ಬೆಂಗಳೂರು: ಹಿರಿಯ ಸಂಶೋಧಕ ಡಾ. ಎಂ. ಚಿದಾನಂದಮೂರ್ತಿ ಅವರ ನಿಧನಕ್ಕೆ ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ನಾಡಿನ ಹಿರಿಯ ಸಾಹಿತಿ, ಇತಿಹಾಸಜ್ಞ, ಹೋರಾಟಗಾರ, ವಿಶೇಷವಾಗಿ ಹಂಪೆಯ ಜೊತೆ ಬಹಳ ಆಪ್ತತೆ ಬೆಳೆಸಿಕೊಂಡಿದ್ದ, ಕನ್ನಡ ನಾಡಿನ ನೆಲ-ಜಲ-ಭಾಷೆ-ಸಂಸ್ಕೃತಿಯ ಕಾವಲುಗಾರನ ರೀತಿ ತನ್ನ ಜೀವನವನ್ನೇ ಮುಡುಪಾಗಿಟ್ಟ ಚಿದಾನಂದಮೂರ್ತಿಗಳು ಇನ್ನಿಲ್ಲ ಎಂಬ ಸುದ್ದಿ ಕೇಳಿ ಆಘಾತವಾಗಿದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಖ್ಯಾತ ಸಾಹಿತಿ ಡಾ. ಎಂ ಚಿದಾನಂದಮೂರ್ತಿ ಇನ್ನಿಲ್ಲ
ಅವರ ಆತ್ಮಕ್ಕೆ ಸದ್ಗತಿ ದೊರಕಲಿ. ಎಂದು ಸಚಿವ ಸುರೇಶ್ ಕುಮಾರ್ ಚಿದಾನಂದಮೂರ್ತಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ನಾಡಿನ ಹಿರಿಯ ಸಾಹಿತಿ, ಇತಿಹಾಸಜ್ಞ, ಹೋರಾಟಗಾರ, ವಿಶೇಷವಾಗಿ ಹಂಪೆಯ ಜೊತೆ ಬಹಳ ಆಪ್ತತೆ ಬೆಳೆಸಿಕೊಂಡಿದ್ದ, ಕನ್ನಡ ನಾಡಿನ ನೆಲ-ಜಲ-ಭಾಷೆ-ಸಂಸ್ಕೃತಿಯ ಕಾವಲುಗಾರನ ರೀತಿ ತನ್ನ ಜೀವನವನ್ನೇ ಮುಡುಪಾಗಿಟ್ಟ ಶ್ರೀ ಎಂ ಚಿದಾನಂದಮೂರ್ತಿಗಳು ಇನ್ನಿಲ್ಲ ಎಂಬ ಸುದ್ದಿ ಕೇಳಿ ಆಘಾತವಾಗಿದೆ. ಅವರ ಆತ್ಮಕ್ಕೆ ಸದ್ಗತಿ ದೊರಕಲಿ. pic.twitter.com/D1rViTsAns
— S.Suresh Kumar (@nimmasuresh) January 11, 2020