– ಪಿ.ಸಿ.ಮೋಹನ್ v/s ಮನ್ಸೂರ್ ಅಲಿ ಖಾನ್
2008 ರಲ್ಲಿ ಅಸ್ತಿತ್ವಕ್ಕೆ ಬಂದ ಲೋಕಸಭಾ ಕ್ಷೇತ್ರ ಬೆಂಗಳೂರು ಕೇಂದ್ರ (Bengaluru Central). ಅಸ್ತಿತ್ವಕ್ಕೆ ಬಂದಾಗಿನಿಂದಲೂ ಇದು ಬಿಜೆಪಿ ವಶದಲ್ಲಿದೆ. ಈಗ ಮತ್ತೆ ಲೋಕಸಭಾ ಚುನಾವಣೆ ಬಂದಿದೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಶತಪ್ರಯತ್ನ ನಡೆಸುತ್ತಿದೆ. ಸತತ ನಾಲ್ಕು ಬಾರಿ ಗೆಲುವು ಸಾಧಿಸಿರುವ ಬಿಜೆಪಿ ಕ್ಷೇತ್ರವನ್ನು ಪ್ರತಿಷ್ಠೆಯ ಕಣವಾಗಿ ಸ್ವೀಕರಿಸಿದೆ.
Advertisement
ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಬಿಜೆಪಿಯ ಪಿ.ಸಿ.ಮೋಹನ್ (P.C.Mohan) ಬಿಗಿ ಹಿಡಿತ ಸಾಧಿಸಿದ್ದಾರೆ. ಅಲ್ಪಸಂಖ್ಯಾತ ಮತದಾರರ ಪ್ರಾಬಲ್ಯ ಹೊಂದಿರುವ ಕ್ಷೇತ್ರದಲ್ಲಿ ಭಾಷಾ ಮತ್ತ ಧಾರ್ಮಿಕ ಅಲ್ಪಸಂಖ್ಯಾತರ ಬೆಂಬಲ ಪಡೆಯುವುದು ಇಲ್ಲಿ ಸ್ಪರ್ಧಿಸುವ ಯಾವುದೇ ಅಭ್ಯರ್ಥಿಗೆ ಸವಾಲಿನ ವಿಷಯವಾಗಿದೆ. ಅದೇ ಲೆಕ್ಕಾಚಾರದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಬೆಂಗಳೂರು ಕೇಂದ್ರ ಕ್ಷೇತ್ರದ 2024 ರ ಸಾರ್ವತ್ರಿಕ ಚುನಾವಣೆಯು ಜಿದ್ದಾಜಿದ್ದಿನ ಕಣವಾಗಿದೆ. ಇದನ್ನೂ ಓದಿ: Bengaluru South Lok Sabha 2024: ಪ್ರತಿಷ್ಠೆಯ ಕಣವನ್ನು ಮತ್ತೆ ಗೆಲ್ಲುತ್ತಾ ಬಿಜೆಪಿ?- ‘ಕೈ’ ವಶಕ್ಕೆ ತಂತ್ರವೇನು?
Advertisement
Advertisement
ಕ್ಷೇತ್ರ ಪರಿಚಯ
2008 ರಲ್ಲಿ ಕ್ಷೇತ್ರ ಪುನರ್ ವಿಂಗಡಣೆಯಲ್ಲಿ ಬೆಂಗಳೂರು ಗ್ರಾಮಾಂತರ ಅಸ್ತಿತ್ವಕ್ಕೆ ಬಂತು. ಆಗಿನಿಂದಲೂ ಕ್ಷೇತ್ರದಲ್ಲಿ ಬಿಜೆಪಿ ಬಿಗಿ ಹಿಡಿತ ಸಾಧಿಸಿದೆ. 2009 ರಲ್ಲಿ ಕ್ಷೇತ್ರಕ್ಕೆ ನಡೆದ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಪಿ.ಸಿ.ಮೋಹನ್ ಗೆಲುವು ದಾಖಲಿಸಿದ್ದರು. ಮತ್ತೆ 2014, 2019 ರ ಚುನಾವಣೆಯಲ್ಲೂ ಜಯಸಿ ಹ್ಯಾಟ್ರಿಕ್ ಸರದಾರ ಎನಿಸಿಕೊಂಡಿದ್ದಾರೆ.
Advertisement
ವಿಧಾನಸಭಾ ಕ್ಷೇತ್ರಗಳೆಷ್ಟು?
ಈ ಕ್ಷೇತ್ರ ವ್ಯಾಪ್ತಿಯಲ್ಲಿ 8 ವಿಧಾನಸಭಾ ಕ್ಷೇತ್ರಗಳು ಒಳಪಡುತ್ತವೆ. ಸರ್ವಜ್ಞನಗರ, ಸಿ.ವಿ. ರಾಮನ್ ನಗರ, ಶಿವಾಜಿನಗರ, ಶಾಂತಿನಗರ, ಗಾಂಧಿ ನಗರ, ರಾಜಾಜಿನಗರ, ಚಾಮರಾಜಪೇಟೆ, ಮಹದೇವಪುರ (ಎಸ್‌ಸಿ) ವಿಧಾನಸಭಾ ಕ್ಷೇತ್ರಗಳಿವೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ಅಂತಹದ್ದೇನು ಬದಲಾವಣೆ ಆಗಿಲ್ಲ. ಹಿಂದಿನಂತೆಯೇ ಕಾಂಗ್ರೆಸ್ 5 ಹಾಗೂ ಬಿಜೆಪಿ 3 ಸ್ಥಾನ ಗಳಿಸಿದೆ. ಇದನ್ನೂ ಓದಿ: Bengaluru North Lok Sabha 2024: ಬಿಜೆಪಿ ಗೆಲುವಿನ ಓಟಕ್ಕೆ ಬ್ರೇಕ್ ಹಾಕುತ್ತಾ ಕಾಂಗ್ರೆಸ್?
ಮತದಾರರು ಎಷ್ಟಿದ್ದಾರೆ?
ಬೆಂಗಳೂರೂ ಕೇಂದ್ರ ವ್ಯಾಪ್ತಿಯಲ್ಲಿ ಒಟ್ಟು 23,98,910 ಮತದಾರರಿದ್ದಾರೆ. ಅವರ ಪೈಕಿ 12,36,897 ಪುರುಷ ಹಾಗೂ 11,61,548 ಮಹಿಳಾ ಮತದಾರರಿದ್ದಾರೆ. 465 ತೃತೀಯಲಿಂಗಿ ಮತದಾರರು ಇದ್ದಾರೆ.
ಕಳೆದ ಚುನಾವಣೆಯಲ್ಲಿ ಏನಾಗಿತ್ತು?
2019 ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮೂರನೇ ಬಾರಿ ಸ್ಪರ್ಧಿಸಿದ್ದ ಪಿ.ಸಿ.ಮೋಹನ್ ಗೆಲುವು ಸಾಧಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ (Rizwan Arshad) ಎರಡನೇ ಬಾರಿಯೂ ಸೋತಿದ್ದರು. ಬಿಜೆಪಿ 70,968 ಮತಗಳ ಅಂತರದಿಂದ ಗೆಲುವು ದಾಖಲಿಸಿತ್ತು. ಇದನ್ನೂ ಓದಿ: Bagalkot Lok Sabha 2024: ಚಾಲುಕ್ಯರ ನಾಡಲ್ಲಿ ಬಾವುಟ ಹಾರಿಸೋದ್ಯಾರು?
ಪಿ.ಸಿ.ಮೋಹನ್‌ಗೆ 4ನೇ ಬಾರಿ ಬಿಜೆಪಿ ಟಿಕೆಟ್
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಬೇಕೆಂಬ ಬೇಡಿಕೆ ವ್ಯಕ್ತವಾಗಿತ್ತು. ಆದರೆ ಕ್ಷೇತ್ರದಲ್ಲಿ ನಡೆದ ಮೂರು ಚುನಾವಣೆಯಲ್ಲೂ ಸತತವಾಗಿ ಗೆದ್ದಿರುವ ಪಿ.ಸಿ.ಮೋಹನ್‌ಗೆ ಬಿಜೆಪಿ ಮತ್ತೆ ಮಣೆ ಹಾಕಿದೆ.
ಕಾಂಗ್ರೆಸ್‌ನಿಂದ ರಿಜ್ವಾನ್ ಅರ್ಷದ್ ಪುತ್ರ ಕಣಕ್ಕೆ
ಮುಸ್ಲಿಂ ಮತದಾರರ ಬಾಹುಳ್ಯವಿರುವ ಕ್ಷೇತ್ರದಲ್ಲಿ ಈ ಬಾರಿ ಗೆಲುವು ಸಾಧಿಸಬೇಕು ಎಂಬ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಕೇಂದ್ರದ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಅವರ ಪುತ್ರ ಹಾಗೂ ಎಐಸಿಸಿ ಕಾರ್ಯದರ್ಶಿ ಮನ್ಸೂರ್ ಅಲಿ ಖಾನ್ (Mansoor Ali Khan) ಅವರನ್ನು ಹುರಿಯಾಳಾಗಿಸಿದೆ. ರಾಜ್ಯ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಹ್ಯಾರೀಸ್ ಹೈಕಮಾಂಡ್ ಮಟ್ಟದಲ್ಲಿ ಟಿಕೆಟ್ ಗಿಟ್ಟಿಸಲು ಪ್ರಯತ್ನಿಸಿದ್ದರು. ಆದರೆ ಅವರ ಪ್ರಯತ್ನ ಫಲಿಸಲಿಲ್ಲ. ಇದನ್ನೂ ಓದಿ: Dakshina Kannada Lok Sabha 2024: ಬಿಜೆಪಿ ಭದ್ರಕೋಟೆ ಭೇದಿಸುತ್ತಾ ಕಾಂಗ್ರೆಸ್?
ಜಾತಿವಾರು ಲೆಕ್ಕಾಚಾರ
ಮುಸ್ಲಿಂ- 6,00,000
ಕ್ರೈಸ್ತರು- 2,00,000
ಎಸ್‌ಸಿ- 4,00,000
ಇತರೆ- 6,00,000