ. ಯಾಕೆಂದರೆ ಮನೆಯಲ್ಲಿದ್ದ ಎರಡೂ ಸಿಲಿಂಡರ್ ಕೂಡ ಸೇಫ್ ಆಗಿವೆ. ಹೀಗಾಗಿ ಎಲೆಕ್ಟ್ರಾನಿಕ್ ಐಟಂ ಬ್ಲಾಸ್ಟ್ ಆಗಿರುವ ಶಂಕೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಬೆಂಕಿ ದುರ್ಘಟನೆಗೆ ಕಾರಣ ನಿಗೂಢ – ಘಟನೆ ಬಗ್ಗೆ ಕಂಪ್ಲೆಂಟ್ ಕೊಟ್ಟ ಮನೆ ಮಾಲೀಕ
Advertisement
Advertisement
ಬೆಂಕಿ ಬಿದ್ದ ಬಳಿಕ ಪತಿ ಭೀಮಸೇನ್‍ರಿಗೆ ಪತ್ನಿ ಭಾಗ್ಯ ರೇಖಾ ಕರೆ ಮಾಡಿದ್ದಾರೆ. ಒಳಗೆ ಬೆಂಕಿ ಬಿದ್ದಿದೆ ಬೇಗ ಬನ್ನಿ ಅಂತ ಕೂಗಿಕೊಂಡಿದ್ದಾರೆ. ಇತ್ತ ಅಪಾರ್ಟ್‍ಮೆಂಟ್‍ಗೆ ಇಂದು 2 ತನಿಖಾ ತಂಡಗಳು ಭೇಟಿ ನೀಡಲಿವೆ. ಎಫ್‍ಎಸ್‍ಎಲ್, ಎಲೆಕ್ಟ್ರಿಕಲ್ ಎಂಜಿನಿಯರ್ ತಂಡದಿಂದ ಪರಿಶೀಲನೆ ನಡೆಯಲಿದೆ. ಬೆಂಕಿಯ ಕಾರಣ ತಿಳಿಯಲು ತಂಡ ಪರಿಶೀಲನೆ ನಡೆಸಲಿದೆ. ಮತ್ತೊಂದೆಡೆ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಕೂಡ ಈ ಬಗ್ಗೆ ತನಿಖೆ ನಡೆಸಲಿದ್ದಾರೆ. ಇದನ್ನೂ ಓದಿ: ನಿನ್ನೆಯಷ್ಟೇ ಅಮೆರಿಕದಿಂದ ಬೆಂಗಳೂರಿಗೆ ಲ್ಯಾಂಡ್ – ಇಂದು ಬೆಂಕಿಗೆ ಬಲಿ
Advertisement
ಮಾಲೀಕರ ನಿರ್ಲಕ್ಷ್ಯ..?
ಅಗ್ನಿ ದುರಂತಕ್ಕೆ ಬಿಬಿಎಂಪಿ, ಅಪಾರ್ಟ್ ಮೆಂಟ್ ಮಾಲೀಕರ ನಿರ್ಲಕ್ಷ್ಯವೇ ಕಾರಣ ಅಂತ ಹೇಳಲಾಗುತ್ತಿದೆ. ಅಪಾರ್ಟ್ ಮೆಂಟ್‍ನಲ್ಲಿ ರೂಲ್ಸ್ ಫಾಲೋನೇ ಆಗಿಲ್ಲ. ಹೀಗಾಗಿ ಈ ಇಬ್ಬರ ನಿರ್ಲಕ್ಷ್ಯದಿಂದ ಎರಡು ಜೀವಗಳು ಸಜೀವ ದಹನವಾಗಿವೆ ಎಂದು ಸಾರ್ವಜನಿಕರು ದೂರಿದ್ದಾರೆ.
ಅಪಾರ್ಟ್ ಮೆಂಟ್‍ನಲ್ಲಿ ಜನರನ್ನು ಎಚ್ಚರಿಸುವ ಸೈರನ್ ವ್ಯವಸ್ಥೆ ಇಲ್ಲ. ಬೆಂಕಿ, ಹೊಗೆ ನಂದಿಸಲು ವಾಟರ್ ಲೈನ್ ವ್ಯವಸ್ಥೆ ಇಲ್ಲ. ಪ್ರತಿ ಅಂತಸ್ತಿನಲ್ಲಿ ರಾಸಾಯನಿಕ ಮಿಶ್ರಿತ ಬೆಂಕಿ ನಂದಿಸುವ ಆಕ್ಸಿಜನ್ ಸಿಲಿಂಡರ್ ವ್ಯವಸ್ಥೆ ಇಲ್ಲ. ಅಪಾರ್ಟ್‍ಮೆಂಟ್ ಅಕ್ಕಪಕ್ಕ ಟ್ರಾನ್ಸ್ ಫಾರ್ಮರ್ ಇರಬಾರದು. ಆದರೆ ಅಪಾರ್ಟ್‍ಮೆಂಟ್ ಕಾಂಪೌಂಡ್ ಒಳಗೇ ಟ್ರಾನ್ಸ್ ಫಾರ್ಮರ್ ಇದೆ. ಇದ್ಯಾವುದನ್ನೂ ಬಿಬಿಎಂಪಿ ಪರಿಶೀಲನೆ ಮಾಡಿಯೇ ಇಲ್ಲ ಎಂದು ಹೇಳಲಾಗುತ್ತಿದೆ.
ಒಟ್ಟಿನಲ್ಲಿ ಅಗ್ನಿ ಅವಘಢ ಸಂಭಿಸಿದ ಪರಿಣಾಮ ನೋಡ ನೋಡುತ್ತಿದ್ದಂತೆಯೇ ತಾಯಿ-ಮಗಳು ಸಜೀವ ದಹನಾಗಿದ್ದಾರೆ. ಇಂದು ಇಬ್ಬರ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಸೇಂಟ್ ಜಾನ್ ಆಸ್ಪತ್ರೆಯಲ್ಲಿ ನೆರವೇರಿಸಿ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಾಗುತ್ತದೆ.