Bengaluru City

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ದಾವಣಗೆರೆ ಸಜ್ಜು

Published

on

Share this

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ಸೆ.19ರಂದು ನಡೆಯಲಿರುವ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಗೆ ದಾವಣಗೆರೆ ನಗರ ಸಜ್ಜಾಗಿದೆ. ಬ್ಯಾನರ್ ಗಳು, ವಿಶೇಷ ಕಟೌಟ್‍ಗಳು, ಬಂಟಿಂಗ್ಸ್ ಗಳಿಂದ ನಗರವನ್ನು ಅಲಂಕರಿಸಲಾಗಿದೆ.

ಕಾರ್ಯಕ್ರಮದ ಹಿನ್ನೆಲೆಯಲ್ಲಿ ಯುವ ಮೋರ್ಚಾ ಮತ್ತು ಮಹಿಳಾ ಮೋರ್ಚಾದ ಸ್ವಾಗತ ಸಮಿತಿಗಳನ್ನು ರಚಿಸಿದ್ದು, ಅವು ಈಗಾಗಲೇ ಕಾರ್ಯಪ್ರವೃತ್ತವಾಗಿವೆ. ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಈ ಸಭೆಯಲ್ಲಿ ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ.

ಸೆ.18ರಂದು ಬೆಳಗ್ಗೆ ವಿಭಾಗೀಯ ಪ್ರಭಾರಿಗಳು ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆ ಮತ್ತು ಸಂಜೆ ರಾಜ್ಯ ಪದಾಧಿಕಾರಿಗಳ ಸಭೆಯೂ ನಡೆಯಲಿದೆ. ಬಳಿಕ ರಾಜ್ಯ ಕೋರ್ ಕಮಿಟಿ ಸದಸ್ಯರ ಜೊತೆ ಚರ್ಚೆಯೂ ನಡೆಯಲಿದೆ. ಇದನ್ನೂ ಓದಿ: ಸರ್ಕಾರದಿಂದ್ಲೇ ಹುಚ್ಚಗಣಿ ದೇವಸ್ಥಾನ ಪುನರ್ ನಿರ್ಮಾಣ- ಸಂಪುಟ ಸಭೆಯಲ್ಲಿ ತೀರ್ಮಾನ ನಿರೀಕ್ಷೆ

Click to comment

Leave a Reply

Your email address will not be published. Required fields are marked *

Advertisement
Advertisement