ಬೆಂಗಳೂರು: ಮುಖ್ಯಮಂತ್ರಿಗಳಿಗೆ ಆ ಕಡೆ ದೇವರಿಲ್ಲ. ಈ ಕಡೆ ಜನಾನೂ ಇಲ್ಲವಂತೆ. ಶೃಂಗೇರಿ ಆಯ್ತು, ತಿರುಪತಿನೂ ಆಯ್ತು. ದೇವರೇ ನಿಮ್ಮನ್ನ ಸೋಲಿಸಿದ್ದಾರೆ. ಹಾಸನ, ತುಮಕೂರು ಹಾಗೂ ಮಂಡ್ಯ ಕ್ಷೇತ್ರದಲ್ಲಿ ಮುಖ್ಯಮಂತ್ರಿಗಳು `ಮೂರು’ ನಾಮ ಹಾಕೊಂಡರು ಎಂದು ಮಾಜಿ ಡಿಸಿಎಂ ಆರ್ ಅಶೋಕ್ ವ್ಯಂಗ್ಯವಾಡಿದ್ದಾರೆ.
ಅಹೋರಾತ್ರಿ ಧರಣಿ ವೇಳೆ ಮಾತನಾಡಿದ ಅವರು, ನಿಮ್ಮ ನಿವಾಸಕ್ಕೆ ಮುತ್ತಿಗೆ ಹಾಕಲು ಬಂದಾಗ ದಯಮಾಡಿ ತಮ್ಮ ದರ್ಶನ ನೀಡಿ. ಸೌತ್ ಎಂಡ್‍ನಲ್ಲಾ? ವೆಸ್ಟ್ ಎಂಡ್‍ನಲ್ಲಾ? ಮುಖ್ಯಮಂತ್ರಿಗಳೇ ಎಲ್ಲಿದ್ದೀರಾ ಎಂದು ಪ್ರಶ್ನಿಸುವ ಮೂಲಕ ಮುಖ್ಯಮಂತ್ರಿಗಳ ಕಾಲೆಳೆದಿದ್ದಾರೆ.
Advertisement
Advertisement
ಧಮ್ಕಿ ಹಾಕೋರಿಗೆ ಮಂತ್ರಿಗಿರಿ, ಬೆದರಿಕೆ ಹಾಕೋ ಶಾಸಕರ ಕ್ಷೇತ್ರಕ್ಕೆ ನೂರಾರು ಕೋಟಿ ಅನುದಾನ ಕೊಡುತ್ತೀರಾ ಎಂದು ದೋಸ್ತಿ ಸರ್ಕಾರವನ್ನ ತರಾಟೆ ತೆಗೆದುಕೊಂಡಿದ್ದಾರೆ.
Advertisement
ಇತ್ತ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕೈಗೊಂಡಿರುವ ಅಹೋರಾತ್ರಿ ಧರಣಿ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದೆ. ಅಹೋರಾತ್ರಿ ಧರಣಿಯ ಕೊನೆಯ ದಿನವಾದ ಇವತ್ತು ಬಿಜೆಪಿ ನಾಯಕರು ಸಿಎಂ ಗೃಹ ಕಚೇರಿ ಕೃಷ್ಣಾ ಮೇಲೆ ಮುತ್ತಿಗೆ ಹಾಕುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ನಿರ್ಧರಿಸಿದ್ದಾರೆ.
Advertisement
ಜಿಂದಾಲ್ ಸಂಸ್ಥೆಗೆ ಭಾರೀ ಪ್ರಮಾಣದಲ್ಲಿ ಜಮೀನು ಹಸ್ತಾಂತರಿಸುವ ನಿರ್ಧಾರ ವಾಪಸ್ ಪಡೆಯದ ಕಾರಣ ಕೃಷ್ಣಾ ಮುತ್ತಿಗೆ ಇಟ್ಕೊಂಡಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಕೃಷ್ಣಾ ಮುತ್ತಿಗೆ ಕಾರ್ಯಕ್ರಮ ನಡೆಯಲಿದೆ. ಕೃಷ್ಣಾ ಮುತ್ತಿಗೆ ಪ್ರತಿಭಟನೆಯಲ್ಲಿ ಸಾವಿರಾರು ಕಾರ್ಯಕರ್ತರೊಂದಿಗೆ ಬಿಜೆಪಿ ಸಂಸದರು, ಶಾಸಕರು, ಪಕ್ಷದ ಪದಾಧಿಕಾರಿಗಳು, ಭಾಗವಹಿಸಲಿದ್ದಾರೆ. ಪೊಲೀಸರು ಬಿಗಿ ಬಂದೋಬಸ್ತ್ ವ್ಯವಸ್ಥೆ ಕೈಗೊಂಡಿದ್ದಾರೆ