ಬೆಂಗಳೂರು: ಸಿಎಂ ಇಂದೇ ವಿಶ್ವಾಸ ಮತಯಾಚನೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಪಟ್ಟು ಹಿಡಿದಿದ್ದಾರೆ.
ಸ್ಪೀಕರ್ ನೇತೃತ್ವದಲ್ಲಿ ಕಲಾಪ ಸಲಹಾ ಸಮಿತಿಯಲ್ಲಿ ನಡೆಯುವ ಸಭೆಯ ವೇಳೆ ಬಿಎಸ್‍ವೈ, ಸುಪ್ರೀಂ ತೀರ್ಪು ಯಾವಾಗ ಬೇಕಾದರೂ ಬರಲಿ. ಆದರೆ ಸಿಎಂ ಇಂದೇ ವಿಶ್ವಾಸ ಮತ ಯಾಚನೆ ಮಾಡಬೇಕು. ಯಾಕೆಂದರೆ ಸರ್ಕಾರಕ್ಕೆ ಬಹುಮತ ಇಲ್ಲ. ಮೈತ್ರಿ ಸರ್ಕಾರದ ಶಾಸಕರು ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದರು.
ಈ ವೇಳೆ ಸ್ಪೀಕರ್ ಅವರು, ನಾಳೆ ಸುಪ್ರೀಂ ತೀರ್ಪು ಬರಲಿದೆ. ಅಲ್ಲಿಯವರೆಗೂ ತಾಳ್ಮೆಯಿಂದ ಕಾಯಿರಿ. ತೀರ್ಪಿನ ಬಳಿಕ ದಿನಾಂಕ ನಿಗದಿ ಮಾಡೋಣ ಎಂದು ಸಲಹೆ ನೀಡಿದ್ದಾರೆ. ಆದರೆ ಬಿಎಸ್‍ವೈ ಅವರು ಸ್ಪೀಕರ್ ಸಲಹೆಯನ್ನು ಕೇಳಲು ತಯಾರಿಲ್ಲ ಎಂಬುದಾಗಿ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ.
ಒಂದೆಡೆ ಸ್ಪೀಕರ್ ಅವರಿಗೆ ಸಿಎಂ ವಿಶ್ವಾಸ ಮತಯಾಚನೆ ಮಾಡುವಂತೆ ಒತ್ತಾಯ ಮಾಡಿದರೆ ಇತ್ತ ವಿಧಾನ ಪರಿಷತ್ ಕಲಾಪ ಆರಂಭಗೊಂಡಿತು. ಬಿಜೆಪಿ ಶಾಸಕರು ಸರ್ಕಾರಕ್ಕೆ ಬಹುಮತ ಇಲ್ಲ ಎಂದು ಹೇಳಿ ಗದ್ದಲ ಎಬ್ಬಿಸಿದ ಪರಿಣಾಮ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಯಿತು.