ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Bengaluru Rains) ಸತತ ನಾಲ್ಕು ದಿನಗಳಿಂದ ಮಳೆಯಾರ್ಭಟ ಮುಂದುವರಿದಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ, ಬುಧವಾರ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ನಾಳೆ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಭಾರೀ ಮಳೆಗೆ ನಿರ್ಮಾಣ ಹಂತದ ಕಟ್ಟಡ ಕುಸಿತ; ಮೂವರು ಕಾರ್ಮಿಕರ ಸಾವು
Advertisement
Advertisement
ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಐಟಿಐ, ಇಂಜಿನಿಯರ್ಗಳಿಗೆ ರಜೆ ಇರುವುದಿಲ್ಲ ಎಂದು ಡಿಸಿ ಸ್ಪಷ್ಟಪಡಿಸಿದ್ದಾರೆ.
Advertisement
ಪ್ರಕಟಣೆಯಲ್ಲಿ ಏನಿದೆ?
ಮಳೆ ಹಿನ್ನೆಲೆಯಲ್ಲಿ ಬುಧವಾರ ಮುಂಜಾಗ್ರತಾ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ/ ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಿ ಡಿಸಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಬಾಗಲಕೋಟೆ| ರಸ್ತೆಗಳಲ್ಲಿ ಶೌಚಗುಂಡಿ, ಒಳಚರಂಡಿ ತುಂಬಿ ಮನೆಗೆ ನುಗ್ಗುತ್ತಿವೆ ಕೊಳಚೆ ನೀರು
Advertisement
ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್, ಐಟಿಐಗಳಿಗೆ ರಜೆ ಘೋಷಿಸಿರುವುದಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಇನ್ನೇನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕಾಲೇಜುಗಳಲ್ಲಿ ಪಾಠ ಮಾಡುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ/ ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸಬೇಕು ಎಂದು ಸೂಚಿಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತಿ ವಹಿಸಬೇಕು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳಬೇಕು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.