– 40 ವರ್ಷ ಮೇಲ್ಪಟ್ಟ ಹೆಣ್ಮಕ್ಕಳು ವಾರ್ಷಿಕ ಚೆಕಪ್ ಮಾಡಿಸಬೇಕು
ಬೆಂಗಳೂರು: ಕ್ಯಾನ್ಸರ್ ಎಂಬ ಮಹಾಮಾರಿ ಕಾಯಿಲೆಗೆ ಯಾರು ಹೆದರಬೇಕಿಲ್ಲ. ಅದಕ್ಕೆ ಸೂಕ್ತ ಚಿಕಿತ್ಸೆಯಿದೆ. ಕ್ಯಾನ್ಸರ್ ಅನ್ನೋದು ಒಂದು ಕಾಯಿಲೆ. ಅದರಿಂದ ಭಯಪಡುವ ಅಗತ್ಯವಿಲ್ಲ. ಕ್ಯಾನ್ಸರ್ ಖಾಯಿಲೆಯ ಸೊಂಕು ಬಗ್ಗೆ ತಿಳಿದ ಕೂಡಲೇ ತುರ್ತಾಗಿ ಚಿಕಿತ್ಸೆಗೆ ಬರಬೇಕು. ಆಗ ಮಾತ್ರ ಕ್ಯಾನ್ಸರ್‌ಗೆ ಕಡಿವಾಣ ಹಾಕಬಹುದು ಎಂದು ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ನಿರ್ದೇಶಕ ರಾಮಚಂದ್ರ ಹೇಳಿದ್ದಾರೆ.
ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಮಾತನಾಡಿದ ಅವರು, ಪ್ರಸ್ತುತ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಗರ್ಭಕೋಶದ ಕಂಟಕದ ಕ್ಯಾನ್ಸರ್ ಕಡಿಮೆಯಾಗುತ್ತಿದೆ. ತಂಬಾಕು, ಪಾನ್ ಪರಾಗ್ ತಿನ್ನುವುದರಿಂದ ಕ್ಯಾನ್ಸರ್ ಹೆಚ್ಚಾಗುತ್ತಿದೆ. ಸರ್ಕಾರ ಇವುಗಳನ್ನ ನಿಷೇಧಿಸಿದ್ದರೂ ಜನ ಇವುಗಳ ಮೇಲೆಯೇ ಅವಲಂಬನೆಯಾಗಿದ್ದಾರೆ. ಕ್ಯಾನ್ಸರ್ ಸೊಂಕು ತಗುಲಿದಾಗ ಶೇ. 60ರಷ್ಟು ತಡೆಗಟ್ಟಬಹುದು ಎಂದು ತಿಳಿಸಿದರು.
Advertisement
Advertisement
ನಮ್ಮ ಜನ ಕ್ಯಾನ್ಸರ್ ಬಗ್ಗೆ ಗೊತ್ತಿದ್ದರೂ ಬೇಗ ಚಿಕಿತ್ಸೆಗೆ ಬರುವುದಿಲ್ಲ. ಕೊನೆಯ ಹಂತದಲ್ಲಿದ್ದಾಗ ಮಾತ್ರ ಆಸ್ಪತ್ರೆಗಳಿಗೆ ಬರುತ್ತಾರೆ. ಆ ಸಮಯದಲ್ಲಿ ಪರಸ್ಥಿತಿ ಕೈ ಮೀರಿ ಹೋಗಿರುತ್ತೆ. ಹೀಗಾಗಿ ಕ್ಯಾನ್ಸರ್ ಬಗ್ಗೆ ಸಾಕಷ್ಟು ಜನರಲ್ಲಿ ಆತಂಕವಿದೆ ಎಂದರು.
Advertisement
ಇಂದು ವಿಶ್ವ ಕ್ಯಾನ್ಸರ್ ದಿನಾಚರಣೆ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಿಸಿಎಂ ಅಶ್ವತ್ ನಾರಾಯಣ್ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಗೆ ಭೇಟಿ ನೀಡಿ ಸ್ವಚ್ಛತೆ ಹಾಗೂ ಕ್ಯಾನ್ಸರ್ ರೋಗಿಗಳ ಆರೋಗ್ಯವನ್ನು ವಿಚಾರಿಸಿದರು. ಆ ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ನಿರ್ದೇಶಕ ರಾಮಚಂದ್ರ, 40 ವರ್ಷ ಮೇಲ್ಪಟ್ಟ ಹೆಣ್ಣು ಮಕ್ಕಳು, ವರ್ಷಕ್ಕೊಮ್ಮೆ ಮ್ಯಾಮೋಗ್ರಾಮ್, ಅನ್ಯೂವಲ್ ಚೆಕಪ್ ಮಾಡಿಸಬೇಕು. ಕ್ಯಾನ್ಸರ್ ಖಾಯಿಲೆಯ ಬಗ್ಗೆ ಹೆದರುವಂತ ಅವಶ್ಯಕತೆಯಿಲ್ಲ ಎಂದು ಕ್ಯಾನ್ಸರ್ ರೋಗಿಗಳಿಗೆ ಆತ್ಮಸ್ಥೈರ್ಯ ತುಂಬಿದರು.