Bengaluru City
ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಕೊಲೆ

ಬೆಂಗಳೂರು: ನಡು ರಸ್ತೆಯಲ್ಲಿ ರೌಡಿಶೀಟರ್ ನನ್ನು, ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಲಗ್ಗೆರೆಯಲ್ಲಿ ನಡೆದಿದೆ.
ಕೊಲೆಯಾದ ರೌಡಿಶೀಟರ್ ಸೀನಾ ಕರಿಸೀನಾ ಎಂದು ಗುರುತಿಸಲಾಗಿದೆ. ಏಕಾಏಕಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಘಟನೆ ಬೆಂಗಳೂರಿನ ಲಗ್ಗೆರೆಯಲ್ಲಿ ನಡೆದಿದೆ. ಸ್ಥಳಕ್ಕೆ ರಾಜಗೋಪಾಲ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಕೊಲೆಯಾದ ರೌಡಿಶೀಟರ್ ಬಿಎಸ್ಪಿ ಮುಖಂಡ ಸ್ಲಂ ಭರತನ ವಿರುದ್ಧ ದೂರು ಕೊಟ್ಟಿದ್ದನು. ಭರತನ ಸಹಚರರಿಂದಲೇ ಕೊಲೆ ಆಗಿರಬಹುದೆಂಬ ಶಂಕೆಯಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೇ ರಾಜಕೀಯವಾಗಿ ಗುರುತಿಸಿಕೊಂಡು ಪೊಲೀಸ್ ಇನ್ಫರ್ಮಾರಾಗಿ ಕೆಲಸ ಮಾಡುತ್ತಿದ್ದನು ಎಂದು ಹೇಳಲಾಗುತ್ತಿದೆ.
ಮೃತ ಸೀನಾ ರಾಜಗೋಪಾಲ ನಗರದ ಕಸ್ತೂರಿ ಬಡಾವಣೆಯಲ್ಲಿ ಮನೆ ಕಟ್ಟಿಸುತ್ತಿದ್ದನು. ಈ ವೇಳೆ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಆರು ಮಂದಿ ಬಂದು ಏಕಾಏಕಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಆರೋಪಿಗಳ ಹುಡುಕಾಟಕ್ಕೆ ಆರು ಸ್ಪೆಷಲ್ ಟೀಂ ರಚನೆ ಮಾಡಲಾಗಿದೆ. ಆರೋಪಿಗಳ ಬಗ್ಗೆ ಮಾಹಿತಿ ಇದೇ ಅದಷ್ಟು ಬೇಗ ಆರೋಪಿಗಳನ್ನ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
