ಬೆಂಗಳೂರು: ರಸ್ತೆ ಮಧ್ಯೆಯೇ ಬಿಎಂಟಿಸಿ ಬಸ್ (BMTC bus) ಹೊತ್ತಿ ಉರಿದ ಘಟನೆ (Fire Accident) ಎಮ್‍ಜಿ ರಸ್ತೆಯ ( MG Road) ಅನಿಲ್ ಕುಂಬ್ಳೆ ಸರ್ಕಲ್ ಬಳಿ ನಡೆದಿದೆ.
ಬಸ್ ರೋಸ್ ಗಾರ್ಡನ್‍ನಿಂದ ಶಿವಾಜಿನಗರದ ಕಡೆಗೆ ಹೋಗುತ್ತಿತ್ತು. ಈ ವೇಳೆ ಬಸ್‍ನ ಇಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಚಾಲಕ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಬಸ್‍ನಲ್ಲಿ 30 ಜನ ಪ್ರಯಾಣಿಕರಿದ್ದರು ಎಂದು ಬಸ್‍ನ ನಿರ್ವಾಹಕ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಕೂಲ್ ಕೂಲ್- ಇಂದು ಸಾಧಾರಣ ಮಳೆ ಸಾಧ್ಯತೆ
Advertisement
Advertisement
ಸ್ಥಳ್ಕಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬಳಿಕ ಪೊಲೀಸರು ಉಂಟಾಗಿದ್ದ ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಿದ್ದು, ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.
Advertisement
Advertisement
ಸ್ಥಳಕ್ಕೆ ಆಗಮಿಸಿರುವ ಬಿಎಂಟಿಸಿ ಸಿಬ್ಬಂದಿ ಹಾಗೂ ಮೆಕ್ಯಾನಿಕ್‍ಗಳು ಬೆಂಕಿಗಾಹುತಿಯಾದ ಬಸ್‍ನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಹುಟ್ಟುಹಬ್ಬದ ದಿನವೇ ಅಪಘಾತಕ್ಕೆ ಕಾಲೇಜು ವಿದ್ಯಾರ್ಥಿನಿ ಬಲಿ