ಬೆಂಗಳೂರು: ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನಲ್ಲಿ (Bengaluru) ಹಲವಾರು ಅವಘಡಗಳು ಸಂಭವಿಸುತ್ತಿವೆ. ಮಂಗಳವಾರ ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಐದು ಜನ ಮೃತಪಟ್ಟಿರುವ ಘಟನೆ ನಡೆದಿದೆ.
ನಿರ್ಮಾಣ ಹಂತದ ಕಟ್ಟಡ ದುರಂತ ಪ್ರಕರಣದಲ್ಲಿ ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ರಾತ್ರಿಇಡೀ ಅವಶೇಷಗಳಡಿ ಸಿಲುಕಿದವರ ಪತ್ತೆಕಾರ್ಯ ನಡೆಯಿತು. ಮಧ್ಯರಾತ್ರಿ ಮೂವರ ಮೃತದೇಹಗಳು ಪತ್ತೆಯಾಗಿದ್ದು, ಇನ್ನು ಕೆಲವರು ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಹೊರ ತೆಗೆಯಲು ಜೆಸಿಬಿ, ಹಿಟಾಚಿಗಳ ಮೂಲಕ ಕುಸಿದ ಕಟ್ಟಡದ ಅವಶೇಷಗಳನ್ನು ತೆರವು ಮಾಡುವ ಕಾರ್ಯಾಚರಣೆ ನಡೆಯುತ್ತಿದೆ. ಇದನ್ನೂ ಓದಿ: ಜೆಡಿಎಸ್‌ನಿಂದ ಕಣಕ್ಕೆ ಇಳಿಯುತ್ತಾರಾ ಯೋಗೇಶ್ವರ್? – ಕೊನೆ ಕ್ಷಣದ ಕಸರತ್ತು ಆರಂಭ
Advertisement
Advertisement
ಕಾಮಗಾರಿಯ ವೇಳೆಗೆ 16 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಕೂಲಿ ಕಾರ್ಮಿಕರು ಕಟ್ಟಡದ ಅವಶೇಷಗಳಲ್ಲಿ ಸಿಲುಕಿದ್ದು ಸ್ಥಳಕ್ಕೆ ರಕ್ಷಣಾ ಕಾರ್ಯಾಚರಣೆ ತಂಡ ಭೇಟಿ ನೀಡಿ ಅವಶೇಷಗಳನ್ನು ತೆಗೆಯುವ ಕೆಲಸ ನಡೆಸುತ್ತಿದ್ದಾರೆ. 6 ಮಂದಿ ಕಾರ್ಮಿಕರಿಗೆ ತೀವ್ರ ಗಾಯಗಳಾಗಿದ್ದು, ಓರ್ವ ಕಾರ್ಮಿಕನ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರಿದ ಮಳೆಯಬ್ಬರ – 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Advertisement