ಬೆಂಗಳೂರು: ಸಿಸಿಬಿ ಇನ್ಸ್‌ಪೆಕ್ಟರ್ (Police Inspector) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸಿಸಿಬಿ (CCB) ಆರ್ಥಿಕ ಅಪರಾಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತಿಮ್ಮೇಗೌಡ (Thimme Gowda) ಬಿಡದಿ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ತಿಮ್ಮೇಗೌಡ ಶವ ಪತ್ತೆಯಾಗಿದೆ. ಬಿಡದಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.