ಬೆಂಗಳೂರು: ಗುರುವಾರ ನಿಗದಿಯಾಗಿರುವಂತೆಯೇ ನಮ್ಮ ಬೆಂಗಳೂರು ಚಲೋ (Bengaluru Chalo) ಕಾರ್ಯಕ್ರಮ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಕಾರ್ಯರ್ಶಿ ವಿಜಯ್ ಭಾಸ್ಕರ್ ಹೇಳಿದ್ದಾರೆ.
38 ತಿಂಗಳ ಹಿಂಬಾಕಿ ಪೈಕಿ 26 ತಿಂಗಳ ಹಿಂಬಾಕಿ ನೀಡುವುದಾಗಿ ಸರ್ಕಾರ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡಿದೆ. ಡಿಸೆಂಬರ್ 13 ರಿಂದ ಚರ್ಚೆಗೆ ಕರೆಯುತ್ತೇವೆ ಎಂದು ಹೇಳಿದರೂ ಇಲ್ಲಿಯವರೆಗೆ ಕರೆದಿಲ್ಲ ಎಂದು ಸಿಟ್ಟು ಹೊರಹಾಕಿದರು. ಇದನ್ನೂ ಓದಿ: Transport Strike – 38ರ ಬದಲು 26 ತಿಂಗಳ ಹಿಂಬಾಕಿಗೆ ಸರ್ಕಾರ ಒಪ್ಪಿಗೆ
ನಮ್ಮ ಪ್ರಕಾರ 27 ತಿಂಗಳ ಹಿಂಬಾಕಿಗೆ ಕತ್ತರಿ ಹಾಕಿದ್ದಾರೆ. ಹೀಗಾಗಿ ಬೆಂಗಳೂರು ಚಲೋ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ನಂತರ ಮುಂದೇನು ಮಾಡಬೇಕು ಎಂಬ ತೀರ್ಮಾನ ಮಾಡುತ್ತೇವೆ ಹೀಗಾಗಿ ಎಲ್ಲಾ ಸಾರಿಗೆ ನೌಕರರು ಮುಷ್ಕರದಲ್ಲಿ(Transport Strike) ಭಾಗಿಯಾಗಬೇಕು ಎಂದು ಮನವಿ ಮಾಡಿದರು.
38 ತಿಂಗಳ ಹಿಂಬಾಕಿ, ವೇತನ ಪರಿಷ್ಕರಣೆಗೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಗುರುವಾರ ಬೆಂಗಳೂರು ಚಲೋಗೆ ಕರೆ ಕೊಟ್ಟಿದೆ. ಫ್ರೀಡಂಪಾರ್ಕ್‌ನಲ್ಲಿ ಬೆಳಗ್ಗೆ 10 ಗಂಟೆಯಿಂದ 4 ಗಂಟೆವರೆಗೆ ಉಪವಾಸ ಸತ್ಯಾಗ್ರಹ ನಡೆಯಲಿದೆ. 4 ಗಂಟೆ ಒಳಗೆ ಸರ್ಕಾರ ಸಮಸ್ಯೆ ಈಡೇರಿಸುವ ಭರವಸೆ ನೀಡದೇ ಹೋದರೆ ಬಂದ್ ನಡೆಸುವ ಎಚ್ಚರಿಕೆ ನೀಡಿದ್ದಾರೆ.

