ಹುಬ್ಬಳ್ಳಿ: ಸಿಬ್ಬಂದಿ ವೇತನ ಅನುದಾನಕ್ಕೆ ಒತ್ತಾಯಿಸಿ ಖಾಸಗಿ ಐಟಿಐ ಸಂಘಟನೆಯಿಂದ ಬೆಂಗಳೂರು ಚಲೋ ಹೋರಾಟ ಹಮ್ಮಿಕೊಳ್ಳಲಾಗಿದೆ.
ಸಂಘಟನೆ ನೂರಾರು ಸದಸ್ಯರು ವಿವಿಧ ಬೇಡಿಕೆಗೆ ಆಗ್ರಹಿಸಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡಿದ್ದಾರೆ. ನಗರದ ಮೂರುಸಾವಿರ ಮಠದಿಂದ ಆರಂಭಗೊಂಡಿರುವ ಈ ಪಾದಯಾತ್ರೆ ಒಟ್ಟು 15 ದಿನಗಳ ಕಾಲ ನಡೆಯಲಿದೆ. ಮಾರ್ಗ ಮಧ್ಯೆ ವಿವಿಧ ಜಿಲ್ಲೆಯ ಸಿಬ್ಬಂದಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ಇದನ್ನೂ ಓದಿ: ಅವಳಿ ಮಕ್ಕಳಿಗೆ ಜನ್ಮ ನೀಡಿದ ನಟಿ ಅಮೂಲ್ಯ
Advertisement
Advertisement
ಈ ಬಗ್ಗೆ ಮಾತನಾಡಿದ ಒಕ್ಕೂಟದ ರಾಜ್ಯ ಸಂಚಾಲಕ ಪ್ರದೀಪ್, ಸರ್ಕಾರ ಈ ಹಿಂದೆ ಐಟಿಐ ಕಾಲೇಜುಗಳಿಗೆ ಹಾಗೂ ಸಿಬ್ಬಂದಿಗೆ ನೀಡುತ್ತಿದ್ದ ಅನುದಾನವನ್ನು ನಿಲ್ಲಿಸಿದೆ. ಇದರಿಂದ ನೂರಾರು ಕುಟುಂಬಗಳು ಬೀದಿಗೆ ಬಂದಿವೆ. ಈ ಪಾದಯಾತ್ರೆ ಬೆಂಗಳೂರು ತಲುಪುವುದರೊಳಗಾಗಿ ಸರ್ಕಾರ ನಮ್ಮ ಬೇಡಿಕೆಯನ್ನು ಪೂರೈಸಬೇಕು. ಇಲ್ಲದಿದ್ದರೆ ಬೆಂಗಳೂರಿನಲ್ಲಿ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಮೈಕ್ರೋಸಾಫ್ಟ್ ಸಿಇಒ ಪುತ್ರ ನಿಧನ!