ಬೆಂಗಳೂರು: ಸಮ್ಮಿಶ್ರ ಸರ್ಕಾರದ ಅಸಮಾಧಾನ ಲಾಭ ಪಡೆಯಲು ಬಿಜೆಪಿ ಪ್ರಯತ್ನ ನಿಂತಿಲ್ಲ. ಸದ್ಯಕ್ಕೆ ಬಿಜೆಪಿಯಲ್ಲಿ ನಡೆಯುತ್ತಿದ್ದ ಬಿರುಸಿನ ರಾಜಕೀಯ ಚಟುವಟಿಕೆಗಳಿಗೆ ಬ್ರೇಕ್ ಹಾಕಲಾಗಿದ್ದು, ಯಡಿಯೂರಪ್ಪ ಆಂಡ್ ಟೀಂ ಕೂಡ ಸದ್ಯ ಸೈಲೆಂಟ್ ಆಗಿರಲು ನಿರ್ಧರಿಸಿದ್ದಾರೆ.
ಸದ್ಯ ಸಚಿವ ಡಿಕೆ ಶಿವಕುಮಾರ್ ಅವರ ಮೇಲಿನ ಇಡಿ ಪ್ರಕರಣವನ್ನು ಬಿಜೆಪಿ ಎದುರು ನೋಡುತ್ತಿದೆ. ಇಡಿ ಡಿಕೆಶಿಗೆ ಏನ್ ಮಾಡುತ್ತೆ ಅಂತಾ ಬಿಜೆಪಿ ಕಾದುನೋಡುವ ತಂತ್ರ ಹೂಡಿದೆ.
Advertisement
Advertisement
ಅಷ್ಟೇ ಅಲ್ಲ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ, ಮೂರು ಪರಿಷತ್ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯ ಫಲಿತಾಂಶವನ್ನು ಕೂಡ ಬಿಜೆಪಿ ಗಂಭೀರವಾಗಿ ತೆಗೆದುಕೊಂಡಿದೆ. ಒಂದು ವೇಳೆ ಮೈತ್ರಿ ಸರ್ಕಾರದಲ್ಲಿ ಸಂಪುಟ ವಿಸ್ತರಣೆ ವೇಳೆ ಅಸಮಾಧಾನ ಭುಗಿಲೆದ್ದರೆ ಅದು ಬಿಜೆಪಿಗೆ ಲಾಭವಾಗಲಿದ್ದು, ಸಮರ್ಪಕವಾಗಿ ಬಳಸಿಕೊಳ್ಳಲು ಕಾಯುತ್ತಿದೆ. ಇದನ್ನೂ ಓದಿ: ಸಚಿವ ಸ್ಥಾನದ ಕನಸು ಕಾಣ್ತಿದ್ದವರಿಗೆ ಕಾಂಗ್ರೆಸ್ ಹೈಕಮಾಂಡ್ ಶಾಕ್
Advertisement
ಈ ನಡುವೆ ಬಿಜೆಪಿ ಹೈಕಮಾಂಡ್‍ನಿಂದಲೂ ಎಚ್ಚರಿಗೆ ಹೆಜ್ಜೆ ಇಡಲು ಸೂಚನೆ ನೀಡಲಾಗಿದೆ. ಒಟ್ಟಿನಲ್ಲಿ ಸರ್ಕಾರ ರಚಿಸುವ ಆಸೆಯನ್ನು ಬಿಜೆಪಿ ಜೀವಂತವಾಗಿ ಇಟ್ಟುಕೊಂಡಿದ್ಯಾ? ಬಿಜೆಪಿಯಿಂದ ಆಪರೇಷನ್ ಕಮಲ ನಿಲ್ಲುವುದಿಲ್ಲವಾ ಅನ್ನುವ ಪ್ರಶ್ನೆಗಳು ಇದೀಗ ರಾಜಕೀಯ ವಲಯದಿಂದ ಕೇಳಿಬರುತ್ತಿದೆ. ಇದನ್ನೂ ಓದಿ: ನಾನು ತಪ್ಪು ಮಾಡಿದ್ರೆ ಜೈಲಿಗೆ ಹಾಕಿ, ಗಲ್ಲಿಗೂ ಏರಲು ಸಿದ್ಧ: ಡಿಕೆಶಿ ಗುಡುಗು
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv