– ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಣೆ
ನವದೆಹಲಿ: ಬಾಬುಸಾಬ್‌ಪಾಳ್ಯದಲ್ಲಿ (Babusabpalya) ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕಣಕ್ಕೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ (PM Relief Fund) ಮೃತರ ಕುಟಂಬಕ್ಕೆ ಪರಿಹಾರ ಘೋಷಣೆಯಾಗಿದೆ.
Advertisement
ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಕಟ್ಟಡ ಕುಸಿತ ಪ್ರಕರಣದಲ್ಲಿ ಸಾವಿನ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದ್ದು, ಇನ್ನೂ ಇಬ್ಬರಿಗಾಗಿ ಹುಡುಕಾಟ ನಡೆದಿದೆ. ಇದನ್ನೂ ಓದಿ: ಮುಧೋಳದಲ್ಲಿ ಅಕ್ರಮ ಮರಳು ಅಡ್ಡೆಯ ಮೇಲೆ ದಾಳಿ
Advertisement
Advertisement
ಹೆಣ್ಣೂರು ಪೊಲೀಸರು ಕಟ್ಟಡ ಕುಸಿತ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಪ್ರಕರಣ ಸಂಬಂಧ ಮುನಿರೆಡ್ಡಿ, ಕಾಂಟ್ರ್ಯಾಕ್ಟರ್ ಹಾಗೂ ಭುವನ್ ರೆಡ್ಡಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು| ಲಿಫ್ಟ್ ಕಾಮಗಾರಿಗೆ ತೋಡಿದ್ದ ಗುಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು
Advertisement
ಎ3 ಆರೋಪಿ ಏಳುಮಲೈ ಬಗ್ಗೆ ಇನ್ನೂ ಮಾಹಿತಿ ಸಿಗಲಿಲ್ಲ. ಜೊತೆಗೆ ಪೋನ್ ನಂಬರ್ ಕೂಡ ಸ್ವಿಚ್ ಆಫ್ ಆಗಿದೆ. ಏಳುಮಲೈ ಕಟ್ಟಡ ಗುತ್ತಿಗೆದಾರನಾಗಿದ್ದ ಹಾಗಾಗಿ ಕಟ್ಟಡದಲ್ಲಿ ಸಿಲುಕಿಕೊಂಡು ಸಾವನ್ನಪ್ಪಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಏರೋಸ್ಪೇಸ್ ಕಚೇರಿ ದಾಳಿಗೆ ಪ್ರತೀಕಾರ – ಇರಾಕ್, ಸಿರಿಯಾದಲ್ಲಿರುವ ಉಗ್ರರ ನೆಲೆ ಮೇಲೆ ಟರ್ಕಿ ಏರ್‌ಸ್ಟ್ರೈಕ್
ಸತತ 34 ಗಂಟೆ ಕಾರ್ಯಚರಣೆ ಮಾಡಿ ಎನ್‌ಡಿಎಫ್ ತಂಡ ಕಾರ್ಯಚರಣೆ ಸ್ಥಗಿತಗೊಳಿಸಿತ್ತು. ಸದ್ಯ ತಾತ್ಕಾಲಿಕವಾಗಿ ಸ್ಥಗಿತವಾಗಿದ್ದ ಕಾರ್ಯಚರಣೆ ಮತ್ತೆ ಆರಂಭವಾಗಿದೆ. ಇದನ್ನೂ ಓದಿ: ಇದನ್ನೂ ಓದಿ: ಮಲೆನಾಡಿನಲ್ಲಿ ಭಾರೀ ಮಳೆ- ರಸ್ತೆಯಲ್ಲಿ ನದಿಯಂತೆ ಹರಿದ ನೀರು