ಬೆಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ಆಗುವ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಗುರುವಾರದಿಂದ ಮೂರು ದಿನಗಳ ಕಾಲ ನಿಷೇಧಾಜ್ಞೆಯನ್ನ ಜಾರಿಗೊಳಿಸಿದ್ದಾರೆ. ಆದರೂ ನಿನ್ನೆ ನೂರಾರು ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಟೌನ್ ಹಾಲ್ ಮುಂದೆ ಸೇರಿ ಪ್ರತಿಭಟನೆ ಮಾಡಿದ್ದು, ಪ್ರತಿಭಟನಾಕಾರರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸವೇ ಪಡಬೇಕಾಯಿತು.
ನಿನ್ನೆ ಸುಮಾರು 244 ಜನರನ್ನ ಬಂಧಿಸಿರೋ ಪೊಲೀಸರು 8 ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ. ಜೊತೆಗೆ ನಿನ್ನೆ ಪ್ರತಿಭಟನಾಕಾರರನ್ನ ಬಂಧಿಸಲು ಸೂಕ್ತ ವಾಹನದ ವ್ಯವಸ್ಥೆ ಇಲ್ಲದ ಕಾರಣ ಆಟೋ ಟಿಟಿಗಳನ್ನ ಬಳಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರೋ ಪೊಲೀಸರು ಟೌನ್ ಹಾಲ್ ಮುಂದೆ ಬಿಗೀ ಪೊಲೀಸ್ ಭದ್ರತೆಯನ್ನ ಆಯೋಜಿಸಿದ್ದಾರೆ. ಇದನ್ನೂ ಓದಿ: ಪ್ರತಿಭಟನಾಕಾರರನ್ನು ಸಮಾಧಾನ ಮಾಡಲು ರಾಷ್ಟ್ರಗೀತೆ ಹಾಡಿದ ಡಿಸಿಪಿ: ವಿಡಿಯೋ
Advertisement
Advertisement
ಈಗಾಗಲೇ 4 ಕೆಎಸ್ ಆರ್ ಪಿ ತುಕಡಿ ಸ್ಥಳದಲ್ಲಿ ಬಿಡುಬಿಟ್ಟಿದ್ದು ಪರಿಸ್ಥಿತಿ ಅವಲೋಕಿಸಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿಕೊಳ್ಳುವ ಆಲೋಚನೆಯಲ್ಲಿ ಪೊಲೀಸರು ಇದ್ದಾರೆ. ಜೊತೆಗೆ ನಿಯಮಗಳನ್ನ ಉಲ್ಲಂಘಿಸಿ ಪ್ರತಿಭಟನೆ ಮಾಡಲು ಮುಂದಾಗುವವರನ್ನ ಬಂಧಿಸಲು ಮೂರು ಬಿಎಂಟಿಸಿ ಬಸ್ ಗಳನ್ನ ಕರೆಸಿಕೊಂಡಿದ್ದಾರೆ. ಒಟ್ಟಿನಲ್ಲಿ ಇಂದು ಯಾವುದೇ ರೀತಿಯ ಪ್ರತಿಭಟನೆ ಮಾಡಲು ಅವಕಾಶ ನೀಡದಿರಲು ಪೊಲೀಸರು ಸಿದ್ಧರಾಗಿದ್ದಾರೆ. ಇದನ್ನೂ ಓದಿ: ಆರದ ‘ಪೌರತ್ವ’ ಜ್ವಾಲೆ- ಬೆಂಗ್ಳೂರಲ್ಲಿ ನಿಷೇಧಾಜ್ಞೆ ನಡುವೆಯೂ ಪ್ರತಿಭಟನೆ