ಬೆಂಗಳೂರು: ಯಾವುದೇ ಪಕ್ಷದ ಚಿಹ್ನೆ ಬಳಸದಂತೆ ಸಿಎಂ ಇಬ್ರಾಹಿಂಗೆ (CM Ibrahim) ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ.
ಹೆಚ್‍ಡಿಡಿ ಕುಟುಂಬದ ವಿರುದ್ಧವೇ ಸಿಎಂ ಇಬ್ರಾಹಿಂ ತೊಡೆ ತಟ್ಟಿದರು. ಈ ಹಿನ್ನೆಲೆಯಲ್ಲಿ ಹೆಚ್.ಡಿ ದೇವೇಗೌಡರ (HD Devegowda) ನೇತೃತ್ವದಲ್ಲಿ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸಿ ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿತ್ತು. ಆದರೆ ಜೆಡಿಎಸ್‍ನಿಂದ (JDS) ಉಚ್ಛಾಟನೆಯಾದರೂ ಸಿಎಂ ಇಬ್ರಾಹಿಂ ಜೆಡಿಎಸ್ ಪಕ್ಷದ ಚಿನ್ನೆ ಬಳಸುತ್ತಿದ್ದರು. ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು.
ಇದೀಗ ಯಾವುದೇ ಪಕ್ಷದ ಚಿಹ್ನೆ ಬಳಸದಂತೆ ಆದೇಶ ನೀಡುವುದರ ಜೊತೆಗೆ ಜೆಡಿಎಸ್ ಪಕ್ಷದ ಚಿಹ್ನೆ, ಲೆಟರ್ ಹೆಡ್ ಬಳಕೆ ಮಾಡುವಂತಿಲ್ಲ. ಹಾಗೂ ಪಕ್ಷದ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸುವಂತಿಲ್ಲ. ಇಷ್ಟು ಮಾತ್ರವಲ್ಲದೇ ಪದಾಧಿಕಾರಿಗಳನ್ನೂ ನೇಮಕ ಮಾಡುವಂತಿಲ್ಲ ಎಂದು ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ. ಇದನ್ನೂ ಓದಿ: ಜ.22 ರಂದು ಅಯೋಧ್ಯೆಗೆ ಹೋಗುತ್ತಿದ್ದು, ಬರ್ತ್ ಡೇ ಆಚರಿಸಿಕೊಳ್ತಿಲ್ಲ: ನಿಖಿಲ್