Connect with us

Bengaluru City

ಬೆಂಗಳೂರಲ್ಲಿ ಅಪ್ರಾಪ್ತರಿಂದ್ಲೇ ಬಾಲಕನ ಬರ್ಬರ ಕೊಲೆ

Published

on

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅಪ್ರಾಪ್ತ ಬಾಲಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಬೆಂಗಳೂರಿನ ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯ ಪಂಚರ ಪಾಳ್ಯದಲ್ಲಿ ಈ ಘಟನೆ ನಡೆದಿದೆ. ಇಬ್ಬರು ಅಪ್ರಾಪ್ತರು ಸೇರಿ ಬಾಲಕನನ್ನು ಕೊಲೆ ಮಾಡಿದ್ದಾರೆ.

ಹಣದ ವಿಚಾರಕ್ಕೆ ಮೂವರು ಅಪ್ರಾಪ್ತರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಇಬ್ಬರು ಅಪ್ರಾಪ್ತರು ಮತ್ತೊಬ್ಬ ಅಪ್ರಾಪ್ತನಿಗೆ ಹಲ್ಲೆ ಮಾಡಿ ಚಾಕು ಇರಿದಿದ್ದಾರೆ. ಪರಿಣಾಮ ತೀವ್ರ ರಕ್ತಸ್ರಾವದಿಂದ ಅಪ್ರಾಪ್ತ ಸಾವನ್ನಪ್ಪಿದ್ದಾನೆ.

ಈ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

www.publictv.in