Bengaluru City

ಟೀಚರ್ ಆದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ

Published

on

Share this

ಬೆಂಗಳೂರು: ಸದಾ ರಾಜಕೀಯದಲ್ಲಿ ಬ್ಯುಸಿಯಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಇಂದು ರಾಜಕೀಯ ವಿಭಾಗದ ಟೀಚರ್ ಆಗಿ ವಿದ್ಯಾರ್ಥಿಗಳಿಗೆ ಪಾಠ ಮಾಡೋ ರೀತಿ ಶಾಸಕರು, ಪಕ್ಷದ ನಾಯಕರಿಗೆ ಪಾಠ ಮಾಡಿದರು.

ಬಿಡದಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ಕಾರ್ಯಾಗಾರದಲ್ಲಿ ಇಂದು ಪಕ್ಷ ಸಂಘಟನೆ ಕುರಿತು ಶಾಸಕರು ಮತ್ತು ನಾಯಕರಿಗೆ ಮನವಿ ಮಾಡಿಕೊಡಲು ಟೀಚರ್ ಆಗಿದ್ದರು. ಪವರ್ ಪಾಯಿಂಟ್ ಪ್ರೆಸಂಟೇಷನ್ ಮೂಲಕ ಪಕ್ಷದ 2023 ಚುನಾವಣೆಯ ರೋಡ್ ಮ್ಯಾಪ್ ತೆರೆದಿಟ್ಟರು.

ದೇಶದಲ್ಲಿ ಪ್ರಾದೇಶಿಕ ರಾಜಕಾರಣಕ್ಕೆ ಹೆಚ್ಚು ಬಲವಿದೆ. ಅದರ ಮೂಲ ಬೇರುಗಳು ನಮ್ಮ ರಾಜ್ಯದಲ್ಲೇ ಇವೆ. ಜೆಡಿಎಸ್ ಈ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರ ಪೋಷಿಸಲಿದೆ ಎಂದು ಹೆಚ್‍ಡಿಕೆ ಎಲ್ಲಾ ಮುಖಂಡರಿಗೆ ಉದಾಹರಣೆಗಳ ಮುಖೇನ ವಿವರಿಸಿದರು. ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬಂದರೆ ಹೈಕಮಾಂಡ್ ಸಂಸ್ಕೃತಿ ಇರೋದಿಲ್ಲ. ಕನ್ನಡಿಗರ ಕೈಯ್ಯಲ್ಲಿಯೇ ಅಧಿಕಾರ ಇರುತ್ತದೆ. ಪ್ರತಿಯೊಂದಕ್ಕೂ ದೆಹಲಿ ಕಡೆ ನೋಡಬೇಕಾಗಿಲ್ಲ. ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬಂದರೆ ಐತಿಹಾಸಿಕ ನಿರ್ಧಾರಗಳನ್ನು ಹೈಕಮಾಂಡ್ ಹಂಗಿಲ್ಲದೆ ತೆಗೆದುಕೊಳ್ಳಬಹುದು ಅಂತ ತಿಳಿಸಿದರು. ಇದನ್ನೂ ಓದಿ: 2023ರ ವಿಧಾನಸಭಾ ಚುನಾವಣೆ, ಸಂಕ್ರಾಂತಿಗೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ: ಹೆಚ್‍ಡಿಕೆ

ಜನರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡೋಣ. ಕಾಲಮಿತಿಯಲ್ಲಿ ಅವುಗಳ ಪರಿಹಾರಕ್ಕೆ ಭರವಸೆ ಕೊಡೋಣ. ನೀರಾವರಿ ಯೋಜನೆಗಳು ಮತ್ತು ರೈತ ಪರ ಯೋಜನೆಗಳು ನಮ್ಮ ಪಕ್ಷದ ಮೊದಲ ಆದ್ಯತೆ. ಈ ನಿಟ್ಟಿನಲ್ಲಿ ಅಭ್ಯರ್ಥಿಗಳು ಜನರ ಬಳಿಗೆ ಹೋಗಬೇಕು. ಪಕ್ಷದ ಕಾರ್ಯಕ್ರಮಗಳನ್ನು ಮನವರಿಕೆ ಮಾಡಿಕೊಡಬೇಕು ಎಂದು ತಾಕೀತು ಮಾಡಿದರು. ರಾಜ್ಯದ ಐದು ನೀರಾವರಿ ಯೋಜನೆಗಳಿಗೆ ಜೀವ ತುಂಬುವುದು ನಮ್ಮ ಮಹತ್ವದ ನಿಲುವು. ಮೇಕೆದಾಟು, ಯುಕೆಪಿ, ಮಹದಾಯಿ, ಎತ್ತಿನಹೊಳೆ ಯೋಜನೆಗಳ ಕ್ಷಿಪ್ರ ಕಾರ್ಯಗತದ ಭರವಸೆಯೊಂದಿಗೆ ಮುಂದಕ್ಕೆ ಹೋಗೋಣ ಅಂತ ತಿಳಿಸಿದರು. ಇದನ್ನೂ ಓದಿ: ದತ್ತಪೀಠಕ್ಕೆ ಮೌಲ್ವಿ ನೇಮಕ ರದ್ದು

ಎತ್ತಿನಹೊಳೆ ಹೆಸರು ಹೇಳಿಕೊಂಡು ಮೊದಲು 8000 ಕೋಟಿ ರೂ. DPR ಮಾಡಲಾಯಿತು. ಆಮೇಲೆ 13000 ಕೋಟಿಗೆ ಮರು DPR ಮಾಡಲಾಯಿತು. ಈಗ ಪುನಾ 24000 ಕೋಟಿ ರೂ.ಗಳಿಗೆ ಆPಖ ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು. ಇದೇ ವೇಳೆ ಜೆಡಿಎಸ್ ವಿಷನ್- ಮಿಷನ್ 2023 ಪ್ರಸ್ತುತ ಪಡಿಸಿದ ಕುಮಾರಸ್ವಾಮಿ,2023 ಕ್ಕೆ ಸ್ವಂತ ಬಲದಲ್ಲಿ 123 ಸೀಟು ಪಡೆಯುವುದು ಪಕ್ಷದ ದೊಡ್ಡ ಗುರಿ. ಈ ನಿಟ್ಟಿನಲ್ಲಿ ಪಂಚರತ್ನ ಯೋಜನೆ ಜಾರಿ ಮಾಡೋದು ನಮ್ಮ ಗುರಿ. (ಆರೋಗ್ಯ, ಶಿಕ್ಷಣ, ಕೃಷಿ, ವಸತಿ, ಉದ್ಯೋಗ ಕ್ಷೇತ್ರದಲ್ಲಿ ವಿಶೇಷ ಯೋಜನೆ). ಈ ಮೂಲಕ ರಾಜ್ಯದ ಆಮೂಲಾಗ್ರ ಅಭಿವೃದ್ಧಿಗೆ ಕಾಣಿಕೆ ನೀಡುವುದು ಪಕ್ಷದ ಉದ್ದೇಶವಾಗಿದೆ. ತಳ ಮಟ್ಟದಿಂದ ಅಭಿವೃದ್ಧಿ ಸಾಧನೆ ಮಾಡುವುದು ನಮ್ಮ ಪರಿಕಲ್ಪನೆ ಆಗಿದ್ದು, ಅದಕ್ಕೆ ಬೇಕಾದ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಅಂತ ತಿಳಿಸಿದರು.

ಜೆಡಿಎಸ್ ಸದಸ್ಯರ ನಿಧಿ ಸ್ಥಾಪನೆ ಮಾಡುವ ಮೂಲಕ ಪ್ರಾಮಾಣಿಕ ಕಾರ್ಯಕರ್ತರ ರಕ್ಷಣೆಗೆ ನಿಲ್ಲುವುದು ನಮ್ಮ ನಿಲುವು. ಪಕ್ಷದ ಸದಸ್ಯತ್ವ ನೋಂದಣಿಯಿಂದ ಬಂದ ಹಣದಿಂದ ಕಾರ್ಯಕರ್ತರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಆರೋಗ್ಯ ಸಮಸ್ಯೆಗೆ ಹಣ ನೀಡುವುದು. ಕಾರ್ಯಕರ್ತರು ಮೃತರಾದಾಗ ಈ ನಿಧಿಯಿಂದ ಪರಿಹಾರ ನೀಡಲಾಗುತ್ತೆ ಅಂತ ತಿಳಿಸಿದರು.

Click to comment

Leave a Reply

Your email address will not be published. Required fields are marked *

Advertisement
Advertisement
Public TV We would like to show you notifications for the latest news and updates.
Dismiss
Allow Notifications