ಚಿತ್ರದುರ್ಗ: ಸ್ವಂತ ಮಗುವನ್ನೇ ಹತ್ಯೆಗೈದು ಸೂಟ್‌ಕೇಸ್‌ನಲ್ಲಿ ಶವವಿಟ್ಟುಕೊಂಡು ತೆರಳುತ್ತಿದ್ದ ಮಹಿಳೆಯನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಐಮಂಗಲ ಠಾಣೆ ಪೊಲೀಸರು (Chitradurga Police Station) ಬಂಧಿಸಿರುವ ಘಟನೆ ನಡೆದಿದೆ.
ಗೋವಾದಿಂದ ಬೆಂಗಳೂರಿಗೆ (Goa To Bengaluru) ತೆರಳುತ್ತಿದ್ದ ಸ್ಟಾರ್ಟ್‌ಅಪ್ ಫೌಂಡರ್ ಮತ್ತು ಸಿಇಓ ಸುಚನಾ ಸೇಠ್ (Suchana Seth) ವಿರುದ್ಧ ಗೋವಾದ ಹೋಟೆಲ್‌ನಲ್ಲಿ ಮಗುವನ್ನು ಹತ್ಯೆ ಮಾಡಿರುವ ಆರೋಪ ಕೇಳಿಬಂದಿತ್ತು. ಸುಚನಾ ಸೇಠ್ ಅವರು ಶನಿವಾರ ತನ್ನ ಮಗನೊಂದಿಗೆ ಉತ್ತರ ಗೋವಾದ ಕ್ಯಾಂಡೋಲಿಮ್‌ನಲ್ಲಿರುವ ಸೋಲ್ ಬನಿಯನ್ ಗ್ರಾಂಡೆಗೆ ಭೇಟಿ ನೀಡಿದ್ದರು. ಸೋಮವಾರ ಹೋಟೆಲ್ ತೊರೆಯುವಾಗ ಒಬ್ಬಂಟಿಯಾಗಿದ್ದರು. ತಾನು ಬೆಂಗಳೂರಿಗೆ ಟ್ಯಾಕ್ಸಿ ಕಾಯ್ದಿರಿಸುವಂತೆ ಹೋಟೆಲ್ ಸಿಬ್ಬಂದಿಯನ್ನ ಕೇಳಿದ್ದಾಳೆ. ಅವರು ವಿಮಾನ ಸೌಲಭ್ಯ ಇರುವ ಸಲಹೆ ನೀಡಿದರೂ ಟ್ಯಾಕ್ಸಿ (Taxi) ತೆಗೆದುಕೊಳ್ಳುವಂತೆ ಆಕೆ ಒತ್ತಾಯಿಸಿದ್ದಾಳೆ ಎಂದು ಸಿಬ್ಬಂದಿ ತಿಳಿಸಿದ್ದಾರೆ.
Advertisement
Advertisement
ಆಕೆ ಹೋಟೆಲ್‌ನಿಂದ (Hotel) ಹೊರಗೆ ಹೋದ ಬಳಿಕ ಮಗು ಇಲ್ಲದಿದ್ದನ್ನು ಸಿಬ್ಬಂದಿ ಗಮನಿಸಿದ್ದಾರೆ. ಅಲ್ಲದೇ ಆಕೆ ತಂಗಿದ್ದ ಹೋಟೆಲ್ ಶುಚಿಗೊಳಿಸಲು ಹೋದಾಗ ರಕ್ತದ ಕಲೆಗಳು ಕಂಡುಬಂದಿವೆ. ಈ ಹಿನ್ನೆಲೆಯಲ್ಲಿ ಅನುಮಾನಗೊಂಡ ಹೋಟೆಲ್ ಸಿಬ್ಬಂದಿ, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ – ಬೆಂಗ್ಳೂರು, ಮಂಡ್ಯ ಸೇರಿ ರಾಜ್ಯದ 30 ಕಡೆ ದಾಳಿ
Advertisement
ನಂತರ ಗೋವಾ ಪೊಲೀಸರು ಹೋಟೆಲ್ ಸಿಬ್ಬಂದಿ ಕರೆಸಿದ್ದ ಟ್ಯಾಕ್ಸಿ ಡ್ರೈವರ್ ಸಂಪರ್ಕಿಸಿ ಆಕೆಯೊಂದಿಗೆ ಮಾತನಾಡಲು ಹೇಳಿದ್ದಾರೆ. ಆಕೆಯ ಮಗನ ಬಗ್ಗೆ ಕೇಳಿದಾಗ ಅವನು ಸ್ನೇಹಿತನೊಂದಿಗೆ ಇರುವುದಾಗಿ ಹೇಳಿಕೊಂಡಿದ್ದಳು. ಆತನ ವಿಳಾಸವನ್ನೂ ನೀಡಿದ್ದಳು. ಪೊಲೀಸರು ಆ ವಿಳಾಸವನ್ನ ಪರಿಶೀಲಿಸಿದಾಗ ನಕಲಿಯಾಗಿತ್ತು. ನಂತರ ಟ್ಯಾಕ್ಸಿ ಡ್ರೈವರ್‌ಗೆ ಹೈವೆಬಳಿ ಪೊಲೀಸರು ಕಂಡಾಕ್ಷಣ ಟ್ಯಾಕ್ಸಿ ನಿಲ್ಲಿಸುವಂತೆ ತಿಳಿಸಿದ್ದಾರೆ.
Advertisement
ನಂತರ ಟ್ಯಾಕ್ಸಿ ಚಾಲಕ ರಾಷ್ಟ್ರೀಯ ಹೆದ್ದಾರಿ-4ರ ಬಳಿಯ ಐಮಂಗಲ ಠಾಣೆ ಪೊಲೀಸರಿಗೆ ಆಕೆಯನ್ನ ಒಪ್ಪಿಸಿದ್ದಾನೆ. ಬಳಿಕ ಟ್ಯಾಕ್ಸಿ ತಪಾಸಣೆ ಮಾಡಿದ ಐಮಂಗಲ ಪೊಲೀಸರಿಗೆ ಟ್ಯಾಕ್ಸಿ ಡಿಕ್ಕಿಯಲ್ಲಿದ್ದ ಸೂಟ್‌ಕೇಸ್‌ನಲ್ಲಿ ಮಗುವಿನ ಶವಪತ್ತೆಯಾಗಿದೆ. ಸದ್ಯ ಮಗುವಿನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಸುಚನಾಳನ್ನ ಗೋವಾ ಪೊಲೀಸರಿಗೆ ಒಪ್ಪಿಸಿರುವುದಾಗಿ ಐಮಂಗಲ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಯಶ್ ನೋಡುವ ಕಾತುರದಲ್ಲಿ ಬೈಕ್ ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ಅಭಿಮಾನಿ ಸಾವು
ಮಾಹಿತಿ ಪ್ರಕಾರ ಸುಚನಾ ಸೇಠ್, 2021ರ AI ನೀತಿಶಾಸ್ತ್ರದಲ್ಲಿ 100 ಉತ್ತಮ ಮಹಿಳೆಯರ ಪೈಕಿ ಒಬ್ಬರು. ಡೇಟಾ ಸೈನ್ಸ್ ಮತ್ತು ಸ್ಟಾರ್ಟ್ಅಪ್ ಉದ್ಯಮಗಳಲ್ಲಿ 12 ವರ್ಷಗಳ ಅನುಭವ ಹೊಂದಿರುವುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ಅಶ್ಲೀಲ ಪದ ಬಳಸುತ್ತಿದ್ದ, ಖಾಸಗಿ ಅಂಗ ಮುಟ್ಟುತ್ತಿದ್ದ – ಪ್ರಾಧ್ಯಾಪಕನ ವಿರುದ್ಧ 500 ವಿದ್ಯಾರ್ಥಿನಿಯರಿಂದ ಮೋದಿ ಕಚೇರಿಗೆ ಪತ್ರ