ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಆಪ್ತ ಅಲಿಖಾನ್ ನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಅಲಿಖಾನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಆಂಬಿಡೆಂಟ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಜೊತೆ ಆಗಮಿಸಿದ್ದ ಅಲಿಖಾನ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಅಲಿಕಾನ್ ವಿರುದ್ಧ ಬೆಳಗ್ಗೆಯೇ ಅಕ್ರಮ ಶಸ್ತ್ರಾಸ್ತ್ರದ ಕಾಯ್ದೆಯಡಿ ಸಿಸಿಬಿ ಪೊಲೀಸರು ಪ್ರತ್ಯೇಕ ಕೇಸ್ ದಾಖಲಿಸಿದ್ದರು. ಹೀಗಾಗಿ ಇದೀಗ ರೆಡ್ಡಿ ಜೊತೆ ಬಂದ ಅಲಿಖಾನ್ ನನ್ನು ಸಿಸಿಬಿ ಬಂಧಿಸಿದೆ ಅಂತ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ. ಅಲಿಖಾನ್ ಹೊಂದಿರುವ ಶಸ್ತ್ರಾಸ್ರ ಪರವಾನಿಗೆ 2017ರಲ್ಲಿ ಅಂತ್ಯಗೊಂಡಿತ್ತು. ಪರವಾನಿಗೆಯನ್ನು ನವೀಕರಣ ಮಾಡಿಕೊಳ್ಳದ ಹಿನ್ನೆಲೆಯಲ್ಲಿ ಅಲಿಖಾನ್ ಬಂಧನವಾಗಿದೆ. ಅಲಿಖಾನ್ ಮನೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದಾಗ 5 ಜೀವಂತ ಗುಂಡುಗಳು ಪತ್ತೆಯಾಗಿದ್ದವು ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
Advertisement
Advertisement
ಆಂಬಿಡೆಂಟ್ ಡೀಲ್ ಪ್ರಕರಣದ ಸೂತ್ರಧಾರಿ ಆಗಿರುವ ಅಲಿಖಾನ್ ಜಾಮೀನು ಸಹ ಪಡೆದುಕೊಂಡಿದ್ದ. ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಜನಾರ್ದನ ರೆಡ್ಡಿ ಜೊತೆಯಲ್ಲಿ ಅಲಿಖಾನ್ ಸಿಸಿಬಿ ಕಚೇರಿಗೆ ಆಗಮಿಸುತ್ತಿದ್ದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನು ಓದಿ: ಅಂಬಿಡೆಂಟ್ ಡೀಲ್ ಪ್ರಕರಣ- ಜನಾರ್ದನ ರೆಡ್ಡಿ ಮೊದಲ ಪ್ರತಿಕ್ರಿಯೆ
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews