ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಫೆ.17ರಂದು ರೈತರಿಂದ ʻಬೆಂಗಳೂರು ಚಲೋʼ

Public TV
1 Min Read
Farmers

ಬೆಳಗಾವಿ: ಬೆಂಬಲ ಬೆಲೆ ಖಾತ್ರಿಪಡಿಸುವ ಕಾನೂನು ಜಾರಿ ಸೇರಿದಂತೆ ವಿವಿಧ ಬೇಡಿಕೆಗೆಗಳ ಈಡೇರಿಕೆಗೆ ಆಗ್ರಹಿಸಿ ವಿವಿಧ ರಾಜ್ಯಗಳ ರೈತರು ʻದೆಹಲಿ ಚಲೋʼ ಪ್ರತಿಭಟನೆ (Dehli Chalo) ಆರಂಭಿಸಿದ್ದಾರೆ. ಈ ಬೆನ್ನಲ್ಲೇ ರಾಜ್ಯದಲ್ಲಿಯೂ ರೈತರು (Farmers) ತಮ್ಮ ಬೇಡಿಕೆಗಳನ್ನು ಒತ್ತಾಯಿಸಿ ಬೃಹತ್‌ ಸಮಾವೇಶ ಹಮ್ಮಿಕೊಂಡಿದ್ದಾರೆ.

Farmers Protest Delhi 1

ಕರ್ನಾಟಕ ರಾಜ್ಯ ರೈತ ಸಂಘಗಳ ಒಕ್ಕೂಟ ಆಶ್ರಯದಲ್ಲಿ (Farmers Association) ವಿವಿಧ ಬೇಡಿಕೆಗೆ ಆಗ್ರಹಿಸಿ ಫೆ.17ರಂದು ʻಬೆಂಗಳೂರು ಚಲೋʼ (Bengaluru Chalo) ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶಕ್ಕೆ ಬರುವ ರೈತರಿಗೆ ಆಯಾ ಜಿಲ್ಲೆಗಳಿಂದ ಉಚಿತ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘಗಳ ಒಕ್ಕೂಟ ಅಧ್ಯಕ್ಷ ಬೀರಪ್ಪ ದೇಶನೂರ ತಿಳಿಸಿದ್ದಾರೆ. ಇದನ್ನೂ ಓದಿ: ಅಜ್ಜನ ಕನಸು ನೆರವೇರಿಸಲು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಲಾಲ್ ಬಹದ್ದೂರ್ ಶಾಸ್ತ್ರಿ ಮೊಮ್ಮೊಗ

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಫೆ.17ರಂದು ರೈತರು ತಮ್ಮ ಬೇಡಿಕೆಗಳನ್ನು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಲಿದ್ದಾರೆ. ಈ ಬೃಹತ್‌ ಸಮಾವೇಶದಲ್ಲಿ ರಾಜ್ಯಾದ್ಯಂತ ಸುಮಾರು 15 ಸಂಘಟನೆಗಳ ರೈತ ಮುಖಂಡರು, ರೈತ ಮಹಿಳೆಯರು, ವಿವಿಧ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ಫೆ.16ರಂದು ಸಂಜೆ ಪ್ರತಿಯೊಬ್ಬ ರೈತರೂ ತಮ್ಮ ಜಿಲ್ಲೆಯ ಹಾಗೂ ತಾಲೂಕು, ಪಟ್ಟಣ, ಗ್ರಾಮಗಳಿಂದ ಬೆಂಗಳೂರಿಗೆ ಬರಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ದೆಹಲಿ ಚಲೋ ಪ್ರತಿಭಟನೆ ನಿಗ್ರಹಕ್ಕೆ ಯತ್ನ – ಪೊಲೀಸರ ವರ್ತನೆ ಖಂಡಿಸಿ ಶುಕ್ರವಾರ ದೇಶಾದ್ಯಂತ ರಸ್ತೆ ತಡೆ

Share This Article