ಬೆಂಗಳೂರು: ಮುಂದಿನ ಮೂರು ಗಂಟೆಯಲ್ಲಿ ಬೆಂಗಳೂರಿನಲ್ಲಿ (Bengaluru) ಗುಡುಗು ಸಹಿತ ಮಿಂಚಿನ ಜೊತೆ ಸಾಧಾರಣ ಮಳೆಯಾಗಲಿದೆ (Rain) ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.
ಬೆಳಗ್ಗೆ 7 ಗಂಟೆಗೆ ಬಿಡುಗಡೆ ಮಾಡಿದ ಹವಾಮಾನ ವರದಿಯ ಬುಲೆಟಿನ್‌ನಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ,ರಾಮನಗರ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಹೊನ್ನಾಳಿಯಲ್ಲಿ ಭಾರೀ ಮಳೆ – ತಾಲೂಕು ಆಸ್ಪತ್ರೆ ಒಳಗೆ ನುಗ್ಗಿದ ನೀರು
- Advertisement
5 ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು 30 ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯೇ ಹಲವೆಡೆ ಮಳೆ ಸುರಿದಿದೆ.
- Advertisement
ಮನೆಯೊಳಗೆ ಇರಿ, ಕಿಟಕಿಗಳು ಮತ್ತು ಬಾಗಿಲುಗಳನ್ನು ಮುಚ್ಚಿ. ಸಾಧ್ಯವಾದರೆ ಪ್ರಯಾಣವನ್ನು ತಪ್ಪಿಸಿ. ಮರಗಳ ಕೆಳಗೆ, ಕಾಂಕ್ರೀಟ್ ಗೋಡೆಗಳಿಗೆ ಒರಗಬೇಡಿ. ಪ್ರಯಾಣಿಸುತ್ತಿದ್ದರೆ ಎಚ್ಚರಿಕೆಯಿಂದ ಚಾಲನೆ ಮಾಡಿ ಎಂದು ಐಎಂಡಿ ಸೂಚಿಸಿದೆ.