ಬೆಂಗಳೂರು: ಎರಡನೇ ಸುತ್ತಿನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವಲ್ಲಿ ಬೆಂಗಳೂರು ನಗರ ಜಿಲ್ಲೆಯು ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಬಿಬಿಎಂಪಿ ಹೊರತುಪಡಿಸಿ 10,34,184 ಜನರಿಗೆ ಲಸಿಕೆ ನೀಡಿದ್ದು, ನೂರಕ್ಕೆ ನೂರರಷ್ಟು ಗುರಿ ಸಾಧಿಸಿದ ಜಿಲ್ಲೆಯಾಗಿದೆ ಎಂದು ಜಿಲ್ಲಾಧಿಕಾರಿ ಜೆ. ಮಂಜುನಾಥ್ ತಿಳಿಸಿದರು.
Advertisement
ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಕಂದಾಯ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರ ಜಿಲ್ಲೆಯಲ್ಲಿ ಮೊದಲ ಸುತ್ತಿನಲ್ಲಿ 13,26,255 ಜನರಿಗೆ ಲಸಿಕೆ ಹಾಕಲಾಗಿದ್ದು, ಶೇ.129 ಸಾಧನೆಯಾಗಿದೆ. ಇಡೀ ರಾಜ್ಯದಲ್ಲಿ ಗುರಿ ಮೀರಿ ಸಾಧನೆಗೈದ ಏಕೈಕ ಜಿಲ್ಲೆಯಾಗಿದೆ ಎಂದರು. ಇದನ್ನೂ ಓದಿ: ಮತಾಂತರ ಕಾಯ್ದೆ ವಿಧಾನಸಭೆಯಲ್ಲಿ ಪಾಸ್: ಕಟೀಲ್ ಸ್ವಾಗತ
Advertisement
ಬಿಬಿಎಂಪಿ ಕೋವಿಡ್19 ವಾರ್ ರೂಂ ಬುಲೆಟಿನ್
22-2-2021
????ಒಟ್ಟು ಸೋಂಕಿತ ಪ್ರಕರಣಗಳು:12,60,692
????ಒಟ್ಟು ಗುಣಮುಖರಾದವರು:12,38,573
????ಒಟ್ಟು ಸಾವಿನ ಪ್ರಕರಣಗಳು:16,379
ಕಳೆದ 24 ಗಂಟೆಗಳು
????ಒಟ್ಟು ಸೋಂಕಿತ ಪ್ರಕರಣಗಳು:211
????ಒಟ್ಟು ಗುಣಮುಖರಾದವರು:162
????ಒಟ್ಟು ಸಾವಿನ ಪ್ರಕರಣಗಳು:0 pic.twitter.com/Aq2huN4DXW
— Gaurav Gupta (@BBMPCOMM) December 23, 2021
Advertisement
ಆರೋಗ್ಯ ಇಲಾಖೆಯ ವೈದ್ಯರು-ಸಿಬ್ಬಂದಿ, ಜಿಲ್ಲಾ ಪಂಚಾಯತ್, ಆಶಾ ಕಾರ್ಯಕರ್ತೆಯರು, ಕಂದಾಯ ಇಲಾಖೆ ಸಿಬ್ಬಂದಿ ಹಾಗೂ ಮತ್ತಿತರ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಹಾಗೂ ಪ್ರತಿ ಗ್ರಾಮ ಪಂಚಾಯಿತಿಗಳ ಮನೆ ಮನೆಗೆ ಹೋಗಿ ಲಸಿಕೆ ಹಾಕಿಸಿದ ಕಾರಣ ಈ ಯಶಸ್ಸು ಸಾಧಿಸಲು ಸಾಧ್ಯವಾಗಿದೆಯೆಂದು ತಿಳಿಸಿದ್ದಾರೆ. ಇದನ್ನೂ ಓದಿ: ಗೋವು ನಮಗೆ ತಾಯಿ, ಪವಿತ್ರ: ನರೇಂದ್ರ ಮೋದಿ
Advertisement
Covid numbers in Karnataka today:
◾New cases in State: 299
◾New cases in B’lore: 210
◾Positivity rate: 0.23%
◾New Omicron cases today: 12
◾Total Omicron cases in State: 31
◾Deaths:02 (B’lore- 01)
◾Tests: 1,27,098#Omicron #COVID19
— Dr Sudhakar K (@mla_sudhakar) December 23, 2021
ಹೊಸ ವರ್ಷದ ಹೊಸ್ತಿಲಲ್ಲಿರುವ ನಾವುಗಳು ಸಂಭ್ರಮ ಆಚರಿಸಲು ಮುಂದಾಗಿದ್ದು, ಸಾರ್ವಜನಿಕರು ಅನಾವಶ್ಯಕವಾಗಿ ಗುಂಪು ಸೇರುವುದನ್ನು ಕಡಿಮೆ ಮಾಡಬೇಕು. ಎರಡು ಡೋಸ್ ಮುಗಿದಿದೆಯೆಂದು ಮೈಮರೆಯದೆ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದರು. ಇದನ್ನೂ ಓದಿ: ವಿಧಾನಸಭೆಯಲ್ಲಿ ಮತಾಂತರ ತಡೆ ವಿಧೇಯಕ ಅಂಗೀಕಾರ