ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಂಗಳೂರು ಗಲಭೆ ಕುರಿತು ಶುಕ್ರವಾರ ಬಿಡುಗಡೆ ಮಾಡಿದ ವಿಡಿಯೋ ಸಿ.ಡಿ ಕುರಿತು ಕೊನೆಗೂ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ಕೊಟ್ಟಿದ್ದಾರೆ. ವಿಡಿಯೋಗಳ ಕಟ್ ಆ್ಯಂಡ್ ಪೇಸ್ಟ್ ಮಾಡಿ ಬಿಡುಗಡೆ ಮಾಡಲಾಗಿದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಹೆಚ್ಡಿಕೆ ವಿರುದ್ಧ ಆರೋಪ ಮಾಡಿದ್ದಾರೆ.
ತಮ್ಮ ಧವಳಗಿರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಸಿಎಂ, ಹೆಚ್ಡಿಕೆ ವಿಡಿಯೋ ಸಿ.ಡಿ ಪ್ರಶ್ನೆಗೆ ಮೊದಲು ಕಿಡಿ ಕಾರಿದರು. ವಿಡಿಯೋ ಬಿಡುಗಡೆ ಮಾಡಿದ್ದಕ್ಕೆಲ್ಲ ಅರ್ಥ ಇದೇನ್ರಿ ಅಂತ ಸಿಎಂ ಸಿಟ್ಟಾದ್ರು. ಅಲ್ಲದೆ ವಿಡಿಯೋಗಳನ್ನು ಕಟ್ ಆ್ಯಂಡ್ ಪೇಸ್ಟ್ ಮಾಡಿ ಹೆಚ್ಡಿಕೆ ಬಿಡುಗಡೆ ಮಾಡಿದ್ದಾರೆ ಎಂದು ಸಿಎಂ ಹೇಳಿದರು. ಇದನ್ನೂ ಓದಿ: ಮಂಗ್ಳೂರನ್ನು ‘ಕಾಶ್ಮೀರ’ ಮಾಡಲು ಹೊರಟಿದೆ, ಇದನ್ನು ತೋರಿಸಲು 35 ವಿಡಿಯೋ ರಿಲೀಸ್ – ‘ಸಿಡಿ’ದ ಎಚ್ಡಿಕೆ
Advertisement
ತಾವು ಬಿಡುಗಡೆ ಮಾಡಿದ ವಿಡಿಯೋಗಳನ್ನು ಯಡಿಯೂರಪ್ಪನವರು ಕಟ್ ಆ್ಯಂಡ್ ಪೇಸ್ಟ್ ವಿಡಿಯೋ ಅಂತ ಹೇಳಿದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರ ಪ್ರಯಿಕ್ರಿಯೆ ಏನಿರಬಹುದು ಎಂಬ ಕುತೂಹಲ ಮೂಡಿದೆ.